Homeಕರೋನಾ ತಲ್ಲಣಪಂಜಾಬ್ ಶಾಲೆಗಳ ಎಲ್ಲಾ ತರಗತಿಗಳು ಸೋಮವಾರದಿಂದ ಪ್ರಾರಂಭ!

ಪಂಜಾಬ್ ಶಾಲೆಗಳ ಎಲ್ಲಾ ತರಗತಿಗಳು ಸೋಮವಾರದಿಂದ ಪ್ರಾರಂಭ!

ಪಂಜಾಬ್‌ನಲ್ಲಿ ಕೇವಲ 544 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಶುಕ್ರವಾರದಂದು 49 ಹೊಸ ಪ್ರಕರಣಗಳು ವರದಿಯಾಗಿವೆ

- Advertisement -
- Advertisement -

ಪಂಜಾಬ್‌ನ ಅಮರಿಂದರ್‌ ನೇತೃತ್ವದ ಸರ್ಕಾರವು ಆಗಸ್ಟ್ 2 ರಿಂದ ಕೊರೊನಾ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ರಾಜ್ಯದ ಎಲ್ಲಾ ತರಗತಿಗತಿಗಳಿಗೆ ಶಾಲೆಗಳನ್ನು ಪುನರಾರಂಭಿಸುವುದಾಗಿ ಶನಿವಾರ ಪ್ರಕಟಿಸಿದೆ.

ಪಂಜಾಬ್ ಸರ್ಕಾರದ ಅಧಿಸೂಚನೆಯ ಪ್ರಕಾರ, ಕೊರೊನಾ ಸೂಕ್ತ ನಡವಳಿಕೆಯನ್ನು ಖಚಿತಪಡಿಸಿಕೊಳ್ಳಲು ಶಾಲೆಗಳು ಸರಿಯಾದ ಮಾರ್ಗಸೂಚಿಯನ್ನು ಅನುಸರಿಸುವ ನಿರೀಕ್ಷೆಯಿದೆ. “ಶಾಲಾ ಶಿಕ್ಷಣ ಇಲಾಖೆಯು ಈ ನಿಟ್ಟಿನಲ್ಲಿ ಸೂಚನೆಗಳನ್ನು ನೀಡಲಿದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪಂಜಾಬ್‌ನಲ್ಲಿ ಸುಮಾರು ನಾಲ್ಕು ತಿಂಗಳು ಮುಚ್ಚಿದ್ದ 10 ರಿಂದ 12 ನೇ ತರಗತಿಯ ಶಾಲೆಗಳು ಜುಲೈ 26 ರಂದು ಪುನಾರಂಭಗೊಂಡಿದ್ದವು. ಆ ಸಮಯದಲ್ಲಿ, ಶಾಲಾ ಶಿಕ್ಷಣ ಇಲಾಖೆಯು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಿ, ಸಂಪೂರ್ಣವಾಗಿ ಲಸಿಕೆ ಹಾಕಿದ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಮಾತ್ರ ಶಾಲೆಗಳಿಗೆ ಖುದ್ದಾಗಿ ಹಾಜರಾಗಲು ಅನುಮತಿ ನೀಡಿದ್ದವು. ಮಕ್ಕಳನ್ನು ತರಗತಿಗಳಿಗೆ ಹಾಜರಾಗಲು ಪೋಷಕರಿಂದ ಲಿಖಿತ ಒಪ್ಪಿಗೆ ಪಡೆಯುವುದನ್ನು ಶಾಲೆಗಳಿಗೆ ಕಡ್ಡಾಯ ಮಾಡಲಾಗಿತ್ತು.

ಇದನ್ನೂ ಓದಿ: ಪಂಜಾಬ್: ನವಜೋತ್ ಸಿಧುಗೆ ಆಡಿಯೋ ಸಂದೇಶ ನೀಡಿ, ಕಾಂಗ್ರೆಸ್ ಕಾರ್ಯಕರ್ತ ಸಾವು

ಶುಕ್ರವಾರ, ಪಂಜಾಬ್‌ನಲ್ಲಿ 49 ಹೊಸ ಕೊರೊನಾ ಪ್ರಕರಣಗಳನ್ನು ವರದಿಯಾಗಿದೆ. ರಾಜ್ಯದಲ್ಲಿ ಇದುವರೆಗೂ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 5.99 ಲಕ್ಷಕ್ಕೆ ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರದಂದು ರಾಜ್ಯದಲ್ಲಿ ಯಾವುದೇ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ.

ಪಂಜಾಬ್‌ನಲ್ಲಿ 544 ಸಕ್ರಿಯ ಕೊರೊನಾ ಪ್ರಕರಣಗಳಿದ್ದು, ಹೆಚ್ಚಿನ ಹೊಸ ಸೋಂಕುಗಳು ಜಲಂಧರ್, ಫಿರೋಜ್‌ಪುರ ಮತ್ತು ಲುಧಿಯಾನದಿಂದ ವರದಿಯಾಗಿವೆ.

ರಾಜ್ಯದ ಶಾಲೆಗಳು ದೈಹಿಕ ತರಗತಿಗಳ ಜೊತೆಗೆ ಆನ್‌ಲೈನ್‌ ತರಗತಿಗಳನ್ನು ಕೂಡಾ ನಡೆಸುತ್ತಿವೆ. ಭಾರತದ ಇತರ ಹಲವು ರಾಜ್ಯಗಳು ಕೆಲವು ವಯೋಮಾನದ ವಿದ್ಯಾರ್ಥಿಗಳಿಗಾಗಿ ಶಾಲೆಗಳಲ್ಲಿ ದೈಹಿಕ ತರಗತಿಗಳನ್ನು ಪುನರಾರಂಭಿಸಲು ಅವಕಾಶ ನೀಡಿವೆ.

ಕರ್ನಾಟಕದಲ್ಲೂ ಪದವಿ ಮತ್ತು ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ಲಸಿಕೆ ಪಡೆದ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳಿಗೆ ಹಾಜರಾಗಳು ಅನುಮತಿ ನೀಡಲಾಗಿದೆ. ಉಳಿದಂತೆ ಆನ್‌ಲೈನ್ ಮೂಲಕ ತರಗತಿಗಳು ನಡೆಯುತ್ತಿವೆ.

ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...