Homeಮುಖಪುಟವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯಗೆ ಜಾತಿನಿಂದನೆ: ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ?

ವಂದನಾ ಕಟಾರಿಯ ಅಂತಹ ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

- Advertisement -
- Advertisement -

ಈ ಬಾರಿಯ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಐತಿಹಾಸಿಕ ಸಾಧನೆಗೈದಿದೆ. ಒಟ್ಟು 7 ಪದಕಗಳನ್ನು ಗೆದ್ದು ದಾಖಲೆ ನಿರ್ಮಿಸಿದೆ. ಅದರಲ್ಲಿಯೂ ಭಾರತದ ಮಹಿಳಾ ಹಾಕಿ ತಂಡ ಮೊದಲ ಬಾರಿಗೆ ಸೆಮಿಫೈನಲ್‌ಗೆ ಲಗ್ಗೆ ಇಟ್ಟು ಇತಿಹಾಸ ನಿರ್ಮಿಸಿತ್ತು. ಪದಕ ಗೆಲ್ಲುವಲ್ಲಿ ವಿಫಲವಾದರೂ ತಮ್ಮ ಅಮೋಘ ಆಟದ ಮೂಲಕ ವಿಶ್ವದ ಗಮನ ಸೆಳೆದಿದ್ದಾರೆ.

ಇಂತಹ ಐತಿಹಾಸಿಕ ಸಾಧನೆಯ ಸಂದರ್ಭದಲ್ಲಿಯೂ ಕಪ್ಪು ಚುಕ್ಕೆಯೊಂದು ಉಳಿದುಹೋಯ್ತು. ಭಾರತ ತಂಡವು ಸೆಮಿಫೈನಲ್ ಪಂದ್ಯದಲ್ಲಿ ಅರ್ಜೆಂಟೀನಾ ವಿರುದ್ಧ ಕೂದಲೆಳೆ ಅಂತರದಲ್ಲಿ ಸೋಲು ಕಂಡಿತು. ಭಾರತ ತಂಡ ಸೋಲುತ್ತಿದ್ದಂತೆ ದಿಟ್ಟ ಆಟಗಾರ್ತಿ ವಂದನಾ ಕಟಾರಿಯಾ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿರುವ ಜಾತಿಗ್ರಸ್ತ ಮನಸ್ಥಿತಿಯ ಯುವಕರ ಗುಂಪು ವಂದನಾ ಅವರ ಕುಟುಂಬದವರಿಗೆ ಜಾತಿ ನಿಂದನೆ ಮಾಡಿದ್ದಾರೆ.

ವಂದನಾ ಅವರ ಹರಿದ್ವಾರದ ಮನೆ ಮುಂದೆ ಪಟಾಕಿ ಸಿಡಿಸಿದ ಯುವಕರು, ‘ತಂಡದಲ್ಲಿ ದಲಿತರು ಹೆಚ್ಚು ಇದ್ದದ್ದು ಸೋಲಿಗೆ ಕಾರಣ’ ಎಂದು ರೋಧಿಸಿದ್ದಾರೆ. ಇದು ಭಾರತದ ಜಾತಿಗ್ರಸ್ತ ಮನಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ.

ಆದರೆ ಪ್ರಜ್ಞಾವಂತರು ಈ ಕುಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ವಂದನಾ ಪರವಾಗಿ ನಿಂತ ನೆಟ್ಟಿಗರು ಜಾತಿಗ್ರಸ್ತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊದಲ ಬಾರಿಗೆ ಸೆಮಿಫೈನಲ್ ತಲುಪಿದ್ದಕ್ಕೆ ದಲಿತರು ಹೆಚ್ಚು ಇದ್ದಿದ್ದು ಕಾರಣವಲ್ಲವೇ? ಥೂ ನಿಮ್ಮ ಮನಸ್ಥಿತಿಗೆ ಎಂದು ಧಿಕ್ಕಾರ ಕೂಗಿದ್ದಾರೆ.

