Homeಮುಖಪುಟಕೇದಾರನಾಥ ಯಾತ್ರೆಗೆ ಅವಕಾಶ ನೀಡಬೇಕು: ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್

ಕೇದಾರನಾಥ ಯಾತ್ರೆಗೆ ಅವಕಾಶ ನೀಡಬೇಕು: ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್

- Advertisement -
- Advertisement -

ಕೇದಾರನಾಥ ಯಾತ್ರೆಯನ್ನು ಉತ್ತರಾಖಂಡ ಸರ್ಕಾರ ನಿಲ್ಲಿಸಿಲ್ಲ. ಬದಲಿಗೆ ‘ಉನ್ನತ’ ಆದೇಶಗಳಿಂದ ನಿಲ್ಲಿಸಲಾಗಿದೆ ಎಂದು ಉತ್ತರಾಖಂಡದ ಮಾಜಿ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಆರೋಪಿಸಿದ್ದಾರೆ.

ಕೋವಿಡ್ ಎರಡನೇ ಅಲೆಯ ನಡುವೆಯೂ ಉತ್ತರಾಖಂಡದಲ್ಲಿ ಕುಂಭಮೇಳ ನಡೆಸಿದ ಟೀಕೆಗೆ ಗುರಿಯಾಗಿದ್ದ ಮಾಜಿ ಸಿಎಂ ತೀರತ್ ಸಿಂಗ್ ರಾವತ್‌ರವರನ್ನು ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲಾಗದೆ. ಅವರ ಬದಲಿಗೆ ಪುಷ್ಕರ್‌ ಸಿಂಗ್ ಧಾಮಿ ಈಗ ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಆರೋಪದ ಕುರಿತು ಭಾರೀ ಚರ್ಚೆ ನಡೆಯುತ್ತಿದೆ.

ನಾನು ಸಿಎಂ ಆಗಿದ್ದಾಗ, ನಾವು ಹಂತ ಹಂತವಾಗಿ ಯಾತ್ರೆಗೆ ಅವಕಾಶ ನೀಡಿದ್ದೆವು. ಲಸಿಕೆ ಹಾಕಿದ ಜನರು ಮತ್ತು ಕೋವಿಡ್ ಮುಕ್ತ ಜಿಲ್ಲೆಗಳ ಜನರು ಕೇದಾರನಾಥ ಯಾತ್ರೆ ಭೇಟಿ ಮಾಡಲು ಅನುಮತಿಸಬೇಕು ಎಂದು ನಾನು ನಂಬುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಅಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ಈ ಬಾರಿಯ ಕೇದಾರನಾಥ ಯಾತ್ರೆಯನ್ನು ಮೊಟಕುಗೊಳಿಸಿದೆ. ಆದರೆ ಮೇಲಿನ ಆದೇಶಗಳು ಯಾತ್ರೆನ್ನು ತಡೆಯುತ್ತಿವೆ ಎಂದು ಮಾಜಿ ಸಿಎಂ ಹೇಳುವ ಮೂಲಕ ಅವರು ಬಿಜೆಪಿ ಹೈಕಮಾಂಡ್ ವಿರುದ್ಧ ಕಿಡಿಕಾರಿದ್ದಾರೆ.

ಮುಂದಿನ ವರ್ಷದ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಅದನ್ನು ಗೆಲ್ಲುವುದಕ್ಕಾಗಿಯೇ ಭಕ್ತಾಧಿಗಳನ್ನು ಒಲೈಸಲು ಈ ವರ್ಷದ ಮಾರ್ಚ್-ಏಪ್ರಿಲ್‌ನಲ್ಲಿ ಭಾರೀ ವಿರೋಧದ ನಡುವೆಯೂ ಕುಂಭಮೇಳ ನಡೆಸಲಾಗಿತ್ತು. ಈಗ ಅದನ್ನೆ ದಾಳವಾಗಿಟ್ಟುಕೊಂಡು ಮಾಜಿ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಉತ್ತರಾಖಂಡದಲ್ಲಿ 2017ರಲ್ಲಿ ಬಿಜೆಪಿ ಸರ್ಕಾರ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತ್ತು. ಇದರ ನಾಯಕರಾಗಿ ರಾವತ್ ಆಯ್ಕೆಯಾಗಿದ್ದರು. ಆದರೆ ಕಾರ್ಯವೈಖರಿ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಅಪಸ್ವರ ಎತ್ತಿದ್ದರು. ರಾವತ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸದಿದ್ದರೆ, ರಾಜೀನಾಮೆ ನೀಡುವ ಬಗ್ಗೆ ಎಚ್ಚರಿಕೆ ನೀಡಿದ್ದರು. ಹಾಗಾಗಿ ಕಳೆದ ಮಾರ್ಚ್‌ನಲ್ಲಿ ಅವರು ರಾಜೀನಾಮೆ ನೀಡಿದ್ದರು.

ಮುಖ್ಯಮಂತ್ರಿಯಿಂದ ಕೆಳಗಿಳಿದ ನಂತರವೂ ಸಹ “ಕೊರೊನಾ ವೈರಸ್ ಒಂದು ಜೀವಂತ ಜೀವಿ, ನಮ್ಮಂತೆ ಅದಕ್ಕೂ ಬದುಕುವ ಹಕ್ಕು ಇದೆ” ಎಂದು ತ್ರಿವೇಂದ್ರ ಸಿಂಗ್ ರಾವತ್ ಹೇಳಿಕೆ ನೀಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗಿದ್ದರು.

ಅವರ ನಂತರ ಸಿಎಂ ಆದ ತೀರತ್ ಸಿಂಗ್ ರಾವತ್ ತಜ್ಞರ ವಿರೋಧದ ನಡುವೆಯೂ ಕುಂಭಮೇಳವನ್ನು ನಡೆಸಿ ಅದನ್ನು ಸಮರ್ಥಿಸಿಕೊಂಡಿದ್ದರು. ಅದರಿಂದಾಗಿಯೇ ಲಕ್ಷಾಂತರ ಜನಕ್ಕೆ ಕೋವಿಡ್ ತಗುಲಿದೆ ಎಂದು ತಜ್ಞರು ಆರೋಪಿಸಿದ್ದರು. ಮುಖ್ಯಮಂತ್ರಿಯಾಗಿ ಮುಂದುವರೆಯಲು ಆರು ತಿಂಗಳೊಳಗೆ ಅವರು ಯಾವುದಾದರೂ ಸದನದ ಸದಸ್ಯರಾಗಬೇಕಿತ್ತು. ಉತ್ತರಾಖಂಡದಲ್ಲಿ ವಿಧಾನ ಪರಿಷತ್ ಅಸ್ತಿತ್ವದಲ್ಲಿಲ್ಲ. ಅಲ್ಲದೇ ಕೊರೊನಾ ಕಾರಣದಿಂದ ಚುನಾವಣಾ ಆಯೋಗವು ಸದ್ಯಕ್ಕೆ ಉಪ ಚುನಾವಣೆ ನಡೆಸುವುದು ಕಷ್ಟಕರ ಎಂಬ ಕಾರಣ ನೀಡಿ ಬಿಜೆಪಿ ಹೈಕಮಾಂಡ್ ಅವರನ್ನು ಮೇ ಅಂತ್ಯದಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದೆ. ಈಗ ಪುಷ್ಕರ್‌ ಸಿಂಗ್ ಧಾಮಿ ನೂತನ ಸಿಎಂ ಆಗಿದ್ದಾರೆ.


ಇದನ್ನೂ ಓದಿ: Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...