ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ನಿಧನಕ್ಕೆ ಕನ್ನಡ ನಾಡು ಕಂಬನಿ ಮಿಡಿದಿದೆ. ನಟಿಯ ನಿಧನಕ್ಕೆ ಕನ್ನಡ ಚಿತ್ರರಂಗ ಸೇರಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
“ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JuGWeyX4Ce
— B.S. Yediyurappa (@BSYBJP) July 26, 2021
ಇದನ್ನೂ ಓದಿ: ಹಿರಿಯ ನಟ ವೈಜನಾಥ ಬಿರಾದಾರ ಅವರಿಗೆ ‘ಪದ್ಮಶ್ರೀ’ ನೀಡಲು ಆಗ್ರಹಿಸಿ ಆನ್‌ಲೈನ್ ಅಭಿಯಾನ
ನನ್ನಿಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನ ಅತೀವ ದುಃಖ ತಂದಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ.
ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ.
ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು. pic.twitter.com/caogjkkWgw
— Siddaramaiah (@siddaramaiah) July 26, 2021
’”ಅಭಿನಯ ಶಾರದೆ’ ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ. ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ.ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ” ಎಂದಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
'ಅಭಿನಯ ಶಾರದೆ' ಜಯಂತಿ ಅವರು ನಿಧನರಾದ ಸಂಗತಿ ಬೇಸರ ತರಿಸಿದೆ.
ಕನ್ನಡ, ತೆಲಗು, ತಮಿಳು, ಮಲಯಾಳಂ, ಹಿಂದಿಯಲ್ಲಿ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಜಯಂತಿ ಅವರು ದಕ್ಷಿಣ ಭಾರತದ ಪ್ರಖ್ಯಾತ ನಟಿ ಎನಿಸಿಕೊಂಡಿದ್ದರು. ಅವರು ಕನ್ನಡಿಗರೆಂಬುದೇ ನಮ್ಮ ಹೆಮ್ಮೆ. ಅವರಿಗೆ ಸದ್ಗತಿ ದೊರೆಯಲಿ.ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ. pic.twitter.com/yRnQwhsp0w— H D Kumaraswamy (@hd_kumaraswamy) July 26, 2021
“ಓಬವ್ವ ಅಂದರೆ ನಮಗೆ ನೆನಪಿಗೆ ಬರುವುದು ಅಭಿನಯ ಶಾರದೆ ಜಯಂತಿ ಅಮ್ಮನವರೇ.. ಅಷ್ಟು ಮನೋಘ್ನ ಅಭಿನೆತ್ರಿಯವರನ್ನು.. ನಾವು ಕಳೆದುಕೊಂಡಿದ್ದೇವೆ.. ಆದರೆ ಅವರ ಚಿತ್ರಗಳು ಎಂದೆಂದೂ ಜೀವಂತವಾಗಿರುತ್ತದೆ. ಓಂ ಶಾಂತಿ” ಎಂದು ನಿರ್ದೇಶಕ ಪವನ್ ಕುಮಾರ್ ನಮನ ಸಲ್ಲಿಸಿದ್ದಾರೆ.
ಓಬವ್ವ ಅಂದರೆ ನಮಗೆ ನೆನಪಿಗೆ ಬರುವುದು ಅಭಿನಯ ಶಾರದೆ ಜಯಂತಿ ಅಮ್ಮನವರೇ.. ಅಷ್ಟು ಮನೋಘ್ನ ಅಭಿನೆತ್ರಿಯವರನ್ನು.. ನಾವು ಕಳೆದುಕೊಂಡಿದ್ದೇವೆ.. ಆದರೆ ಅವರ ಚಿತ್ರಗಳು ಎಂದೆಂದೂ ಜೀವಂತವಾಗಿರುತ್ತದೆ. ಓಂ ಶಾಂತಿ ?? pic.twitter.com/Vev0z2qF1v
— Pavan Wadeyar (@PavanWadeyar) July 26, 2021
ನಟಿ ಜಯಂತಿ ಜೊತೆಗೆ ತೆರೆ ಹಂಚಿಕೊಂಡಿರುವ ನಟ ಜಗ್ಗೇಶ್ ತಮ್ಮ ನಡುವಿನ ಸಂಬಂಧವನ್ನು ಮೆಲುಕು ಹಾಕಿದ್ದು ಹೀಗೆ. “ನನ್ನ ಬಾಲ್ಯದಿಂದ ನಾನು ತುಂಬ ಇಷ್ಟಪಟ್ಟ ನಟಿಯರಲ್ಲಿ ಭಾರತಿ ಅಮ್ಮ ಹಾಗು ಜಯಂತಿ ಅಮ್ಮ.. ಭಾರತಿ ಅಮ್ಮನ ಜೊತೆ ನಟಿಸಲು ನನ್ನ ಅವಕಾಶ ಸಿಗಲಿಲ್ಲಾ ಆದರೆ ಜಯಂತಿ ಅಮ್ಮನ ಜೊತೆ ಅನೇಕ ಚಿತ್ರನಟಿಸಿದ ಸಮಾಧಾನ ಸಂತೋಷ ನನ್ನ ಕಲಾಬದುಕಿಗೆ.. ಅವರ ಜೊತೆ ಪಟೇಲ ನಟಿಸುವಾಗ ಪಾಂಡುಪುರದ ಚಿಕ್ಕಾಡೆ ಗ್ರಾಮದಲ್ಲಿ ಶೂಟಿಂಗ್ ವಿರಾಮ ಸಿಕ್ಕು ಸಮಯಕಳೆವ ಅವಕಾಶ ಸಿಕ್ಕಿತು ಆಗ ನನ್ನ ಸಿನಿಮಪಯಣ ಅವರ ಜೊತೆ ಹಂಚಿಕೊಂಡ ಸಮಯ ಮರೆಯಲಾಗದ ಕ್ಷಣ” ಎಂದಿದ್ದಾರೆ.
ಬಹುಭಾಷಾ ನಟಿ, ಅಭಿನಯ ಶಾರದೆ ಜಯಂತಿ ಅಮ್ಮಾವ್ರು ಇಂದು ದೈಹಿಕವಾಗಿ ನಮ್ಮನ್ನು ಅಗಲಿದ್ದಾರೆ. ದೇವರು ಅವರ ಕುಟುಂಬಕ್ಕೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಭಾರತೀಯ ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ pic.twitter.com/zuuliW4fg2
— Darshan Thoogudeepa (@dasadarshan) July 26, 2021
ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ್, ಎಚ್.ಸಿ.ಮಹಾದೇವಪ್ಪಾ, ನಟ ದರ್ಶನ್, ಉಪ್ರೇಂದ್ರ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76) ವಿಧಿವಶ


