Homeಮುಖಪುಟಪಂಜಾಬ್: ನವಜೋತ್ ಸಿಧುಗೆ ಆಡಿಯೋ ಸಂದೇಶ ನೀಡಿ, ಕಾಂಗ್ರೆಸ್ ಕಾರ್ಯಕರ್ತ ಸಾವು

ಪಂಜಾಬ್: ನವಜೋತ್ ಸಿಧುಗೆ ಆಡಿಯೋ ಸಂದೇಶ ನೀಡಿ, ಕಾಂಗ್ರೆಸ್ ಕಾರ್ಯಕರ್ತ ಸಾವು

- Advertisement -
- Advertisement -

ಪಂಜಾಬ್‌ನ ಲೂಧಿಯಾನಾದ ಜಂಗಪುರ್ ಹಳ್ಳಿಯ ಕಾಂಗ್ರೆಸ್ ಕಾರ್ಯಕರ್ತ ಗುರುವಾರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೂ ಮುನ್ನ ಹೊಸದಾಗಿ ನೇಮಕಗೊಂಡಿರವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು ಉದ್ದೇಶಿಸಿ ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.

ಆಡಿಯೋದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿದ್ದು, ಕಾಂಗ್ರೆಸ್ ಕಾರ್ಯಕರ್ತನ ಸಾವಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮೃತ ದಲ್ಜಿತ್ ಸಿಂಗ್ ಹ್ಯಾಪಿ (42) ಪ್ರೀತಮ್ ಸಿಂಗ್ ಎಂಬುವರ ಜೊತೆ ಆಸ್ತಿ ವಿವಾದದಲ್ಲಿ ಸಿಲುಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ವಿಷಯದ ಕುರಿತು ಲೂಧಿಯಾನ ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದರು.

ತನಿಖೆ ಪ್ರಗತಿಯಲ್ಲಿರುವಾಗಲೇ, ಗುರುವಾರ ಮೃತ ದಲ್ಜಿತ್ ಸಿಂಗ್ ಮನೆಯಿಂದ ಹೊರ ಹೋಗಿ, ಆಡಿಯೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಇದರಲ್ಲಿ ತಮ್ಮ ಪರಿಸ್ಥಿತಿಗೆ ಕೆಲವು ಜನರನ್ನು ದೋಷಿಸಿದ್ದಾರೆ. ಜೊತೆಗೆ ನ್ಯಾಯಕ್ಕಾಗಿ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರನ್ನು  ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಕೇಳಿದ ಮೃತರ ಸಹೋದರ, ಆತನನ್ನು ಹುಡುಕಾಡಿದ್ದಾರೆ. ಬುಡೆಲ್ ಗ್ರಾಮದಲ್ಲಿ (ರಾಯ್ಕೋಟ್ ರಸ್ತೆಯಲ್ಲಿ) ಪ್ರಜ್ಞಾಹೀನ ಸ್ಥಿತಿಯಲ್ಲಿ ದಲ್ಜಿತ್ ಪತ್ತೆಯಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ದಲ್ಜಿತ್ ಸಿಂಗ್ ಹ್ಯಾಪಿ ತನ್ನ ಅಣ್ಣನ ಕುಟುಂಬದೊಂದಿಗೆ ವಾಸಿಸುತ್ತಿದ್ದರು. ಅವರಿಗೆ ಇನ್ನು ಮದುವೆಯಾಗಿರಲಿಲ್ಲ. ಆಸ್ತಿ ವಿವಾದದಲ್ಲಿ ನೊಂದಿದ್ದ ಅವರು ವಿಷಪೂರಿತ ಆಹಾರ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮುಲ್ಲಂಪುರ ದಖಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಕುಮ್ಮಕ್ಕು) ಅಡಿಯಲ್ಲಿ ಪ್ರೀತಂ ಸಿಂಗ್, ಮಹಿಂದರ್ ಸಿಂಗ್ ಮತ್ತು ಬಲ್ಜಿಂದರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಡಿಎಸ್ಪಿ ಬೈನ್ಸ್ ತಿಳಿಸಿದ್ದಾರೆ. ಮಹಿಂದರ್ ಮತ್ತು ಬಲ್ಜಿಂದರ್ ಅವರನ್ನು ಬಂಧಿಸಲಾಗಿದೆ.

ನವಜೋತ್ ಸಿಂಗ್ ಸಿಧು ಮತ್ತು ಕ್ಯಾಬಿನೆಟ್ ಸಚಿವ ಭರತ್ ಭೂಷಣ್ ಅಶು ಅವರು ಮೃತರ ಕುಟುಂಬವನ್ನು ಭೇಟಿ ಮಾಡಿ, ಕುಟುಂಬಕ್ಕೆ ಪಂಜಾಬ್ ಕಾಂಗ್ರೆಸ್ ಪರವಾಗಿ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಟ್ವೀಟ್  ಮಾಡಿ “ಲೂಧಿಯಾನ ಜಿಲ್ಲೆಯ ನಮ್ಮ ಪಕ್ಷದ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ದುಃಖಕರವಾಗಿದೆ. ಪ್ರಕರಣದ ಕುರಿತು ತಕ್ಷಣ ತನಿಖೆ ನಡೆಸುವಂತೆ ಮತ್ತು ಅಪರಾಧಿಗಳನ್ನು ಕಂಡುಹಿಡಿಯುವಂತೆ ಪಂಜಾಬ್‌ ಡಿಜಿಪಿಗೆ ಸೂಚಿಸಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದ ಯಾರನ್ನೂ ಬಿಡುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಪಂಜಾಬ್ ಬಳಿಕ ರಾಜಸ್ಥಾನದ ಸಮಸ್ಯೆ ಬಗೆ ಹರಿಸಲು ಮುಂದಾದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...