Homeಕ್ರೀಡೆಒಲಂಪಿಕ್ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

- Advertisement -
- Advertisement -

ಟೊಕಿಯೊ ಒಲಿಂಪಿಕ್ಸ್‌‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ವಿಶ್ವದ ಎರಡನೆ ಶೇಯಾಂಕದಲ್ಲಿರುವ ಆಸ್ಟ್ರೇಲಿಯಾವನ್ನು 1-0 ಅಂತರದಲ್ಲಿ ಸೋಲಿಸಿ ಸೆಮಿಫೈನಲ್‌ ತಲುಪಿದೆ. ಈ ಮೂಲಕ ಒಲಿಂಪಿಕ್‌ ಇತಿಹಾಸದಲ್ಲೇ ಭಾರತೀಯ ಮಹಿಳಾ ತಂಡ ಮೊದಲ ಬಾರಿಗೆ ಸಮಿಫೈನಲ್ ತಲುಪಿದೆ. ಸೆಮಿಫೈನಲ್‌ ಆಗಸ್ಟ್‌ 4 ರ ಬುಧವಾರ ನಡೆಲಿದೆ.

ಭಾರತೀಯ ಮಹಿಳಾ ಹಾಕಿ ತಂಡ ಪದಕ್ಕೆ ಮುತ್ತಿಡಲು ಇನ್ನು ಒಂದು ಪಂದ್ಯಗಳು ಬಾಕಿಯಿದ್ದು, ಒಂದು ಪಂದ್ಯ ಗೆದ್ದರೆ ಚಿನ್ನಕ್ಕಾಗಿ ಸೆಣಸಲಿದೆ.

ಭಾನುವಾರ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತ ಪುರುಷರ ತಂಡ ಗ್ರೇಟ್‌ ಬ್ರಿಟನ್‌ ತಂಡವನ್ನು 3-1 ಅಂತರದಲ್ಲಿ ಸೋಲಿಸಿ ಸೆಮಿಫೈನಲ್‌ ತಲುಪಿದೆ. ಸೆಮಿಫೈನಲ್‌ ನಾಳೆ ಬೆಳಿಗ್ಗೆ 7 ಗಂಟೆಗೆ ನಡೆಯಲಿದ್ದು, ಭಾರತವು ಬೆಲ್ಜಿಯಂ ವಿರುದ್ದ ಹೋರಾಡಲಿದೆ.

ಇದನ್ನೂ ಓದಿ: ಒಲಿಂಪಿಕ್: ಚಿನ್ನದ ಕನಸು ಭಗ್ನ; ಭಾನುವಾರ ಕಂಚಿನ ಪದಕಕ್ಕೆ ಸೆಣಸಲಿರುವ ಪಿವಿ ಸಿಂಧು!

ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನಲ್ಲಿ ಸಮಿಫೈನಲ್ ತಲುಪಿದ್ದ ದೇಶದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ಚೈನೀಸ್ ತೈಪೈನ ಥಾಯಿ ತ್ಸು ಯಿಂಗ್‌‌ ವಿರುದ್ದ ಶನಿವಾರ ಸೋತಿದ್ದರು. ನಂತರ ಭಾನುವಾರ ಕಂಚಿನ ಪದಕಕ್ಕಾಗಿ ಸೆಣಸಿದ್ದ ಸಿಂಧು ಚೀನಾದ ಹಿ ಬಿಂಗ್‌ಜಾವ್‌‌ ಅವರ ವಿರುದ್ದ 21-13, 21-15 ಅಂತರದಲ್ಲಿ ನೇರ ಸುತ್ತಿನಲ್ಲಿ ಜಯಭೇರಿ ಬಾರಿಸಿದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೆ ಪದಕವನ್ನು ತಂದುಕೊಟ್ಟಿದ್ದಾರೆ.

ಕಳೆದ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸಿಂಧು, ಒಲಿಂಪಿಕ್‌ನಲ್ಲಿ ಎರಡು ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿ ಹೊರಹೊಮ್ಮಿದ್ದಾರೆ.

ಶನಿವಾರ ಭಾರತದ ಡಿಸ್ಕಸ್ ಎಸೆತಗಾರ್ತಿ‌ ಕಮಲ್‌ಪ್ರೀತ್ ಕೌರ್ ಒಲಿಂಪಿಕ್ಸ್‌ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದು, ಅರ್ಹತಾ ಸುತ್ತಿನಲ್ಲಿ ಎರಡನೇ ಸ್ಥಾನ ಪಡೆದು ಫೈನಲ್‌ಗೆ ತಲುಪಿದ್ದಾರೆ. 25 ವರ್ಷದ ಕಮಲ್‌ಪ್ರೀತ್‌‌‌ ಬಿ ಗ್ರೂಪ್‌ನಲ್ಲಿದ್ದು ತನ್ನ ಮೂರನೇ ಮತ್ತು ಅಂತಿಮ ಎಸೆತದಲ್ಲಿ ಡಿಸ್ಕಸ್ ಅನ್ನು 64 ಮೀಟರ್ ದೂರಕ್ಕೆ ಎಸೆದು ಎರಡನೆ ಸ್ಥಾನಕ್ಕೆ ತಲುಪಿದ್ದಾರೆ. ಫೈನಲ್‌ ಪಂದ್ಯವು ಸೋಮವಾರ(ಇಂದು) ಸಂಜೆ 4:30 ಕ್ಕೆ ನಡೆಯಲಿದೆ. ಫೈನಲ್‌ನಲ್ಲಿ ಒಟ್ಟು 12 ಮಂದಿ ಸ್ಪರ್ಧಿಗಳಿದ್ದಾರೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಮುಂದಿನ ಪಂದ್ಯವನ್ನು ಆಗಸ್ಟ್‌‌ 4 ರ ಬುಧವಾರದಂದು ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ದ ಸೆಣಸಲಿದ್ದಾರೆ. ಅಲ್ಲಿ ಗೆದ್ದರೆ ಅವರು ಚಿನ್ನದ ಪದಕ ಪಡೆಯಲು ಒಂದು ಪಂದ್ಯವನ್ನು ಆಡಬೇಕಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಕ್ವಾರ್ಟರ್ ಫೈನಲ್ ತಲುಪಿದ್ದ ಭಾರತದ ಸತೀಶ್ ಕುಮಾರ್ ಅವರು ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರ ವಿರುದ್ದ 5-0 ಅಂಕದಲ್ಲಿ ಸೋಲುಂಡಿದ್ದಾರೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ನಲ್ಲಿ ಪಿವಿ ಸಿಂಧು ಎರಡನೆ ಪದಕ ಗೆದ್ದುಕೊಂಡಿದ್ದಾರೆ. ಭಾರತಕ್ಕೆ ಮತ್ತೊಂದು ಪದಕ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಖಚಿತಗೊಂಡಿದೆ.

ಇದನ್ನೂ ಓದಿ: ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಜೀವನ ಆಧಾರಿತ ಚಿತ್ರ ನಿರ್ಮಾಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...