Homeಕ್ರೀಡೆಒಲಂಪಿಕ್ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ನೀರಜ್ ಚೋಪ್ರಾ: ‘ಚಿನ್ನದ ತೋಳಿನ ಹುಡುಗ’ ನಡೆದು ಬಂದ ದಾರಿ

ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ 13 ವರ್ಷಗಳ ನಂತರ ಭಾರತದ ರಾಷ್ಟ್ರಗೀತೆ, ಅದರರಲ್ಲೂ ಒಲಿಂಪಿಕ್ಸ್‌‌ನ ಅಥ್ಲೆಟಿಕ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಲಾಗಿದೆ.

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಈಟಿಯನ್ನು ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಈ ಮೂಲಕ ಒಲಿಂಪಿಕ್ಸ್‌ ಕ್ರೀಂಡಾಗಣದಲ್ಲಿ ಭಾರತದ ರಾಷ್ಟ್ರಗೀತೆಯನ್ನು 13 ವರ್ಷಗಳ ನಂತರ ಹಾಡಿಸುವಂತೆ ಮಾಡಿದರು. ಜೊತೆಗೆ ಭಾರತೀಯ ರಾಷ್ಟ್ರಗೀತೆಯು ಒಲಿಂಪಿಕ್ಸ್‌‌ನ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ಮೊದಲ ಬಾರಿಗೆ ನುಡಿಸಿದ ಕೀರ್ತಿ ನೀರಜ್‌ ಚೋಪ್ರಾ ಅವರ ಪಾಲಿಗೆ ದಕ್ಕಿದೆ. ಇಷ್ಟೇ ಅಲ್ಲದೆ ಸುಮಾರು 121 ವರ್ಷಗಳ ನಂತರ ಭಾರತಕ್ಕೆ ಒಲಿಂಪಿಕ್ಸ್‌ನಲ್ಲಿ ಮೊದಲ ಭಾರಿಗೆ ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ ಪದಕ ಲಭಿಸಿದೆ. ಟ್ರ್ಯಾಕ್ ಮತ್ತು ಫೀಲ್ಡ್‌ನಲ್ಲಿ 1900 ರಲ್ಲಿ ನಾರ್ಮನ್ ಪ್ರಿಚಾರ್ಡ್ ಅವರು ಪಡೆದ ಪದಕವೆ ಭಾರತಕ್ಕೆ ಕೊನೆಯದ್ದಾಗಿತ್ತು.

ಆಟದ ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು, ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಚೆಕ್ ರಿಪಬ್ಲಿಕ್‌ನ ವಿ.ವೆಸ್ಲಿ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೆ.ವೆಬರ್ 85.30 ಎಸೆದು ಕಂಚು ತನ್ನದಾಗಿಸಿಕೊಂಡರು.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಅವರು ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು. ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವು ಇದುವೆರೆಗೂ ಏಳು ಪದಕಗಳನ್ನು ಪಡೆದಿದ್ದು, ಒಂದು ಚಿನ್ನ, ಎರಡು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದೆ.

ಚಿನ್ನ ಗೆದ್ದ ಚೋಪ್ರಾ ಅವರ ಸಾಧನೆಯ ಹಾದಿ ಹೀಗಿದೆ

24 ವರ್ಷದ ನೀರಜ್‌ ಚೋಪ್ರಾ ಅವರು ಮೂಲತಃ ಹರ್ಯಾಣದ ಪಾಣಿಪತ್ ಜಿಲ್ಲೆಯ ಖಂದ್ರಾ ಎಂಬ ಹಳ್ಳಿಯವರು. ಇವರು 2016ರಲ್ಲಿ ಮೊದಲ ಬಾರಿಗೆ ಭಾರತವನ್ನು ಪ್ರತಿನಿಧಿಸಿ, ಐಎಎಎಫ್‌ (ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಅತ್ಲೆಟಿಕ್ಸ್ ಫೆಡರೇಶನ್) ಕಿರಿಯರ ವಿಶ್ವ ಕ್ರೀಡಾಕೂಟದಲ್ಲಿ ಗೆದ್ದು ಚಾಂಪಿಯನ್‌ ಆಗಿ ಮಿಂಚಿದ್ದರು.

