Homeಮುಖಪುಟಕಾಂಗ್ರೆಸ್ ’ಬೇಹುಗಾರಿಕೆಯ ಜೇಮ್ಸ್ ಬಾಂಡ್’ ಎಂದ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ

ಕಾಂಗ್ರೆಸ್ ’ಬೇಹುಗಾರಿಕೆಯ ಜೇಮ್ಸ್ ಬಾಂಡ್’ ಎಂದ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ

- Advertisement -
- Advertisement -

ಪೆಗಾಸಸ್ ಗೂಢಚರ್ಯೆ ಆರೋಪಗಳ ಕುರಿತು ಚರ್ಚೆಗೆ ಆಗ್ರಹಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಮೇಲೆ ದಾಳಿ ನಡೆಸಿರುವ ಒಕ್ಕೂಟ ಸರ್ಕಾರದ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಪಕ್ಷವು “ಬೇಹುಗಾರಿಕೆಯ ಜೇಮ್ಸ್ ಬಾಂಡ್” ಆಗಿತ್ತು ಎಂದು ಭಾನುವಾರ ಹೇಳಿದ್ದಾರೆ.

ಅಂದು ಬೇಹುಗಾರಿಕೆಯ ಜೇಮ್ಸ್ ಬಾಂಡ್ ಆಗಿದ್ದ ಪಕ್ಷ ಈಗ ಸುಳ್ಳು ಮತ್ತು ಸಮಸ್ಯೆಯಲ್ಲದ ವಿಷಯದ ಕುರಿತು ಚರ್ಚಿಸಲು ಸಂಸತ್ತಿನ ಸಮಯವನ್ನು ವ್ಯರ್ಥ ಮಾಡಲು ಬಯಸುತ್ತಿದೆ ಎಂದು ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಜನರಿಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದಿರುವ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ, ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಮುರಿಯುತ್ತದೆ. ಲೋಕಸಭೆ ಮತ್ತು ರಾಜ್ಯಸಭೆಗಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹಲವು ದೇಶಗಳಿಗೆ ‘ಪೆಗಾಸಸ್‌‌’ ಅನ್ನು ತಾತ್ಕಾಲಿಕವಾಗಿ ತಡೆಹಿಡಿದ ಎನ್‌ಎಸ್‌‌ಒ!

ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, “ಪ್ರತಿಪಕ್ಷಗಳು ಮೊದಲು ನಮಗೆ ಕೊರೊನಾದ ಬಗ್ಗೆ ಚರ್ಚೆ ಬೇಕು ಎಂದು ಹೇಳಿದರು. ನಂತರ ನಮಗೆ ರೈತರ ಬಗ್ಗೆ ಚರ್ಚೆ ಬೇಕು ಎಂದು ಹೇಳಿ ಅದನ್ನೂ ಮಾಡಲಿಲ್ಲ. ಈಗ ಸುಳ್ಳು ಮತ್ತು ಸಮಸ್ಯೆಯಲ್ಲದ ವಿಷಯದ ಕುರಿತು ಚರ್ಚಿಸಲು ಸಂಸತ್ತಿನ ಸಮಯವನ್ನು ವ್ಯರ್ಥ ಮಾಡಲು ಬಯಸುತ್ತಿದ್ದಾರೆ” ಎಂದಿದ್ದಾರೆ.

’ದೇಶದ ವಿವಿಧ ಭಾಗಗಳಲ್ಲಿ ಪ್ರವಾಹದ ಸಮಸ್ಯೆ ಉಂಟಾಗಿದೆ ಅದರ ಬಗ್ಗೆ ಅಥವಾ ಬೆಲೆ ಏರಿಕೆ ಸಮಸ್ಯೆಯ ಬಗ್ಗೆ ಚರ್ಚಿಸಲು ಯಾವುದೇ ಆಸಕ್ತಿಯನ್ನು ತೋರಿಸುತ್ತಿಲ್ಲ” ಎಂದು ನಖ್ವಿ ಹೇಳಿದ್ದಾರೆ.

“ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಗೂಢಚರ್ಯೆಯ ಜೇಮ್ಸ್ ಬಾಂಡ್ ಆಗಿತ್ತು. ಅವರು ಅಧಿಕಾರದಲ್ಲಿದ್ದಾಗ ಬೇಹುಗಾರಿಕೆ ನಡೆಸುತ್ತಾರೆ ಮತ್ತು ವಿರೋಧ ಪಕ್ಷದಲ್ಲಿರುವಾಗ ಗೂಢಚರ್ಯೆ ನಡೆಸಿದ ಹುನ್ನಾರವನ್ನು ಸೃಷ್ಟಿಸುತ್ತಾರೆ” ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಜುಲೈ 19 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಪೆಗಾಸಸ್ ಮತ್ತು ರೈತರ ಸಮಸ್ಯೆಗಳ ಕುರಿತು ವಿರೋಧ ಪಕ್ಷಗಳ ನಿರಂತರ ಪ್ರತಿಭಟನೆಗಳ ನಡುವೆ ಕೆಲವು ಮಸೂದೆಗಳು ಅಂಗೀಕಾರವಾಗಿವೆ. ಇದರ ಹೊರತು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಯಾವುದೇ ಮಹತ್ವದ ನಿರ್ಣಯಗಳು ಹೊರ ಬಂದಿಲ್ಲ.


ಇದನ್ನೂ ಓದಿ: ಪೆಗಾಸಸ್ ಗೂಢಚರ್ಯೆ ಸಮಸ್ಯೆಯಲ್ಲ: ವಿವಾದಿತ ಹೇಳಿಕೆ ನೀಡಿದ ಕೇಂದ್ರ ಸಚಿವ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...