Homeಮುಖಪುಟಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

ಪದ್ಮ ಪ್ರಶಸ್ತಿ: ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರನ್ನು ಶಿಫಾರಸ್ಸು ಮಾಡಲಿರುವ ದೆಹಲಿ ಸರ್ಕಾರ

- Advertisement -
- Advertisement -

ಈ ವರ್ಷದ ಪದ್ಮ ಪ್ರಶಸ್ತಿಗಾಗಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಮಂಗಳವಾರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ವರ್ಷದ ಪದ್ಮ ಪ್ರಶಸ್ತಿಗಳಿಗೆ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಲು ದೆಹಲಿ ಸರ್ಕಾರ ನಿರ್ಧರಿಸಿದೆ. ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಮತ್ತು ಅವರನ್ನು ಗೌರವಿಸಲು ಬಯಸುತ್ತೇವೆ” ಎಂದು ಹೇಳಿದ್ದಾರೆ.

“ಸಾರ್ವಜನಿಕರು ಈ ಹೆಸರುಗಳನ್ನು ನಮಗೆ ತಿಳಿಸುತ್ತಾರೆ. ಆಗಸ್ಟ್ 15 ರೊಳಗೆ ಜನರು ತಮ್ಮ ಮೇಲ್‌ಗಳನ್ನು [email protected] ಗೆ ಕಳುಹಿಸಬಹುದು” ಎಂದು ದೆಹಲಿ ಮುಖ್ಯಮಂತ್ರಿ ಹೇಳಿದ್ದಾರೆ.

“ದೆಹಲಿ ಸರ್ಕಾರವು ಪರಿಶೀಲನಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ಮುಂದಿನ 15 ದಿನಗಳಲ್ಲಿ ತಮ್ಮ ಆಯ್ಕೆಯನ್ನು ದೆಹಲಿ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ. ಅಂತಿಮ ಹೆಸರುಗಳನ್ನು ಒಕ್ಕೂಟ ಸರ್ಕಾರಕ್ಕೆ ಕಳುಹಿಸಲಾಗುವುದು” ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಪದ್ಮಶ್ರಿ ಪ್ರಶಸ್ತಿ ನೀಡಿ ಅಭಿಯಾನ: ವೈಜನಾಥ ಬಿರಾದಾರರವರ ಎರಡು ಹಾಸ್ಯ ‘ಸ್ವಗತಗಳು’

ಪದ್ಮ ಪ್ರಶಸ್ತಿಗಳಿಗೆ (ಪದ್ಮವಿಭೂಷಣ, ಪದ್ಮಭೂಷಣ್ ಮತ್ತು ಪದ್ಮಶ್ರೀ) ನಾಮಪತ್ರಗಳು ಮತ್ತು ಶಿಫಾರಸುಗಳನ್ನು 2021 ರ ಸೆಪ್ಟೆಂಬರ್ 15 ರವರೆಗೆ ಒಕ್ಕೂಟ ಸರ್ಕಾರದ ಪೋರ್ಟಲ್‌ನಲ್ಲಿ ಸಲ್ಲಿಸಬಹುದು. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡುವಂತೆ ದೇಶದ ಜನರಿಗೆ ಒತ್ತಾಯಿಸಿದ್ದರು.

1954 ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ಔಷಧಿ, ಸಾಮಾಜಿಕ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಇತ್ಯಾದಿ ಎಲ್ಲಾ ಕ್ಷೇತ್ರಗಳು ಹಾಗೂ ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಗಾಗಿ ಇದನ್ನು ನೀಡಲಾಗುತ್ತದೆ.

ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗ ಭೇದವಿಲ್ಲದ ಎಲ್ಲ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಸಾರ್ವಜನಿಕ ಕ್ಷೇತ್ರದ ಉದ್ಯಮಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಇದನ್ನೂ ಓದಿ: 11 ವರ್ಷಕ್ಕೆ ಮನೆ ಬಿಟ್ಟ, ಪದ್ಮಶ್ರಿ ಪಡೆದ, ತಮಿಳುನಾಡು ಸರ್ಕಾರದ ಭಾಗವಾದ ತೃತೀಯ ಲಿಂಗಿ ಭರತನಾಟ್ಯ ಕಲಾವಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...