Homeಚಳವಳಿಹಳಿಯಾಳ: ಅರಣ್ಯ ಸಿಬ್ಬಂದಿಯಿಂದ ಗೌಳಿ ಬುಡಕಟ್ಟು ಜನರ ಮೇಲೆ ದಾಳಿ ಆರೋಪ

ಹಳಿಯಾಳ: ಅರಣ್ಯ ಸಿಬ್ಬಂದಿಯಿಂದ ಗೌಳಿ ಬುಡಕಟ್ಟು ಜನರ ಮೇಲೆ ದಾಳಿ ಆರೋಪ

- Advertisement -
- Advertisement -

ಉತ್ತರ ಕನ್ನಡದ ವನವಾಸಿ ಗೌಳಿ ಬುಡಕಟ್ಟು ಜನಾಂಗದ ಮೇಲೆ ಅರಣ್ಯ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ಮಾಡಿ ಒಕ್ಕಲೆಬ್ಬಿಸುವ ಕಾರ್ಯಾಚರಣೆ ಮಾಡುತ್ತದೆಂಬ ಆರೋಪ ಕೇಳಿಬಂದಿದೆ. ಹಳಿಯಾಳದ ಭೀಮನಳ್ಳಿ ಗ್ರಾಮದಲ್ಲಿ ಕಾನೂನು ವಿಧಿ-ವಿಧಾನ ಅನುಸರಿಸದೆ ಬಲತ್ಕಾರದಿಂದ ವನವಾಸಿಗಳ ಕೃಷಿ ಭೂಮಿ ನಾಶಪಡಿಸಿ, ಜನರ ಮೇಲೆ ದಾಳಿ ನಡೆಸಿ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಪವರ್ ಕಾರ್ಪೋರೆಷನ್ ಮತ್ತು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸುಮಾರು 160 ಕ್ಕೂ ಹೆಚ್ಚು ಆರ್ಥಿಕವಾಗಿ ತೀರಾ ದುರ್ಬಲರಾದ ಗೌಳಿ ಬುಡಕಟ್ಟು ಜನಾಂಗದ ಅರಣ್ಯವಾಸಿ ಕುಟುಂಬ ಅನೇಕ ದಶಕಗಳಿಂದ ಸಾಗುವಳಿ ಮಾಡಿಕೊಂಡು ಬದುಕುತ್ತಿವೆ. ಭತ್ತ, ಕಬ್ಬು, ಗೋವಿನ ಜೋಳ ಮುಂತಾದ ಅಲ್ಪಾವಧಿ ಬೆಳೆ ಬೆಳೆಯುತ್ತಿದ್ದಾರೆ. ಸದರೀ ಜಾಗದ ಉಳುಮೆ ಹಕ್ಕಿಗಾಗಿ ಅರಣ್ಯ ಹಕ್ಕು ಕಾಯಿದೆಯಂತೆ ಅರ್ಜಿ ಸಹ ಸಲ್ಲಿಸಿದ್ದಾರೆ. ಅಸಮರ್ಪಕ ಜಿಪಿಎಸ್‌ನಿಂದಾಗಿ ಅರ್ಜಿ ತಿರಸ್ಕೃತಗೊಂಡಿದೆ. ಆದರೆ ಅರ್ಜಿಗಳ ಪುನರ್ ಪರಿಶೀಲನೆ ನಡೆಯುತ್ತಿರುವ ಸಂದರ್ಭದಲ್ಲಿ ಬಲವಂತವಾಗಿ ಒಕ್ಕಲೆಬ್ಬಿಸಲು ಅಧಿಕಾರಿಗಳು ಹವಣಿಸುವುದು ಅಪರಾಧವಾಗುತ್ತದೆಂದು ರವಿ ನಾಯ್ಕ್ ಹೇಳಿದ್ದಾರೆ.

ಭೀಮನಳ್ಳಿಯಲ್ಲಿ ಅರಣ್ಯಾಧಿಕಾರಿಗಳು ಕಾನೂನನ್ನು ಕಡೆಗಣಿಸಿ ಗೌಳಿ ಕುಡುಂಬಗಳ ಮೇಲೆ ಕ್ರೂರವಾಗಿ ದೈಹಿಕ ಹಲ್ಲೆ ನಡೆಸಿ, ಬಲಪ್ರಯೋಗ ನಡೆಸಿದ್ದಾರೆ. ಪುರುಷ ಅರಣ್ಯ ಸಿಬ್ಬಂದಿಯವರು ಮಹಿಳೆಯರನ್ನು ಎಳೆದಾಡಿದ್ದಾರೆ. ಮಹಿಳೆಯರಿಗೆ ರಕ್ತ ಸುರಿಯುವಂತೆ ಅಮಾನವಿಯವಾಗಿ ಬಡಿದಿದ್ದಾರೆ. ದಾಳಿಗೆ ತತ್ತರಿಸಿದ ತರುಣನೊಬ್ಬ ಪ್ರಜ್ಞೆ ತಪ್ಪಿಬಿದ್ದಿದ್ದಾನೆ. ಮಹಿಳಾ ಸಿಬ್ಬಂದಿಗಳು ಸಹ ಅಸಹ್ಯವಾಗಿ ಬೈದಿದ್ದಾರೆ. ಅಮಾಯಕ, ಅನಕ್ಷರಸ್ಥ ವನವಾಸಿ ಮಹಿಳೆಯರ ಮೇಲೆ ದೈಹಿಕ ದಾಳಿ ನಡೆಸಿರುವುದು ವೀಡಿಯೋದಲ್ಲಿ ದಾಖಲಾಗಿದೆ ಎಂದು ಅವರು ವಿಡಿಯೋ ಬಿಡುಗಡೆ ಮಾಡಿದ್ದಾರೆ!

ಜಿಲ್ಲೆಯಲ್ಲಿ ಅರಣ್ಯ ಸಿಬ್ಬಂದಿ ಪದೇಪದೇ ಅರಣ್ಯವಾಸಿಗಳೊಂದಿಗೆ ಸಂಘರ್ಷಕ್ಕೆ ಇಳಿಯುತ್ತಿದ್ದು, ಮೊನ್ನೆ ಹಲಿಯಾಳದಲ್ಲಿ ಅರಣ್ಯಾಧಿಕಾರಿಗಳು ಮಾಡಿರುವ ದಾಳಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಜಿಲ್ಲಾಧಿಕಾರಿಗಳು ಪ್ರಕರಣವನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಬಲಪ್ರಯೋಗಿಸಿದ ಅಧಿಕಾರಿಗಳ ವಿರುದ್ದ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ರವಿ ನಾಯ್ಕ್ ಹೇಳಿದ್ದಾರೆ.


ಇದನ್ನೂ ಓದಿ: ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ ಎಂದ ಅನಂತಕುಮಾರ್‌ ಮಗಳು, ಪಕ್ಷಕ್ಕೆ ಸ್ವಾಗತ ಎಂದ ಎಚ್‌ಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...