ನೀರಜ್ ಅವರ ಗ್ರಾಮವಾದ ಖಾಂಡ್ರಾದ ಅವರ ಮನೆಯಲ್ಲಿ ಸಂಭ್ರಮ

ನಂತರ, 2018ರ ಏಷ್ಯನ್ ಗೇಮ್ಸ್‌ ಮತ್ತು ಕಾಮನ್‌ವೆಲ್ತ್‌ನಲ್ಲಿ ಭಾಗವಹಿಸಿದ್ದ ಇವರು ಎರಡೂ ಕ್ರೀಡಾ ಕೂಟದಲ್ಲಿಯೂ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೆ,ಏಷ್ಯನ್ ಗೇಮ್ಸ್‌ನಲ್ಲಿ 88.06 ಮೀ ದೂರ ಜಾವೆಲಿನ್ ಎಸೆದು ರಾಷ್ಟ್ರೀಯ ದಾಖಲೆ ಬರೆದಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

2018ರ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಬಾವುಟ ಹಿಡಿದು ಭಾರತದ ಕ್ರೀಡಾಳುಗಳನ್ನು ಪ್ರತಿನಿಧಿಸುವ ಅವಕಾಶವೂ ಇವರಿಗೆ ದಕ್ಕಿದ್ದು, ಇವರಿಗೆ ಮತ್ತೊಂದು ಹಿರಿಮೆಯನ್ನು ತಂದುಕೊಟ್ಟಿತ್ತು.

2017ರ ಏಷ್ಯನ್ ಅತ್ಲೆಟಿಕ್ ಚಾಂಪಿಯನ್ ಶಿಪ್ಸ್ ನಲ್ಲಿ ನೀರಜ್ 85.23 ಮೀ. ಜಾವೆಲಿನ್ ಎಸೆದು ಸ್ವರ್ಣ ಪದಕ ಪಡೆದಿದ್ದಾರೆ. 2018ರ ಮೇ ತಿಂಗಳಲ್ಲಿ ನಡೆದ ದೋಹ ಡೈಮಂಡ್ ಲೀಗ್ ಪಂದ್ಯದಲ್ಲಿ ಭಾಗವಹಿಸಿ 87.43 ಮೀ. ಜಾವೆಲಿನ್ ಎಸೆಯುವುದರೊಂದಿಗೆ ಹಳೆಯ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ. ಫಿನ್ ಲ್ಯಾಂಡಿನ ಲ್ಯಾಪಿನ್ಲಾಟಿಯಲ್ಲಿ ನಡೆದ ‘ಸಾವೋ ಗೇಮ್ಸ್‌’ನಲ್ಲಿ ನೀರಜ್‌ ಸ್ವರ್ಣ ಪದಕ ಪಡೆದಿದ್ದಾರೆ.

6 ಚಿನ್ನದ ಪದಕಗಳನ್ನು ಗೆದ್ದಿರುವ ಚೋಪ್ರಾ

  • 2016ರ ಸೌತ್‌ ಎಷ್ಯನ್‌ ಕ್ರೀಡಾ ಕೂಟ
  • 2016ರ ವಿಶ್ವ ಜೂನಿಯರ್ ಚಾಂಪಿಯನ್‌ ಶಿಪ್‌
  • 2017ರ ಏಷ್ಯನ್‌ ಚಾಂಪಿಯನ್‌ ಶಿಪ್‌
  • 2018ರ ಕಾಮನ್‌ವೆಲ್ತ್‌ ಕ್ರೀಡಾಕೂಟ
  • 2018ರ ಏಷ್ಯನ್ ಕ್ರೀಡಾಕೂಟ
  • 2021ರ ಟೋಕಿಯೋ ಒಲಿಂಪಿಕ್ಸ್‌

ಇದನ್ನೂ ಓದಿ: ‘ತಂಡದಲ್ಲಿ ದಲಿತರು ಹೆಚ್ಚು ಇದ್ದಿದ್ದರಿಂದ ಸೋಲಾಯಿತು!’; ಸಾಧಕಿ ವಂದನಾಗೆ ಜಾತಿ ನಿಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...