ವಂದನಾ ಅವರ ಆಟದ ವೈಖರಿಯನ್ನು ಮೆಚ್ಚಿದ ಬಹುತೇಕರು ಅವರ ಪರ ನಿಂತಿದ್ದಾರೆ. ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಕೂಡ ವಂದನಾ ಪರವಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಣಿ ರಾಂಪಾಲ್, ‘ನಾವು ದೇಶಕ್ಕಾಗಿ ಆಡುತ್ತಿದ್ದೇವೆ. ಈ ಘಟನೆಯ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ಆದರೆ ಜಾತಿವಾದಿ ಹೇಳಿಕೆಗಳನ್ನು ಯಾರು ನೀಡಬಾರದು. ನೀವು ಹಾಕಿ ಬಗ್ಗೆ ಯೋಚಿಸಿ, ಅಲ್ಲಿ ಹೆಚ್ಚು ಯುವತಿಯರಿದ್ದಾರೆ. ನಾವು ದೇಶಕ್ಕಾಗಿ ಆಡುತ್ತಿದ್ದೇವೆ, ಆದ್ದರಿಂದ ನಾವು ಪ್ರತಿಯೊಂದು ವಿಷಯದಲ್ಲೂ ಒಂದಾಗಬೇಕು’ ಎಂದಿದ್ದಾರೆ.

ಯಾರಿದು ವಂದನಾ ಕಟಾರಿಯಾ?

2020ರ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಭಾರತದ ಮಹಿಳಾ ಹಾಕಿ ತಂಡವನ್ನು ಸೆಮಿಫೈನಲ್ ವರೆಗೂ ಕೊಂಡೊಯ್ದದ್ದರಲ್ಲಿ ವಂದನಾ ಅವರ ಪಾತ್ರ ಬಹುಮುಖ್ಯವಾದುದು.

ಒಲಿಂಪಿಕ್ಸ್‌ನ ಪೋಲ್‌ ಎ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ ತಂಡದ ಎದುರು ನಡೆದ ಪಂದ್ಯದಲ್ಲಿ ಭಾರತ ತಂಡವು 4 ಗೋಲುಗಳನ್ನು ಗಳಿಸಿತ್ತು. ಈ ಪೈಕಿ ಮೂರು ಗೋಲುಗಳನ್ನು ವಂದನಾ ಒಬ್ಬರೇ ಗಳಿಸಿದ್ದರು. ಟೋಕಿಯೋ ಒಲಿಂಪಿಕ್ಸ್ನಲ್ಲಿ ಹ್ಯಾಟ್ರಿಕ್ ಗೋಲು ಗಳಿಸಿದ ಮೊದಲ ಭಾರತೀಯ ಹಾಕಿ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ವಂದನಾ ಅವರದು.

2018 ರಲ್ಲಿ ನಡೆದ ಏಷ್ಯನ್ ಕಪ್ ಕ್ರೀಡಾಕೂಟದಲ್ಲಿ ಭಾರತದ ತಂಡವು ಬೆಳ್ಳಿ ಪದಕ ಗೆದ್ದಿತ್ತು. ಈ ಟೂರ್ನಿಯಲ್ಲಿ ವಂದನಾ ಅವರು ‘ಪ್ಲೇಯರ್ ಆಫ್ ದಿ ಟೂರ್ನಮೆಂಟ್’ ಪ್ರಶಸ್ತಿ ತಮ್ಮ ಮುಡಿಗೇರಿಸಿಕೊಂಡಿದ್ದರು.

