Homeಮುಖಪುಟಯುಪಿ: ಒಂದೇ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ

ಯುಪಿ: ಒಂದೇ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ

- Advertisement -
- Advertisement -

ಉತ್ತರ ಪ್ರದೇಶದ ಫತೇಪುರದ ಕೊತ್ವಾಲಿ ಪೊಲೀಸ್‌‌‌ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಅತ್ಯಾಚಾರ ಘಟನೆ ನಡೆದಿರುವುದು ವರದಿಯಾಗಿದೆ. ಅತ್ಯಾಚಾರಕ್ಕೆ ಒಳಗಾಗಿರುವ ಬಾಲಕಿಯರಲ್ಲಿ ಇಬ್ಬರೂ ಅಪ್ರಾಪ್ತರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ ಎಂದು TNIE ವರದಿ ಮಾಡಿದೆ.

ಎರಡೂ ಘಟನೆಗಳು ಕೊತ್ವಾಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅತ್ಯಾಚಾರ ಎಸಗಿರುವ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ: ಸಹೋದರನ ಮುಂದೆಯೆ ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ

ಕೊತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಸತ್ಯೇಂದ್ರ ಸಿಂಗ್ ಅವರು, “16 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ಆಮಿಷವೊಡ್ಡಿ 24 ವರ್ಷದ ಯುವಕನನ್ನು ಅತ್ಯಾಚಾರ ಎಸಗಿದ್ದಾನೆ. ಅವನನ್ನು ಭಾನುವಾರ ಬಂಧಿಸಲಾಗಿದೆ” ಎಂದು ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ, “15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ” ಎಂದು ಸತ್ಯೇಂದ್ರ ಸಿಂಗ್ ಹೇಳಿದ್ದಾರೆ. ಈ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾಗಿರುವ ಇಬ್ಬರೂ ಅಪ್ರಾಪ್ತ ಬಾಲಕಿಯರ ವೈದ್ಯಕೀಯ ವರದಿಯಲ್ಲಿ ಅತ್ಯಾಚಾರ ನಡೆದಿರುವುದು ದೃಡಪಟ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ‘ಯೋಗಿ ನಿಮ್ಮ ಚರ್ಮ ಸುಲಿಯುತ್ತಾರೆ!’; ರೈತರಿಗೆ ಬಹಿರಂಗವಾಗಿ ಬೆದರಿಸಿದ ಯುಪಿ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...