ರಾಜ್ಯದ ಬಿಜೆಪಿ ಘಟಕವು ಆಗಸ್ಟ್ 16 ರಿಂದ “ಜನಾಶೀರ್ವಾದ ಯಾತ್ರೆ” ಯನ್ನು ಕೈಗೆತ್ತಿಕೊಳ್ಳಲಿದೆ. ಒಕ್ಕೂಟ ಸರ್ಕಾರದ ಸಚಿವ ಸಂಪುಟಕ್ಕೆ ಇತ್ತೀಚೆಗೆ ಸೇರ್ಪಡೆಯಾದ ರಾಜ್ಯದ ನಾಲ್ಕು ಹೊಸ ಮಂತ್ರಿಗಳನ್ನು ಕರ್ನಾಟಕದ ಜನರಿಗೆ ಪರಿಚಯಿಸುವ ಉದ್ದೇಶದಿಂದ ಈ ಯಾತ್ರೆಯನ್ನು ಆಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಸಂಸತ್ ಅಧಿವೇಶನದಲ್ಲಿ ಹೊಸ ಮಂತ್ರಿಗಳನ್ನು ಪರಿಚಯಿಸಲು ಪ್ರಧಾನಿ ಮೋದಿ ಅನುಮತಿ ನೀಡದ ಕಾರಣ, ಇಂತಹ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಘಟಕಗಳಿಗೆ ಬಿಜೆಪಿ ಕೇಂದ್ರ ನಾಯಕತ್ವ ಸೂಚನೆ ನೀಡಿದೆ. ಆಗಸ್ಟ್ 16 ರಿಂದ ಐದು ದಿನಗಳವರೆಗೆ ನಾಲ್ಕು ತಂಡಗಳಲ್ಲಿ ‘ಜನಾಶೀರ್ವಾದ ಯಾತ್ರೆ’ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದ್ದಾರೆ.
ಇದನ್ನೂ ಓದಿ: ಹೊಸ ಸಂಪುಟ; ಬಿಡಿ ಚಿತ್ರಗಳಲ್ಲಿ ಸಿಗುವ ಪೂರ್ಣ ಚಿತ್ರಣ
ಕೊರೊನಾ ನಿಯಮಗಳನ್ನು ಅನುಸರಿಸಿ ಎಲ್ಲಾ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಯಾವುದೇ ದೊಡ್ಡ ಸಾರ್ವಜನಿಕ ಕಾರ್ಯಕ್ರಮಗಳು ನಡೆಯದಿದ್ದರೂ, ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಕೊರೊನಾ ಪರಿಸ್ಥಿತಿ ಮತ್ತು ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತದಿಂದ ಹೊರಡಿಸಲಾದ ಮಾರ್ಗಸೂಚಿಗಳನ್ನು ಪರಿಗಣಿಸಿ ಎಲ್ಲಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಹೊಸ ಸಚಿವರ ನೇತೃತ್ವದ ನಾಲ್ಕು ತಂಡಗಳು 24 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ. ಒಟ್ಟು 161 ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕ ಸಭೆಗಳಲ್ಲಿ, ಅವರು ಒಕ್ಕೂಟ ಸರ್ಕಾರದ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಕೊರೊನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಾರೆ. ಬರಹಗಾರರು, ಕಲಾವಿದರು ಮತ್ತು ಹಿರಿಯ ಬಿಜೆಪಿ ನಾಯಕರ ಮನೆಗಳು ಮತ್ತು ಮಠಾಧೀಶರನ್ನು ಭೇಟಿ ಮಾಡುತ್ತಾರೆ ಎಂದು ಸಿದ್ದರಾಜು ಹೇಳಿದರು.
ಇದನ್ನೂ ಓದಿ: ಹೊಸ ಮಂತ್ರಿಮಂಡಲ ಹಳೆಯ ಅಸಮತೋಲನ: ಎ ನಾರಾಯಣ



ಒಂದು ಕಡೆ ಕರೊನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರ್ಕಾರ, ಜನ ಸೇರುವ ಜನಾಶೀರ್ವಾದ ಯಾತ್ರೆಗೆ ಹೇಗೆ ಪರವಾನಗಿ ಕೊಡುತ್ತದೆ? ಇದ್ಯಾವ ದೊಂಬರಾಟ?
ಅದರ ಬದಲು, ಒಳ್ಳೆಯ ಕೆಲಸ ಮಾಡುವ ಮೂಲಕ ಜನಾಶೀರ್ವಾದ ಪಡೆಯಲಿ.