Homeಮುಖಪುಟತ್ರಿಪುರ: ಟಿಎಂಸಿಯ ಹಲವು ನಾಯಕರ ಬಂಧನ

ತ್ರಿಪುರ: ಟಿಎಂಸಿಯ ಹಲವು ನಾಯಕರ ಬಂಧನ

- Advertisement -
- Advertisement -

ತ್ರಿಪುರಾದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ತೃಣಮೂಲ ಪಕ್ಷದ 12 ನಾಯಕರು ಮತ್ತು ಕಾರ್ಯಕರ್ತರನ್ನು ಭಾನುವಾರ ಬಂಧಿಸಲಾಗಿದೆ. ಬಂಧಿತರಲ್ಲಿ ಶನಿವಾರ ತ್ರಿಪುರಾದ ಖೊವಾಯಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ದಾಳಿಯಲ್ಲಿ ಗಾಯಗೊಂಡ ಪಕ್ಷದ ಸದಸ್ಯರೂ ಇದ್ದಾರೆ. ಅವರನ್ನು ಬಿಗಿ ಭದ್ರತೆಯೊಂದಿಗೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತರನ್ನು ಭೇಟಿ ಮಾಡಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಸೋದರಳಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಟಿಎಂಸಿಯ ಉನ್ನತ ನಾಯಕರು ಅಗರ್ತಲಾಗೆ ತೆರಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಪ್ರತಿ ಹರಿದು ಪ್ರತಿಭಟನೆ: ರಾಜ್ಯಸಭೆಯಿಂದ ಟಿಎಂಸಿ ಸಂಸದ ಶಾಂತನು ಸೇನ್ ಅಮಾನತು

ರಾತ್ರಿ 7 ಗಂಟೆಯಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ವೇಳೆ ಅವರು ಕೊರೊನಾ ನಿರ್ಬಂಧಗಳನ್ನು ಉಲ್ಲಂಘಿಸಿ ಪ್ರಯಾಣ ಮಾಡಿದ್ದಾರೆ. ಹೀಗಾಗಿ 12 ಟಿಎಂಸಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಬಾಂಗ್ಶು ಭಟ್ಟಾಚಾರ್ಯ, ತಾನಿಯಾ ಪೊದ್ದಾರ್, ಸುದೀಪ್ ರಹಾ ಮತ್ತು ಜಯ ದತ್ತಾ ಸೇರಿದಂತೆ ಪಕ್ಷದ ನಾಯಕರನ್ನು ಬಂಧಿಸಲಾಗಿದೆ ಎಂದು ತ್ರಿಪುರಾ ಟಿಎಂಸಿ ವಕ್ತಾರ ಆಶಿಶ್ ಲಾಲ್ ಸಿಂಗ್ ಅವರು ಹೇಳಿದ್ದಾರೆ.

ಶನಿವಾರ ದಲೈ ಜಿಲ್ಲೆಯ ಅಂಬಾಸಾದಲ್ಲಿ ಬಿಜೆಪಿ ಕಾರ್ಯಕರ್ತರು ತಮ್ಮ ವಾಹನದ ಮೇಲೆ ದಾಳಿ ಮಾಡಿದಾಗ ರಾಹಾ ಮತ್ತು ದತ್ತಾ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪೆಗಾಸಸ್ ಹಗರಣ: ಒಕ್ಕೂಟ ಸರ್ಕಾರದ ವಿರುದ್ಧ ಟಿಎಂಸಿ, ಶಿವಸೇನೆ ವಾಗ್ದಾಳಿ

“ದಾಳಿಯ ನಂತರ, ನಾವು ರಾಷ್ಟ್ರೀಯ ಹೆದ್ದಾರಿ 8 ರ ಮೂಲಕ ಅಗರ್ತಲಾಕ್ಕೆ ಹಿಂತಿರುಗುತ್ತಿದ್ದೆವು. ಈ ವೇಳೆ ಪೊಲೀಸರು ನಮ್ಮ ವಾಹನಗಳನ್ನು ಖೋವಾಯಿಯಲ್ಲಿ ತಡೆದರು. ‘ದುಷ್ಕರ್ಮಿಗಳಿಂದ’ ನಮ್ಮ ಮೇಲೆ ಮತ್ತೆ ದಾಳಿಗಳು ನಡೆಯಬಹುದು ಎಂದು ಹೇಳಿ ನಮ್ಮನ್ನು ವಶಕ್ಕೆ ತೆಗೆದುಕೊಂಡರು. ನಿಜವಾಗಿ, NH 8 ರಲ್ಲಿ ನಮ್ಮ ಮೇಲೆ ದಾಳಿ ಮಾಡಲು ಬಿಜೆಪಿ ಕಾರ್ಯಕರ್ತರು ಹಲವಾರು ಸ್ಥಳಗಳಲ್ಲಿ ಜಮಾಯಿಸಿದ್ದರು” ಎಂದು ಆಶಿಶ್‌ ಲಾಲ್‌ ಹೇಳಿದ್ದಾರೆ.

ಆದಾಗ್ಯೂ, ಟಿಎಂಸಿ ಸದಸ್ಯರನ್ನು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿಗರು ತಮ್ಮ ಪಕ್ಷದ ಮೇಲೆ ನಡೆಸಿರುವ ದಾಳಿಯನ್ನು ಟಿಎಂಸಿ ನಾಯಕರು ತೀವ್ರವಾಗಿ ಟೀಕಿಸಿದ್ದಾರೆ. ಈ ಘಟನೆಯು ತ್ರಿಪುರಾದಲ್ಲಿ “ಗೂಂಡಾ ರಾಜ್ಯ” ಇದೆ ಎಂದು ಸಾಬೀತುಪಡಿಸಿದೆ. ಇದರ ಪರಿಣಾಮವನ್ನು 2023 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಮೂಲಕ ಎದುರಿಸಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...