Homeಮುಖಪುಟಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ಬಗ್ಗೆ ಒಕ್ಕೂಟ ಸರ್ಕಾರ ಉತ್ತರ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸುತ್ತಿವೆ. ಹೀಗಿರುವಾಗ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪೆಗಾಸಸ್ ವಿವಾದವು ಸಮಸ್ಯೆಯಲ್ಲ ಎಂದು ವಿವಾದಿತ ಹೇಳಿಕೆ ನೀಡಿದ್ದಾರೆ.

ಪೆಗಾಸಸ್ ಸ್ಪೈವೇರ್ ಹಗರಣವು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಜುಲೈ 19 ರಂದು ಆರಂಭವಾದ ಮುಂಗಾರು ಅಧಿವೇಶನದಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಕೋಲಾಹಲಕ್ಕೆ ಕಾರಣವಾಗಿದೆ. ಐಟಿ ಸಚಿವ ಅಶ್ವಿನಿ ವೈಷ್ಣವ್ ಉಭಯ ಸದನಗಳಲ್ಲಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಆದರೆ, ಅವರ ಉತ್ತರದಿಂದ ಸಮಾಧಾನಗೊಳ್ಳದ ವಿರೋಧ ಪಕ್ಷಗಳು ನಿರ್ದಿಷ್ಟ ಉತ್ತರಗಳನ್ನು ಕೋರುತ್ತಿದ್ದಾರೆ.

ಗದ್ದಲ ಮತ್ತು ಪ್ರತಿಭಟನೆಯಿಂದಾಗಿ ಲೋಕಸಭೆಯ ಇಂದಿನ ದಿನದ ಕಲಾಪವನ್ನು ಮುಂದೂಡಲಾಯಿತು, ಪ್ರಶ್ನೋತ್ತರ ಸಮಯದಲ್ಲಿ ಮಾತನಾಡುವಾಗ ಸದನವನ್ನು ನಡೆಸಲು ಅವಕಾಶ ನೀಡುವಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಭಟನಾ ನಿರತ ಸದಸ್ಯರನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ಪೆಗಾಸಸ್: ಐಟಿ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳನ್ನು ಪ್ರಶ್ನಿಸಲಿರುವ ಶಶಿ ತರೂರ್‌ ನೇತೃತ್ವದ ಸ್ಥಾಯಿ ಸಮಿತಿ

ಪ್ರತಿಪಕ್ಷದ ನಡವಳಿಕೆ ದುರದೃಷ್ಟಕರ ಎಂದು ಹೇಳಿರುವ ಕೇಂದ್ರ ಸಚಿವರು, “ಪೆಗಾಸಸ್ ಗೂಢಚರ್ಯೆ ಹಗರಣವು ಗಂಭಿರ ಸಮಸ್ಯೆಯಲ್ಲ. ಐಟಿ ಸಚಿವರು ಈಗಾಗಲೇ ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ. ಸಮಸ್ಯೆಯಲ್ಲದ, ಗಂಭೀರವಲ್ಲದ ವಿಷಯದ ಮೇಲೆ ಪ್ರತಿಪಕ್ಷಗಳು ಪ್ರತಿಭಟನೆ  ನಡೆಸುತ್ತಿವೆ” ಎಂದಿದ್ದಾರೆ.

“ಭಾರತದ ಜನರಿಗೆ ನೇರವಾಗಿ ಸಂಬಂಧಿಸಿದ ಹಲವು ಸಮಸ್ಯೆಗಳಿವೆ. ಅವುಗಳ ಕುರಿತು ಸರ್ಕಾರವು ಚರ್ಚೆಗೆ ಸಿದ್ಧವಾಗಿದೆ” ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇನ್ನು, ಪೆಗಾಸಸ್ ಗೂಢಚಾರ ತಂತ್ರಾಂಶ ಬಳಸಿ ರಾಜಕಾರಣಿಗಳು, ಪತ್ರಕರ್ತರು ಮತ್ತು ಇತರರ ಫೋನ್ ಟ್ಯಾಪಿಂಗ್‌‌ ಸಂಬಂಧಿಸಿದ ಆರೋಪಗಳ ಬಗ್ಗೆ ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯು ಸರ್ಕಾರಿ ಅಧಿಕಾರಿಗಳನ್ನು ಪ್ರಶ್ನಿಸಲಿದೆ ಎಂದು ಸಮಿತಿಯ ಅಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ಪೆಗಾಸಸ್‌ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಇಬ್ಬರು ಒಕ್ಕೂಟ ಸರ್ಕಾರದ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೈಲ್ವೆ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಮಾಜಿ ಸಿಬಿಐ ಮುಖ್ಯಸ್ಥ, ಉದ್ಯಮಿ ಅನಿಲ್ ಅಂಬಾನಿ ಮತ್ತು ಕನಿಷ್ಠ 40 ಪತ್ರಕರ್ತರು ಸೇರಿದಂತೆ ಪ್ರತಿಪಕ್ಷ ನಾಯಕರು ಇದ್ದಾರೆ.


ಇದನ್ನೂ ಓದಿ: ಪೆಗಾಸಸ್ ಹಗರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಸುಪ್ರೀಂ ಮೆಟ್ಟಿಲೇರಿದ ಹಿರಿಯ ಪತ್ರಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ‘ಪೆಗಾಸಿಸ್ ಗೂಢಚರ್ಯೆ ಸಮಸ್ಯೆ ಅಲ್ಲ’ ಎಂದ ಪ್ರಹ್ಲಾದ ಜೋಶಿಯವರ ಮಾತಿನ ಅರ್ಥ ಏನು? ಗೂಢಚರ್ಯೆ ಅಲ್ಲದಿದ್ದರೆ, ಒಳಗಿನವರ ಕರಾಮತ್ತು ಎಂದು ಒಪ್ಪಿಕೊಂಡಂತೆ ಅಲ್ಲವೇ? ಮತ್ತು, ಈ ಕರಾಮತ್ತಿಗೆ ಸರ್ಕಾರದ ಒಪ್ಪಿಗೆ ಇರಬೇಕು ಅಲ್ಲವೇ? ಅಂದರೆ, ಏನೋ ಮುಚ್ಚಿಡುವ ಪ್ರಯತ್ನ ಮಾಡುತ್ತಿರುವಿರಲ್ಲವೇ?

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...