Homeಮುಖಪುಟಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

- Advertisement -
- Advertisement -

ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ವಾಯ್ಸ್‌ ಮತ್ತು ವೀಡಿಯೊ ಕರೆಗಳನ್ನು ‘ಎಂಡ್-ಟು-ಎಂಡ್ ಎನ್‌ಕ್ರಿಪ್ಟ್’ ಮಾಡುವ ಹೊಸ ಆಯ್ಕೆಯನ್ನು ನೀಡಲು ಕಂಪೆನಿ ನಿರ್ಧರಿಸಿದೆ. ಇದರ ಜೊತೆಗೆ ‘ಡಿಸ್‌ಅಪಿಯರಿಂಗ್‌‌ ಮೇಸೇಜ್‌’ ಅನ್ನು ನಿಯಂತ್ರಣ ಮಾಡುವ ಆಯ್ಕೆಯನ್ನೂ ಫೇಸ್‌ಬುಕ್‌ ನೀಡಲಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ಎಂದರೆ, ಒಂದು ವೇಳೆ ನೀವು ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ಯಾರಿಗಾದರೂ ಸಂದೇಶ ಕಳುಹಿಸಿದರೆ, ಅದನ್ನು ಯಾರಿಗೆ ಕಳುಹಿಸಿದ್ದೀರೋ ಅವರನ್ನು ಮತ್ತು ಕಳುಹಿಸಿರುವ ನಿಮ್ಮನ್ನು ಬಿಟ್ಟರೆ ಬೇರೆ ಯಾರಿಗೂ ನೋಡಲು ಸಾಧ್ಯವಿಲ್ಲ, ಸ್ವತಃ ಫೇಸ್‌ಬುಕ್‌ ಕೂಡಾ ಇದನ್ನು ನೋಡುವುದಿಲ್ಲ ಎಂದರ್ಥ. ಈ ರೀತಿಯಾದ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಈಗಾಗಲೇ ವಾಟ್ಸ್‌ಆ್ಯಪ್‌ನಂತಹ ಆಪ್‌ಗಳು ಬಳಸುತ್ತಿದೆ.

ಟೆಕ್ಸ್ಟ್‌‌ ಚಾಟ್‌ಗಳ ಸುರಕ್ಷತೆಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್‌ ಅನ್ನು ಕಂಪೆನಿಯು 2016 ರಿಂದ ನೀಡಿತ್ತು ಎಂದು ಫೇಸ್‌ಬುಕ್‌ ಹೇಳಿದೆ.

ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಮೆಸೆಂಜರ್‌ನ ಪ್ರಾಡಕ್ಟ್ ಮ್ಯಾನೇಜ್‌ಮೆಂಟ್ ನಿರ್ದೇಶಕಿ ರುತ್ ಕ್ರಿಚೆಲಿ ಬ್ಲಾಗ್ ಅವರು ಇದನ್ನು ಘೋಷಿಸಿದ್ದಾರೆ. ಅವರು ತನ್ನ ಬ್ಲಾಗ್‌ನಲ್ಲಿ ಬರೆದಂತೆ, “ಜನರು ತಮ್ಮ ಮೆಸೇಜಿಂಗ್ ಆಪ್‌ಗಳು ಸುರಕ್ಷಿತ ಮತ್ತು ಖಾಸಗಿಯಾಗಿರಬೇಕು ಎಂದು ನಿರೀಕ್ಷಿಸುತ್ತಾರೆ. ಈಗ ನೀಡುತ್ತಿರುವ ಹೊಸ ವೈಶಿಷ್ಟ್ಯಗಳೊಂದಿಗೆ ಅವರ ಕರೆಗಳು ಮತ್ತು ಚಾಟ್‌ಗಳು ತಮಗೆ ಎಷ್ಟು ಖಾಸಗಿಯಾಗಿ ಬೇಕು ಎಂಬುದರ ಮೇಲೆ ನಾವು ಅವರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂಭಾಷಣೆಯಲ್ಲಿ ನಿಮ್ಮ ಸಂದೇಶಗಳು ಮತ್ತು ಕರೆಗಳು ನಿಮ್ಮ ಸಾಧನವನ್ನು ಬಿಟ್ಟ ಕ್ಷಣದಿಂದ ರಿಸೀವರ್‌ನ ಸಾಧನವನ್ನು ತಲುಪುವವರೆಗೂ ರಕ್ಷಿಸುತ್ತದೆ” ಎಂದು ಕಂಪನಿ ಹೇಳಿದೆ.

“ಇದರರ್ಥ, ಫೇಸ್‌ಬುಕ್ ಸೇರಿದಂತೆ ಬೇರೆ ಯಾರಿಗೂ ನೀವು ಕಳುಹಿಸಿದ ಅಥವಾ ಹೇಳಿದ್ದನ್ನು ನೋಡಲು ಅಥವಾ ಕೇಳಲು ಸಾಧ್ಯವಿಲ್ಲ. ಇವುಗಳಲ್ಲಿ ಏನಾದರೂ ತಪ್ಪಾಗಿದ್ದರೆ ನೀವು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶವನ್ನು ನಮಗೆ ದೂರು ನೀಡಬಹುದು” ಎಂದು ಫೇಸ್‌ಬುಕ್‌ ಹೇಳಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಚಾಟ್‌ಗಳ ಜೊತೆಗೆ ಕಂಪೆನಿಯು ‘ಡಿಸಪಿಯರಿಂಗ್‌ ಮೆಸೇಜ್‌’ ಎನ್ನುವ ಅಪ್‌ಡೇಟ್‌ಗಳನ್ನೂ ನೀಡುತ್ತಿದೆ. ಡಿಸಪಿಯರಿಂಗ್ ಮೆಸೇಜ್‌‌ ಎಂದರೆ, ನಿರ್ದಿಷ್ಟ ಸಮಯದ ನಂತರ ನಮಗೆ ಬಂದಂತಹ ಮತ್ತು ನಾವು ಕಳುಹಿಸಿದ ಮೇಸೇಜ್‌ಗಳು ಅದಾಗಿಯೆ ಡಿಲೀಟ್‌ ಆಗುವುದಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...