Homeಮುಖಪುಟಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

- Advertisement -
- Advertisement -

ಜಾರ್ಖಂಡ್ ರಾಜ್ಯದ ಧನಬಾದ್‌ನ ಜಿಲ್ಲಾ ಮತ್ತು ಹೆಚ್ಚುವರಿ ನ್ಯಾಯಾಧೀಶರಾದ ಉತ್ತಮ್ ಆನಂದ್‌ರವರಿಗೆ ದುಷ್ಕರ್ಮಿಗಳು ಆಟೋದಿಂದ ಗುದ್ದಿದ ಸಿಸಿಟಿವಿ ವಿಡಿಯೋ ದೊರಕಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ನಂತರ ಆಸ್ಪತ್ರೆಗೆ ಸೇರಿಸಿದರೂ ಸಹ ಅವರು ಬದುಕುಳಿಯಲಿಲ್ಲ.

ಉತ್ತಮ್ ಆನಂದ್‌ರವರು ಬುಧವಾರ ಬೆಳಿಗ್ಗೆ 5 ಗಂಟೆಯ ಸಮಯದಲ್ಲಿ ಜಾಗಿಂಗ್ ಮಾಡುತ್ತಿದ್ದರು. ಅವರ ಮನೆಯಿಂದ ಕೇವಲ ಅರ್ಧ ಕಿ.ಮೀ ಅಂತರದಲ್ಲಿ ಅವರು ರಸ್ತೆ ಬದಿಯಲ್ಲಿ ಜಾಗ್ ಮಾಡುತ್ತಿರುವಾಗಿ ಹಿಂದಿನಿಂದ ಬಂದ ಆಟೋವೊಂದು ಅವರನ್ನೇ ಗುರಿಯಾಗಿಸಿಕೊಂಡು ಗುದ್ದಿದೆ. ಅವರು ಕುಸಿದುಬಿದ್ದ ನಂತರ ದುಷ್ಕರ್ಮಿಗಳು ಪರಾರಿಯಾಗಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ.

ಸಿಸಿಕ್ಯಾಮರ ದೃಶ್ಯಾವಳಿಗಳು ದೊರೆತ ನಂತರ ಇದು ಪೂರ್ವನಿಯೋಜಿತ ಹತ್ಯೆ ಎಂಬುದು ಸಾಬೀತಾಗಿದೆ. ನ್ಯಾಯಾಂಗದ ಮೇಲಿನ ಕ್ರೂರ ಹಲ್ಲೆ ಎಂದು ಕರೆದಿರುವ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ನ್ಯಾಯಾಧೀಶರನ್ನು ಕೊಂದ ಆಟೋ ಯಾರದೆಂಬುದು ಇನ್ನು ಪತ್ತೆಯಾಗಿಲ್ಲ. ನ್ಯಾಯಾಧೀಶರನ್ನು ಆಸ್ಪತ್ರೆಗೆ ಸೇರಿಸಿದಾಗ ಆತ ಯಾರೆಂಬುದು ಸಹ ಗೊತ್ತಿರಲಿಲ್ಲ ಎನ್ನಲಾಗಿದೆ. ಅವರ ಕುಟುಂಬ 7 ಗಂಟೆಯಾದರೂ ಅವರು ಮನೆಗೆ ಬಾರದಿದ್ದಾಗ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಪೊಲೀಸ್ ಹುಡುಕಾಟದಲ್ಲಿ ಅವರು ಆಸ್ಪತ್ರೆಯಲ್ಲಿ ಸಾವನಪ್ಪಿರುವುದು ಪತ್ತೆಯಾಗಿದೆ.

ನ್ಯಾಯಾಧೀಶರ ಕೊಲೆಯ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿರುವುದನ್ನು ಸಿಸಿಟಿವಿ ಸಾಕ್ಷಿಗಳು ದೃಢಪಡಿಸಿವೆ. ಆರಂಭಿಕ ತನಿಖೆಯಲ್ಲಿ ಹತ್ಯೆಯ ಕೆಲವೇ ಗಂಟೆಗಳ ಹಿಂದೆ ಆಟೋವನ್ನು ಅಪಹರಿಸಿರುವುದು ಬೆಳಕಿಗೆ ಬಂದಿದೆ. ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಉನ್ನತ ಮಟ್ಟದ ತನಿಖೆಗೆ ಒತ್ತಡ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಧೀಶರಾದ ಆನಂದ್‌ರವರು ಧನಬಾದ್ ನಗರದ ಮಾಫಿಯಾ ಕೊಲೆಗಳ ವಿಚಾರಣೆ ನಡೆಸುತ್ತಿದ್ದರು ಮತ್ತು ಇತ್ತೀಚೆಗೆ ಇಬ್ಬರು ಗ್ಯಾಂಗ್‌ಸ್ಟರ್‌ಗಳಿಗೆ ಜಾಮೀನು ನೀಡಲು ನಿರಾಕರಿಸಿದ್ದರು. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಈ ಘಟನೆಯನ್ನು ವಿವರಿಸಿರುವ ವಕೀಲ ವಿಕಾಸ್ ಸಿಂಗ್ “ಇದು ನ್ಯಾಯಾಂಗದ ಮೇಲಿನ ಲಜ್ಜೆಗೆಟ್ಟ ದಾಳಿ. ಈ ಕುರಿತು ಸಿಬಿಐ ತನಿಖೆ ನಡೆಸಬೇಕಾಗಿದೆ. ಬೆಳಿಗ್ಗೆ ವಾಕಿಂಗ್ ಮಾಡುವಾಗ ನ್ಯಾಯಾಧೀಶರನ್ನು ಆಟೋದಲ್ಲಿ ಗುದ್ದಿ ಸಾಯಿಸುವುದು ಎಂದರೆ ಏನರ್ಥ? ಅವರು ಗ್ಯಾಂಗ್‌ಸ್ಟರ್‌ಗಳ ಜಾಮೀನು ವಿಚಾರಣೆ ನಡೆಸುತ್ತಿದ್ದರು. ಇದು ನ್ಯಾಯಾಂಗ ಸ್ವಾತಂತ್ರ್ಯದ ಮೇಲಿನ ದಾಳಿ” ಎಂದು ನೋವು ತೋಡಿಕೊಂಡಿದ್ದಾರೆ. ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಮುಂದೆ ಈ ಪ್ರಕರಣವನ್ನು ಪ್ರಸ್ತಾಪಿಸುವಂತೆ ಸೂಚಿಸಿದ್ದಾರೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ: ರಸ್ತೆಯಲ್ಲಿ ಮಲಗಿದ್ದ 18 ಕಾರ್ಮಿಕರ ದುರ್ಮರಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...