Homeಮುಖಪುಟಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

ಪೆಗಾಸಸ್ ಹಗರಣ: ಗುರುವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

- Advertisement -
- Advertisement -

ಪ್ರತಿಪಕ್ಷದ ರಾಜಕಾರಣಿಗಳು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಸೇರಿದಂತೆ 300ಕ್ಕೂ ಅಧಿಕ ಮಂದಿಯ ಮೇಲೆ ಇಸ್ರೇಲಿ ಸ್ಪೈವೇರ್‌ ಪೆಗಾಸಸ್ ಬಳಸಿ ಗೂಢಚರ್ಯೆ ನಡೆಸಿರುವ ಆರೋಪಗಳನ್ನು ಒಳಗೊಂಡ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ.

ಪೆಗಾಸಸ್ ಹಗರಣದ ಕುರಿತು ವಿಶೇಷ ತನಿಖೆಯನ್ನು ಕೋರಿ ಹಲವು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅವುಗಳ ವಿಚಾರಣೆ ಗುರುವಾರ ಆರಂಭವಾಗಲಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ದ್ವಿಸದಸ್ಯ ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಸೂರ್ಯ ಕಾಂತ್ ದ್ವಿಸದಸ್ಯ ಪೀಠದ ಎರಡನೇ ನ್ಯಾಯಾಧೀಶರಾಗಿದ್ದಾರೆ.

ಸರ್ಕಾರ ಯಾವುದೇ ರೀತಿಯ ಕಣ್ಗಾವಲು ನಡೆಸಲು ಸ್ಪೈವೇರ್ ಪರವಾನಗಿ ಪಡೆದಿದ್ದಾರೆಯೇ ಮತ್ತು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸ್ಪೈವೇರ್ ಬಳಸಿದ್ದಾರೆಯೇ ಎಂಬುದನ್ನು ಬಹಿರಂಗಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿ ಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿಟಾಸ್ ಮತ್ತು ವಕೀಲ ಎಂ.ಎಲ್ ಶರ್ಮಾ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

ಜುಲೈ 19 ರಂದು ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದ, ಪ್ರತಿಪಕ್ಷಗಳು ಪೆಗಾಸಸ್ ಹಗರಣದ ಕುರಿತು ಚರ್ಚೆ‌‌ ನಡೆಸಲು ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ತನಿಖೆ ನಡೆಸಲು ಒತ್ತಾಯಿಸುತ್ತಿವೆ.

ತನಿಖೆಯ ಬೇಡಿಕೆಗಳನ್ನು ತಳ್ಳಿಹಾಕಿರುವ ಒಕ್ಕೂಟ ಸರ್ಕಾರವು ತನ್ನ ಏಜೆನ್ಸಿಗಳಿಂದ ಯಾವುದೇ ಅನಧಿಕೃತ ಹಸ್ತಕ್ಷೇಪವಿಲ್ಲ ಎಂದು ಸಮರ್ಥಿಸಿಕೊಂಡಿದೆ. ಈ ನಿರ್ದಿಷ್ಟ ಜನರ ಮೇಲೆ ಸರ್ಕಾರದ ಗೂಢಚರ್ಯೆಗೆ ಸಂಬಂಧಿಸಿದ ಆರೋಪಗಳಿಗೆ ಯಾವುದೇ ನಿರ್ದಿಷ್ಟ ಆಧಾರವಿಲ್ಲ ಎಂದು ಹೇಳಿದೆ.

“ಪೆಗಾಸಸ್ ಗೂಢಚರ್ಯೆ ಹಗರಣವು ಗಂಭಿರ ಸಮಸ್ಯೆಯಲ್ಲ. ಐಟಿ ಸಚಿವರು ಈಗಾಗಲೇ ಉಭಯ ಸದನಗಳಲ್ಲಿ ಈ ವಿಷಯದ ಬಗ್ಗೆ ವಿವರವಾದ ಹೇಳಿಕೆಯನ್ನು ನೀಡಿದ್ದಾರೆ. ಸಮಸ್ಯೆಯಲ್ಲದ, ಗಂಭೀರವಲ್ಲದ ವಿಷಯದ ಮೇಲೆ ಪ್ರತಿಪಕ್ಷಗಳು ಪ್ರತಿಭಟನೆ  ನಡೆಸುತ್ತಿವೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿವಾದಿತ ಹೇಳಿಕೆ ನೀಡಿದ್ದಾರೆ.

ಪೆಗಾಸಸ್‌ ಪಟ್ಟಿಯಲ್ಲಿ ರಾಹುಲ್ ಗಾಂಧಿ, ಇಬ್ಬರು ಒಕ್ಕೂಟ ಸರ್ಕಾರದ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ರೈಲ್ವೆ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಮಾಜಿ ಸಿಬಿಐ ಮುಖ್ಯಸ್ಥ, ಉದ್ಯಮಿ ಅನಿಲ್ ಅಂಬಾನಿ ಮತ್ತು ಕನಿಷ್ಠ 40 ಪತ್ರಕರ್ತರು ಸೇರಿದಂತೆ ಪ್ರತಿಪಕ್ಷ ನಾಯಕರು ಇದ್ದಾರೆ.


ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...