- Advertisement -
- Advertisement -
ಶ್ರೀನಗರದ ನೌಹಟ್ಟಾ ಪ್ರದೇಶದ ಜಾಮಿಯಾ ಮಸೀದಿ ಬಳಿ ಗುರುವಾರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಅಥವಾ ಗಾಯಾಳುಗಳ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಧಾರಿತ ಸ್ಫೋಟಕ ಸಾಧನ (ಐಇಡಿ) ಎಂದು ಶಂಕಿಸಲಾಗಿರುವ ಸ್ಫೋಟವು ಮಧ್ಯಾಹ್ನ ಸುಮಾರಿಗೆ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸ್ಫೋಟ ಸಂಭವಿಸಿದ ನಂತರ ಆ ಪ್ರದೇಶದಲ್ಲಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಗಾಳಿಯಲ್ಲಿ ಕೆಲವು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಸ್ಫೋಟದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯದ ವರದಿಯಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ‘ವಿದ್ಯುತ್ ತಿದ್ದುಪಡಿ ಮಸೂದೆ-2021’: ರೈತರ ಕೃಷಿ ಪಂಪ್‌ಸೆಟ್‌ಗೂ ವಿದ್ಯುತ್ ಮೀಟರ್ ಅಳವಡಿಸುವತ್ತ ಸರ್ಕಾರ



Sorry no POOJARI involved very sad issue