Homeಮುಖಪುಟಸೆಪ್ಟೆಂಬರ್ 22 ಮತ್ತು 23ಕ್ಕೆ ಜೆಎನ್‌‌ಯು ಪ್ರವೇಶ ಪರೀಕ್ಷೆ-2021

ಸೆಪ್ಟೆಂಬರ್ 22 ಮತ್ತು 23ಕ್ಕೆ ಜೆಎನ್‌‌ಯು ಪ್ರವೇಶ ಪರೀಕ್ಷೆ-2021

- Advertisement -
- Advertisement -

ಸೆಪ್ಟೆಂಬರ್ 22 ಮತ್ತು 23 ರ ನಡುವೆ ವಿಶ್ವವಿದ್ಯಾನಿಲಯದ ಪ್ರವೇಶ ಪರೀಕ್ಷೆಗಳು ನಡೆಯಲಿವೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ(ಜೆಎನ್‌‌ಯು)ದ ಉಪಕುಲಪತಿ ಜಗದೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಪ್ರವೇಶ ಫಲಿತಾಂಶಗಳನ್ನು ಘೋಷಿಸಿದ ನಂತರ ಪ್ರವೇಶ ಪ್ರಕ್ರಿಯೆಯನ್ನು ವಿಳಂಬವಿಲ್ಲದೆ ಪ್ರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕದ ನಡುವೆ ವಿದ್ಯಾರ್ಥಿಗಳು ಪ್ರಯಾಣಿಸದೆ ಇರಲು ವೈವಾಗಳನ್ನು ಆನ್‌ಲೈನ್‌ನಲ್ಲಿ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆಯನ್ನು ‘ದುಷ್ಕೃತ್ಯ’ ಎಂದು ಜೆಎನ್‌ಯು ಅಧ್ಯಕ್ಷೆಗೆ ನೋಟಿಸ್‌ ನೀಡಿದ ವಿವಿ!

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ) ನಡೆಸುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಎರಡು ಸ್ಲಾಟ್‌ಗಳಲ್ಲಿ ನಡೆಸಲಾಗುತ್ತದೆ; ಮೊದಲ ಸ್ಲಾಟ್ 9:30 AM- 12:30 PM ಮತ್ತು ಎರಡನೆಯದು 2:30 PM- 5:30 PM ನಡುವೆ ನಡೆಯುತ್ತದೆ.

ಪ್ರಶ್ನೆಪತ್ರಿಕೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳನ್ನು (ಎಂಸಿಕ್ಯು) ಒಳಗೊಂಡಿರುತ್ತದೆ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರವೇಶ ಪರೀಕ್ಷೆಯ ಆನ್‌ಲೈನ್ ನೋಂದಣಿ ಮಂಗಳವಾರ ಪ್ರಾರಂಭವಾಗಿದ್ದು, ಆಗಸ್ಟ್ 27 ಅರ್ಜಿಯ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಜೆಎನ್‌‌ಯು ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್ jnuexams.nta.ac.in ಮೂಲಕ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

0
ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 3ರಂದು ಮತದಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷತ್ತಿನ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ...