Homeಮುಖಪುಟದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

ದೆಹಲಿ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಜೊತೆಯಲ್ಲಿರುತ್ತೇನೆ: ರಾಹುಲ್ ಗಾಂಧಿ

- Advertisement -
- Advertisement -

ದೇಶದಲ್ಲಿ ಆಕ್ರೋಶಕ್ಕೆ ಕಾರಣವಾಗಿರುವ ದೆಹಲಿಯ ದಲಿತ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಬುಧವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ. ಸಂತ್ರಸ್ತ ಕುಟುಂಬ ನ್ಯಾಯವನ್ನಲ್ಲದೆ ಬೇರೆನೂ ಕೇಳುತ್ತಿಲ್ಲ, ಅವರಿಗೆ ನ್ಯಾಯ ಸಿಗುವವರೆಗೂ ನಾನು ಅವರ ಜೊತೆಯಲ್ಲಿರುತ್ತೇನೆ ಎಂದು ತಿಳಿಸಿದ್ದಾರೆ.

ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಒಂಬತ್ತು ವರ್ಷದ ದಲಿತ ಬಾಲಕಿ ಮೇಲೆ ಪೂಜಾರಿಯೊಬ್ಬ ಅತ್ಯಾಚಾರವೆಸಗಿ ಕೊಲೆಗೈದಿದ್ದಾರೆ. ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಆರೋಪಿಸಿ, ಬಲವಂತವಾಗಿ ಅಪ್ರಾಪ್ತೆಯ ಶವಸಂಸ್ಕಾರ ಮಾಡಲಾಗಿತ್ತು.

“ನಾನು ಸಂತ್ರಸ್ತ ಕುಟುಂಬದೊಂದಿಗೆ ಮಾತನಾಡಿದ್ದೇನೆ. ಅವರಿಗೆ ನ್ಯಾಯ ಬಿಟ್ಟು ಬೇರೇನೂ ಬೇಕಿಲ್ಲ. ಅವರಿಗೆ ನ್ಯಾಯ ಬೇಕಾಗಿದೆ. ಅದಕ್ಕೆ ನಾನು ಸಹಾಯ ಮಾಡಬೇಕು ಎಂದು ಕೇಳಿದ್ದಾರೆ. ನಾನು ಅವರಿಗೆ ನ್ಯಾಯ ಸಿಗುವವರೆಗೂ ಅವರ ಜೊತೆಯಲ್ಲಿಯೇ ಇರುತ್ತೇನೆ ಎಂದು ಮಾತು ಕೊಟ್ಟಿದ್ದೇನೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ ಎಂದಿ ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನು ಓದಿ: ದಲಿತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಮತ್ತು ಬಲವಂತದ ಶವಸಂಸ್ಕಾರ: ಪೂಜಾರಿಯ ಬಂಧನ

ಮೃತ ಬಾಲಕಿಯ ಸಂತ್ರಸ್ತ ಕುಟುಂಬದ ಭೇಟಿ ಬಳಿಕ ಟ್ವೀಟ್ ಮಾಡಿರುವ ಅವರು, “ಆಕೆಯ ಹೆತ್ತವರ ಕಣ್ಣೀರು ಒಂದೇ ಒಂದು ಮಾತನ್ನು ಹೇಳುತ್ತಿದೆ. ಅವರ ಮಗಳು, ಈ ದೇಶದ ಮಗಳು ನ್ಯಾಯಕ್ಕೆ ಅರ್ಹಳು. ನಾನು ನ್ಯಾಯದ ಹಾದಿಯಲ್ಲಿ ಅವರೊಂದಿಗೆ ಇದ್ದೇನೆ” ಎಂದಿದ್ದಾರೆ.

ಮಂಗಳವಾರ ಕೂಡ ರಾಹುಲ್ ಗಾಂಧಿ “ದಲಿತರ ಮಗಳು ಕೂಡ ದೇಶದ ಮಗಳು” ಎಂದು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು, ಪಿ.ವಿ ಸಿಂಧು ಮತ್ತು ಲವ್ಲಿನಾ ಬೋರ್ಗಹೈನ್ ಮತ್ತು ಮಹಿಳಾ ಹಾಕಿ ತಂಡ ಅದ್ವೀತಿಯ ಪ್ರದರ್ಶನ ನೀಡಿ ಎಲ್ಲಡೆ ಪ್ರಶಂಸೆ ಗಳಿಸುತ್ತಿದ್ದಾರೆ. ಅವರನ್ನು ಭಾರತದ ಮಗಳು ಎಂದು ಕರೆಯಲಾಗುತ್ತಿದೆ. ಆದರೆ ಇನ್ನೊಂದು ಕಡೆ ಭಾರತದ ದಲಿತ ಹೆಣ್ಣು ಮಗಳನ್ನು ಅತ್ಯಾಚಾರವೆಸಗಿ ಕೊಲೆಗೈಯಲಾಗಿದೆ ಎಂಬರ್ಥದಲ್ಲಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.

