Homeಮುಖಪುಟಜೆಎನ್‌ಯುನಲ್ಲಿ ಹಿಂಸಾಚಾರದ ಬೆದರಿಕೆ: ಇಬ್ಬರ ಬಂಧನ

ಜೆಎನ್‌ಯುನಲ್ಲಿ ಹಿಂಸಾಚಾರದ ಬೆದರಿಕೆ: ಇಬ್ಬರ ಬಂಧನ

- Advertisement -
- Advertisement -

ಸ್ವಾತಂತ್ರ್ಯ ದಿನದಂದು ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ಹಿಂಸಾಚಾರ ನಡೆಸುವ ಬೆದರಿಕೆ ಹಾಕಿದ ಇಬ್ಬರು ಆರೋಪಿಗಳನ್ನು ಜೆಎನ್‌ಯು ವಿದ್ಯಾರ್ಥಿ ಸಂಘದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ ಮಹಾಕಾಲ್ ಯೂತ್ ಬ್ರಿಗೇಡ್‌ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಿದ ವಿಡಿಯೊದಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಸದಸ್ಯರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು), 505 ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಫೇಸ್‌ಬುಕ್‌ ವಿಡಿಯೋದಲ್ಲಿ ಹಿಂಸೆಗೆ ಕರೆ ನೀಡಿದ ಉತ್ತಮ್ ನಗರ ನಿವಾಸಿ ವಿಕಾಸ್ ಸೆಹ್ರಾವತ್ (30) ಮತ್ತು ವಿಡಿಯೊ ಅಪ್ಲೋಡ್ ಮಾಡಲು ಬಳಸಿದ ಫೋನಿನ ಮಾಲೀಕ ರಾಜ ಕುಮಾರ್ (19) ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

“ಆಗಸ್ಟ್ 9 ಮತ್ತು 14 ರಂದು ಮಹಾಕಾಲ್ ಯೂತ್ ಬ್ರಿಗೇಡ್‌ನ ಫೇಸ್‌ಬುಕ್ ಪುಟದಲ್ಲಿ ಪೋಸ್ಟ್ ಮಾಡಲಾದ ಎರಡು ವಿಡಿಯೊಗಳಲ್ಲಿ ಆಗಸ್ಟ್ 15 ರಂದು ಮಧ್ಯಾಹ್ನ 2 ರಿಂದ 6 ಗಂಟೆಯ ನಡುವೆ ಜೆಎನ್‌ಯು ಕ್ಯಾಂಪಸ್‌ನಲ್ಲಿ ಕೇಸರಿ ಧ್ವಜವನ್ನು ಹಾರಿಸಲು  ಮತ್ತು ಮೆರವಣಿಗೆಗೆ ನಡೆಸಲಿ ಕರೆ ನೀಡಲಾಗಿದೆ. ಎರಡೂ ವಿಡಿಯೊಗಳಲ್ಲಿ, ಮುಸ್ಲಿಮರ ವಿರುದ್ಧ ದ್ವೇಷ ಭಾಷಣಗಳನ್ನು ಮಾಡಲಾಗಿದೆ. ಜೊತೆಗೆ ಇದನ್ನು ತಡೆಯಲು ಎದುರಾಗುವ ಯಾವುದೇ ವಿದ್ಯಾರ್ಥಿಗಳ ವಿರುದ್ಧ ಹಿಂಸೆಗೆ ಮುಕ್ತ ಕರೆ ನೀಡಲಾಗಿದೆ” ಎಂದು ಜೆಎನ್‌ಯು ವಿದ್ಯಾರ್ಥಿ ಸಂಘ ತಮ್ಮ ಪೊಲೀಸ್ ದೂರಿನಲ್ಲಿ ತಿಳಿಸಿದೆ.

ಕಳೆದ ಜನವರಿ 5, 2020 ರಂದು, ಸುಮಾರು 50 ಮಂದಿ ಮುಖವಾಡ ಧರಿಸಿದ ಯುವಕರು ಮತ್ತು ಮಹಿಳೆಯರು, ಕಬ್ಬಿಣದ ರಾಡ್‌ಗಳು ಮತ್ತು ಸುತ್ತಿಗೆಗಗಳನ್ನು ಹಿಡಿದು ಶಸ್ತ್ರಸಜ್ಜಿತರಾಗಿ, ಜೆಎನ್‌ಯು ಕ್ಯಾಂಪಸ್‌ನಲ್ಲಿ ನುಗ್ಗಿದ್ದರು. ವಿದ್ಯಾರ್ಥಿಗಳು ಎಚ್ಚರಗೊಳ್ಳುವ ಮೊದಲೇ ಹಾಸ್ಟೆಲ್‌ಗಳು ಮತ್ತು ಇತರ ಕಟ್ಟಡಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು.

ಆದರೆ, 2020 ರ ಜೆಎನ್‌ಯು ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಲೋಕಸಭೆಯಲ್ಲಿ ತಿಳಿಸಿದೆ.


ಇದನ್ನೂ ಓದಿ: ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...