- Advertisement -
- Advertisement -
ಹಾಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್ ಅಧೀಕೃತವಾಗಿ ನೂತನ ಮುಖ್ಯಮಂತ್ರಿಯ ಆಯ್ಕೆಯನ್ನು ಘೋಷಿಸಿದ್ದಾರೆ.
ಇದರ ಜೊತೆಗೆ ಆರ್. ಅಶೋಕ್, ಗೋವಿಂದ ಕಾರಜೋಳ ಮತ್ತು ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ. ಆದರೆ ಅಧೀಕೃತವಾಗಿ ಇನ್ನೂ ಘೋಷಣೆಯಾಗಿಲ್ಲ.
ಬುಧವಾರ ಬೆಳಿಗ್ಗೆ 11.00 ಕ್ಕೆ ರಾಜ್ಯದ 20 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ಸಮಯದಲ್ಲಿ ಹೊಸ ಉಪಮುಖ್ಯಮಂತ್ರಿಗಳಾಗಿ ಮೂವರೂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ನಂತರ ಬಿಎಲ್ ಸಂತೋಷ್, ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತಾದರೂ, ಅಂತಿಮವಾಗಿ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ!