ಇತ್ತ, ಮರಣೋತ್ತರ ಪರೀಕ್ಷೆ ಅನಿಶ್ಚಿತವಾಗಿದೆ. ಆರೋಪಿಯನ್ನು ಸುಳ್ಳು ಪತ್ತೆಕಾರಕ (lie detector) ಮತ್ತು ಔಷಧ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಉಪ ಪೊಲೀಸ್ ಆಯುಕ್ತ (ಆಗ್ನೇಯ ದೆಹಲಿ) ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ವಿಧಿವಿಜ್ಞಾನ ಪರೀಕ್ಷೆಯಲ್ಲಿ ಯಂತ್ರದ ಮೂಲಕ ವಿದ್ಯುತ್ ಪ್ರವಹಿಸುತ್ತಿರುವುದು ಕಂಡುಬಂದಿದೆ. ಬಾಲಕಿಗೆ ಕರೆಂಟ್ ಷಾಕ್ ತಗಲಿರುವುದನ್ನು ಪ್ರಾಥಮಿಕ ವರದಿಗಳು ದೃಢಪಡಿಸಿವೆ. ನಾವು ಶೀಘ್ರದಲ್ಲೇ ಚಾರ್ಜ್ ಶೀಟ್ ಹಾಕಲಿದ್ದೇವೆ. ಅದಕ್ಕೆ 60 ದಿನಗಳ ಕಾಲಾವಕಾಶವಿದೆ ಎಂದು ಇಂಗಿತ್ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ದೆಹಲಿಯ ಮೋಹನ್ ಲಾಲ್ ಮತ್ತು ಸುನೀತಾ ದೇವಿ ಎಂಬ ದಂಪತಿಗಳು ದಂಪತಿಗಳು 9 ವರ್ಷದ ಮಗಳೊಂದಿಗೆ ಹಳೆಯ ನಂಗಲ್ ಗ್ರಾಮದಲ್ಲಿ ಶ್ಮಶಾನದ ಮುಂಭಾಗದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಭಾನುವಾರ ಸಂಜೆ 5.30ರ ಸಮಯಕ್ಕೆ ಶ್ಮಶಾನದಲ್ಲಿನ ಕೂಲರ್‌ನಲ್ಲಿ ನೀರು ತರಲು ಅಪ್ರಾಪ್ತ ಬಾಲಕಿ ಹೋಗಿದ್ದಳು. ಆದರೆ ಸಂಜೆ 6 ಗಂಟೆಯಾದರೂ ವಾಪಸ್ ಬಂದಿರಲಿಲ್ಲ. ಅದೇ ಸಮಯಕ್ಕೆ ಶ್ಮಶಾನದಲ್ಲಿನ ಪೂಜಾರಿ ಮತ್ತು ಇತರರು ಸುನೀತಾ ದೇವಿಯವರನ್ನು ಕರೆದು ಅವರ ಮಗಳ ಮೃತದೇಹ ತೋರಿಸಿ ನೀರು ತರುವಾಗ ಕರೆಂಟ್ ಷಾಕ್ ತಗಲಿ ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ.

ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೆ ಅವರು ಪೋಸ್ಟ್ ಮಾರ್ಟಂ ಮಾಡುತ್ತಾರೆ, ನಿಮ್ಮ ಮಗಳ ದೇಹವನ್ನು ಛಿದ್ರ ಛಿದ್ರ ಮಾಡುತ್ತಾರೆ. ಹಾಗಾಗಿ ಬೇಗನೇ ಶವಸಂಸ್ಕಾರ ಮಾಡೋಣ ಎಂದು ತಾಯಿ ಬಳಿ ಹೆದರಿಸಿದರು. ಕಾನೂನಿನಿಂದ ತಪ್ಪಿಸಿಕೊಳ್ಳಲು ನಮ್ಮ ಒಪ್ಪಿಗೆ ಪಡೆಯದೇ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಸಂತ್ರಸ್ತ ಪೋಷಕರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ನಂತರ ಈ ಪ್ರಕರಣದ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ತಲುಪುವ ವೇಳೆಗೆ ಮೃತ ಬಾಲಕಿಯ ಸುಟ್ಟ ಕಾಲುಗಳು ಮಾತ್ರ ಸಿಕ್ಕಿವೆ. ಸ್ಥಳೀಯರಿಂದ ಪ್ರತಿಭಟನೆ ನಡೆದ ನಂತರ ಪೊಲೀಸರು FSL ತಂಡವನ್ನು ಕರೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪೂಜಾರಿ ಸೇರಿದಂತೆ ಇತರ ಮೂವರ ಮೆಲೆ FIR ದಾಖಲಿಸಿ, ಬಂಧಿಸಿದ್ದಾರೆ. ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಅನೇಕರು ದಲಿತ ಬಾಲಕಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...