ಕುಟುಂಬದವರ ಬೆಂಬಲದೊಂದಿಗೆ ತಮ್ಮ 15ನೇ ವಯಸ್ಸಿನಲ್ಲಿ ಹಾಕಿ ತಂಡಕ್ಕೆ ಪಾದಾರ್ಪಣೆ ಮಾಡಿದ ವಂದನಾ, 2013ರಲ್ಲಿ ಭಾರತದ ಹಾಕಿ ಜೂನಿಯರ್ ತಂಡಕ್ಕೆ ಆಯ್ಕೆಯಾದರು. ಅದೇ ವರ್ಷ ನಡೆದ ಮಹಿಳಾ ಹಾಕಿ ಜೂನಿಯರ್ ವಿಶ್ವಕಪ್ನಲ್ಲಿ ಹೆಚ್ಚು ಗೋಲು ಗಳಿಸಿದವರಲ್ಲಿ ಮೊದಲಿಗರಾಗಿದ್ದರು. ಆಗ ಭಾರತ ತಂಡವು ಕಂಚಿನ ಪದಕ ಗೆದ್ದಿತ್ತು.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್


ಒಲಿಂಪಿಕ್ಸ್ ನಲ್ಲಿ ತಮ್ಮ ಮಗಳು ಇರುವ ಭಾರತ ಚಿನ್ನ ಗೆಲ್ಲಬೇಕು ಎಂದು ಬಯಸುತ್ತಿದ್ದ ವಂದನಾ ತಂದೆ ಇತ್ತೀಚೆಗೆ ಸಾವನ್ನಪ್ಪಿದ್ದರು. ಆ ಸಮಯದಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ತರಬೇತಿಯಲ್ಲಿದ್ದ ವಂದನಾ ತಂದೆಯ ಶವಸಂಸ್ಕಾರಕ್ಕೂ ತೆರಳದೇ, ತಂದೆಯ ಕನಸು ನನಸು ಮಾಡಬೇಕೆಂಬ ಛಲದೊಂದಿಗೆ ಅಭ್ಯಾಸದಲ್ಲಿ ನಿರತರಾಗಿದ್ದರು.

ಇಂತಹದೊಂದು ಅದ್ಭುತ ಪ್ರತಿಭೆ ಜಾತಿ ಕಾರಣಕ್ಕಾಗಿ ನಿಂದನೆ ಒಳಗಾಗುತ್ತಿರುವುದು ಭಾರತದಲ್ಲಿರುವ ಕೊಳಕು ಜಾತೀಯತೆಗೆ ಹಿಡಿದ ಕೈಗನ್ನಡಿ.

ಸೋಲೇ ಇರಲಿ, ಗೆಲುವೇ ಇರಲಿ, ಉತ್ತಮವಾದ ಆಟದಿಂದ ಕ್ರೀಡಾ ಪ್ರೇಮಿಗಳ ಮನಗೆದ್ದಿರುವ ಭಾರತದ ಮಹಿಳಾ ತಂಡ ಎಂದಿಗೂ ಚಾಂಪಿಯನ್‌ಗಳೆ. ಒಲಿಂಪಿಕ್ಸ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ನಮ್ಮ ತಂಡಕ್ಕೆ ಪ್ರೀತಿಪೂರ್ವಕ ಅಭಿನಂದನೆಗಳು. ವಂದನಾ ಅವರು ಇದೇ ರೀತಿ ಉತ್ತಮವಾದ ಪ್ರದರ್ಶನ ನೀಡಲಿ ಎಂದು ನಾವೆಲ್ಲರೂ ಆಶಿಸುತ್ತೇವೆ. ಅದೇ ರೀತಿ ಜಾತಿವಾದಿಗಳು ಹೀಗಲಾದರೂ ತಮ್ಮ ಕೊಳಕು ಪ್ರವೃತ್ತಿ ಬಿಟ್ಟು ಮನುಷ್ಯರಾಗಿ ಆಲೋಚಿಸುವುದನ್ನು ಕಲಿಯಬೇಕಿದೆ.


ಇದನ್ನೂ ಓದಿ: ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ: ಮಹಿಳಾ ಹಾಕಿ ತಂಡದ ದಿಟ್ಟ ಆಟಗಾರ್ತಿ ಲಾಲ್‌ರೆಮ್ಸಿಯಾಮಿ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...