Homeಮುಖಪುಟಪೆಗಾಸಸ್ ಬಗ್ಗೆ ತನಿಖೆ ನಡೆಯಲಿ: ಪ್ರಧಾನಿ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಹೇಳಿಕೆ

ಪೆಗಾಸಸ್ ಬಗ್ಗೆ ತನಿಖೆ ನಡೆಯಲಿ: ಪ್ರಧಾನಿ ಭೇಟಿ ಬಳಿಕ ಮಮತಾ ಬ್ಯಾನರ್ಜಿ ಹೇಳಿಕೆ

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಚುನಾವಣಾ ಪ್ರಚಾರಗಳಲ್ಲಿ ಇಬ್ಬರು ಪರಸ್ಪರ ಜಿದ್ದಾಜಿದ್ದಿಗೆ ಇಳಿದು ವ್ಯಂಗ್ಯ ತುಂಬಿದ ಹೇಳಿಕೆಗಳನ್ನು ನೀಡಿದ್ದರು. ಬಂಗಾಳ ಚುನಾವಣೆಯನ್ನು ದೀದಿ ವರ್ಸಸ್ ಮೋದಿ ಎಂದೇ ಕರೆಯಲಾಗಿತ್ತು.

ಪ್ರಧಾನಿ ಮೋದಿ ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಮಮತಾ ಬ್ಯಾನರ್ಜಿ, ವಿರೋಧ ಪಕ್ಷದ ನಾಯಕರು, ಇಬ್ಬರು ಕೇಂದ್ರ ಸಚಿವರು ಮತ್ತು 40 ಪತ್ರಕರ್ತರನ್ನು ಒಳಗೊಂಡಂತೆ ಸುಮಾರು 300 ಜನರ ಮೇಲಾಗಿರುವ ಪೆಗಾಸಸ್ ಕಣ್ಗಾವಲು ಹಗರಣದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕು ಎಂದು  ಆಗ್ರಹಿಸಿದ್ದಾರೆ.

ಈಗಾಗಲೇ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಕೋಲಾಹಲ ಉಂಟಾಗಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪೆಗಾಸಸ್ ಹಗರಣದ ಕುರಿತು ಉತ್ತರ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ.

ಇದನ್ನೂ ಓದಿ: ಪೆಗಾಸಸ್: ಐಟಿ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳನ್ನು ಪ್ರಶ್ನಿಸಲಿರುವ ಶಶಿ ತರೂರ್‌ ನೇತೃತ್ವದ ಸ್ಥಾಯಿ ಸಮಿತಿ

ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಟಿಎಂಸಿಯ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರ ಫೋನ್ ನಂಬರ್‌ ಅನ್ನು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹ್ಯಾಕ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಪಿಎಂ ಮೋದಿ ಅವರೊಂದಿಗಿನ ಸಭೆಯನ್ನು ‘ಸೌಜನ್ಯ ಭೇಟಿ’ ಎಂದು ತಿಳಿಸಿದ್ದಾರೆ. ’ಕೋವಿಡ್ ಪರಿಸ್ಥಿತಿ, ರಾಜ್ಯಕ್ಕೆ ಲಸಿಕೆಗಳು ಮತ್ತು ಔಷಧಿಗಳ ಪೂರೈಕೆ ಕುರಿತು ಚರ್ಚಿಸಿದ್ದೇನೆ. ಜೊತೆಗೆ ಬಂಗಾಳವನ್ನು ಬಾಂಗ್ಲಾ ಎಂದು ಮರುನಾಮಕರಣ ಮಾಡುವ ಪ್ರಸ್ತಾಪದ ಕುರಿತು ಗಮನಕ್ಕೆ ತಂದಿದ್ದೇನೆ’ ಎಂದು ಮಮತಾ ಬ್ಯಾನರ್ಜಿ  ಹೇಳಿದ್ದಾರೆ.

ಮೂರು ದಿನಗಳ ದೆಹಲಿ ಭೇಟಿಯಲ್ಲಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ (ಜುಲೈ 28) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.


ಇದನ್ನೂ ಓದಿ: ಪೆಗಾಸಸ್ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸುಪ್ರೀಂ ಮೆಟ್ಟಿಲೇರಿದ ಹಿರಿಯ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...