Homeಮುಖಪುಟಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

- Advertisement -
- Advertisement -

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಅಸ್ಸಾಂನ ಆರು ಪೊಲೀಸರು ಹತ್ಯೆಯಾಗಿದ್ದಾರೆ ಎಂದು ಸಿಎಂ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಇನ್ನೊಂದೆಡೆ ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ.

ಆರು ಪೊಲೀಸರ ಹತ್ಯೆಯೊಂದಿಗೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಚಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗೆ ಕೂಡ ಗುಂಡು ತಗುಲಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಗೃಹ ಸಚಿವ ಅಮಿತ್‌ ಶಾರವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಮಿಜೋರಾಂ ಪೊಲೀಸರು ಅಸ್ಸಾಂ ಪೊಲೀಸ್ ಸಿಬ್ಬಂದಿಯ ವಿರುದ್ಧ ಲೈಟ್ ಮೆಷಿನ್ ಗನ್ ಬಳಸಿದ್ದಾರೆ ಎಂಬುದಕ್ಕೆ ಸ್ಪಷ್ಟ ಸಾಕ್ಷ್ಯಗಳು ಸಿಕ್ಕಿವೆ. ಇದು ದುಃಖಕರ, ದುರದೃಷ್ಟಕರ. ಇದು ಅವರ ಉದ್ದೇಶ ಮತ್ತು ಪರಿಸ್ಥಿತಿಯನ್ನು ತಿಳಿಸುತ್ತದೆ” ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿದ್ದಾರೆ.

ಮಿಜೋರಾಂ ರಾಜ್ಯವು ಲೈಲಾಪುರದಲ್ಲಿ ರಿಸರ್ವ್ ಫಾರೆಸ್ಟ್ ಪ್ರದೇಶವನ್ನು ನಾಶಪಡಿಸಿ ರಸ್ತೆ ನಿರ್ಮಿಸುತ್ತಿದೆ ಮತ್ತು ಸಶಸ್ತ್ರ ಶಿಬಿರವನ್ನು ಸ್ಥಾಪಿಸುತ್ತಿದೆ ಎಂದು ಅಸ್ಸಾಂ ಆರೋಪಿಸಿದೆ. ಅಲ್ಲಿನ ದುಷ್ಕರ್ಮಿಗಳು ತಮ್ಮ ಪೊಲೀಸ್ ಪಡೆಗಳ ಮೇಲೆ ಮತ್ತು ಮಿಜೋರಾಂ ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಅಸ್ಸಾಂ ತಿಳಿಸಿದೆ.

ಅಸ್ಸಾಂ ಪೊಲೀಸರು ಕೊಲಸಿಬ್ ಗಡಿಯನ್ನು ದಾಟಿ ಪೊಲೀಸ್ ಪೋಸ್ಟ್‌ ಮೇಲೆ ದಾಳಿ ನಡೆಸಿದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಅಲ್ಲದೆ ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳ ಮೆಲೂ ಅಸ್ಸಾಂ ಪೊಲೀಸರು ಗುಂಡು ಹಾರಿಸಿದರು ಎಂದು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ.

ಗಡಿ ವಿವಾದವೇನು?

ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೋಲಾಸಿಬ್ ಮತ್ತು ಮಾಮಿತ್ ಅಸ್ಸಾಂನ ಕ್ಯಾಚರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಈ ಪ್ರದೇಶವು ಹಲವು ವರ್ಷಗಳಿಂದ ಘರ್ಷಣೆಯಲ್ಲಿ ಮುಳುಗಿದೆ. ಸ್ಥಳೀಯರು ಮತ್ತು ಭದ್ರತಾ ಪಡೆಗಳು ಒಳನುಸುಳುವಿಕೆ ಬಗ್ಗೆ ಪದೇ ಪದೇ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿವೆ.

ಗಡಿ ಗುರುತಿಸುವಿಕೆಯನ್ನು ಎದುರಿಸಲು ಮಿಜೋರಾಂ ಸರ್ಕಾರ ಗಡಿ ಆಯೋಗವನ್ನು ರಚಿಸಿದೆ. ಅಸ್ಸಾಂ ರಾಜ್ಯವು ಮೇಘಾಲಯ ಮತ್ತು ಅರುಣಾಚಲ ಪ್ರದೇಶದೊಂದಿಗೆ ಗಡಿ ವಿವಾದಗಳನ್ನು ಹೊಂದಿದೆ.


ಇದನ್ನೂಓದಿ; ಜನಸ್ಪಂದಿ ಜನಸಂಖ್ಯಾ ನೀತಿ ವರ್ಸ್‌ಸ್ ದಮನಕಾರಿ ಜನಸಂಖ್ಯಾ ನೀತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...