Homeಅಂತರಾಷ್ಟ್ರೀಯಸೌದಿ ಅರೇಬಿಯಾ: ಭಾರತ ಸೇರಿ ಕೊರೊನಾ ರೆಡ್ ಲಿಸ್ಟ್‌ನಲ್ಲಿನ ದೇಶಕ್ಕೆ ಭೇಟಿ ನೀಡಿದರೆ 3 ವರ್ಷಗಳ...

ಸೌದಿ ಅರೇಬಿಯಾ: ಭಾರತ ಸೇರಿ ಕೊರೊನಾ ರೆಡ್ ಲಿಸ್ಟ್‌ನಲ್ಲಿನ ದೇಶಕ್ಕೆ ಭೇಟಿ ನೀಡಿದರೆ 3 ವರ್ಷಗಳ ಪ್ರಯಾಣ ನಿಷೇಧ!

- Advertisement -
- Advertisement -

ಭಾರತ ಸೇರಿದಂತೆ ಕೊರೊನಾ ರೆಡ್ ಲಿಸ್ಟ್‌ನಲ್ಲಿನ ದೇಶಗಳಿಗೆ ಭೇಟಿ ನೀಡುವ ತನ್ನ ದೇಶದ ನಾಗರಿಕರಿಗೆ ಸೌದಿ ಅರೇಬಿಯಾ ಮೂರು ವರ್ಷಗಳ ಪ್ರಯಾಣ ನಿಷೇಧ ಮತ್ತು ಭಾರಿ ದಂಡ ವಿಧಿಸಿ ಆದೇಶಿಸಿದೆ.

“ನಿಷೇಧಿತ ದೇಶಗಳಿಗೆ ಪ್ರಯಾಣಿಸುವುದು ಕೊರೊನಾ ಸಂಬಂಧಿತ ಪ್ರಯಾಣ ನಿರ್ಬಂಧಗಳು ಮತ್ತು ಸೌದಿ ಅರೇಬಿಯಾ ಹೊಸದಾಗಿ ನೀಡಿರುವ ಸೂಚನೆಗಳ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಸರ್ಕಾರಿ ಸಂಸ್ಥೆ ಸೌದಿ ಪ್ರೆಸ್ ಏಜೆನ್ಸಿ (ಎಸ್‌ಪಿಎ) ವರದಿಯನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕೊರೊನಾ ರೆಡ್ ಲಿಸ್ಟ್‌ನಲ್ಲಿರುವ ರಾಷ್ಟ್ರಗಳಲ್ಲಿ ಪ್ರಸ್ತುತ ಕೊರೊನಾ ಮತ್ತು ಅದರ ರೂಪಾಂತರಿಗಳ ಸಮಸ್ಯೆ  ಉಲ್ಬಣಗೊಳ್ಳುತ್ತಿರುವುದರಿಂದ ಈ ದೇಶಗಳಿಗೆ ಪ್ರಯಾಣಿಸದಂತೆ ಸೌದಿ ಆಂತರಿಕ ಸಚಿವಾಲಯದ ಅಧಿಕಾರಿಯೊಬ್ಬರು ಸೌದಿ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಎಸ್‌ಪಿಎ ವರದಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಭಯ:15 ತಿಂಗಳಿಂದ ಗುಡಿಸಿಲಿನಲ್ಲೇ ಸ್ವಯಂ ಕ್ವಾರಂಟೈನ್ ಆದ ಕುಟುಂಬ!

ಭಾರತ, ಯುಎಇ, ಲಿಬಿಯಾ, ಸಿರಿಯಾ, ಲೆಬನಾನ್, ಯೆಮೆನ್, ಇರಾನ್, ಟರ್ಕಿ, ಅರ್ಮೇನಿಯಾ, ಇಥಿಯೋಪಿಯಾ, ಸೊಮಾಲಿಯಾ, ಕಾಂಗೋ, ಅಫ್ಘಾನಿಸ್ತಾನ, ವೆನೆಜುವೆಲಾ, ಬೆಲಾರಸ್ ಮತ್ತು ವಿಯೆಟ್ನಾಂ ರೆಡ್ ಲಿಸ್ಟ್‌ನಲ್ಲಿರುವ ದೇಶಗಳಾಗಿವೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಕೊರೊನಾ ಸಂಬಂಧಿತ ಪ್ರಯಾಣ ನಿರ್ಬಂಧವನ್ನು ಉಲ್ಲಂಘಿಸುವವರಿಗೆ ಭಾರಿ ದಂಡ ವಿಧಿಸಲಾಗುವುದು. ಸೂಚನೆಗಳನ್ನು ಉಲ್ಲಂಘಿಸಿ ಪ್ರಯಾಣಿಸಿದವರಿಗೆ ಮೂರು ವರ್ಷಗಳ ಕಾಲ ವಿದೇಶ ಪ್ರವಾಸ ನಿಷೇಧಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ರೆಡ್ ಲಿಸ್ಟ್‌ನಲ್ಲಿರುವ ದೇಶಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಯಾಣಿಸುವುದರ ವಿರುದ್ಧ ನಾಗರಿಕರು  ಎಚ್ಚರಿಕೆ ವಹಿಸಬೇಕು. ಕೊರೊನಾ ಸೋಂಕಿರುವ ಮತ್ತು ಉಲ್ಬಣಗೊಳ್ಳುತ್ತಿರುವ  ಪ್ರದೇಶಗಳಿಂದ ದೂರವಿರಬೇಕು. ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಚಿವಾಲಯ ನಾಗರಿಕರಲ್ಲಿ ಮನವಿ ಮಾಡಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ಹೆಚ್ಚುತ್ತಿರುವ ಬಡತನ ಮತ್ತು ಬಾಲ್ಯವಿವಾಹದ ರಣನರ್ತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...