Homeಮುಖಪುಟ3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

3 ವರ್ಷದಿಂದ ಒಂದೇ ಭರವಸೆ ನೀಡುತ್ತಿರುವ ಪ್ರಧಾನಿ : ಸಂಖ್ಯೆಯನ್ನಾದರೂ ಬದಲಿಸಿ ಎಂದ ಕಾಂಗ್ರೆಸ್

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಪ್ರಧಾನಿಯವರ ಭಾಷಣ ಈಗ ಟ್ರೋಲ್‌ಗೆ ಒಳಗಾಗಿದ್ದು, ಮೂರು ವರ್ಷವೂ ಒಂದೇ ಪ್ರಾಮಿಸ್ ಮಾಡಿದ್ದಾರೆ ಎಂದು ನೆಟ್ಟಿಗರು ಮೋದಿಯವರ ಕಾಲೆಳೆಯುತ್ತಿದ್ದಾರೆ.

ಆಗಸ್ಟ್ 15, 2019, 2020, 2021 ಈ ಮೂರು ವರ್ಷವೂ 100 ಲಕ್ಷ ಕೋಟಿ ರೂಪಾಯಿಗಳನ್ನು ಆಧುನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ವಿನಿಯೋಗಿಸಲಾಗುತ್ತದೆ ಎಂದು ಹೇಳಿದ್ದಾರೆ ಎಂಬ ಮೀಮ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ರಾಷ್ಟ್ರದ ಜನರನ್ನು ಒಂದೇ ಭರವಸೆ, ಯೋಜನೆಯ ಹೆಸರಿನಲ್ಲಿ ಮೂರು ವರ್ಷಗಳಿಂದ ಪ್ರಧಾನಿ ಮೋದಿ ಮೂರ್ಖರನ್ನಾಗಿಸಿದ್ದಾರೆ ಎಂದು ಹೇಳಲಾಗುತ್ತಿದೆ. 73, 74 ಮತ್ತು 75ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಇದೇ ಮಾತನ್ನು ಹೇಳಲಾಗಿದೆ ಎಂದು ಪತ್ರಿಕಾ ವರದಿಗಳನ್ನು ಕೊಲಾಜ್ ಮಾಡಿ ಶೇರ್‌ ಮಾಡಲಾಗುತ್ತಿದೆ.

ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ:’ಅಮೃತ’ ಯೋಜನೆಗಳನ್ನು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕರ್ನಾಟಕ ಕಾಂಗ್ರೆಸ್ ಕೂಡ ಎಐಸಿಸಿಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೇಳಿಕೆಯನ್ನು ಆಧರಿಸಿ ಟ್ವೀಟ್ ಮಾಡಿದೆ.

“ಆಗಸ್ಟ್ 15, 2019ಕ್ಕೆ ಎರಡು ವರ್ಷಗಳು ಕಳೆದಿವೆ. ಕನಿಷ್ಟ ಪಕ್ಷ 100 ಲಕ್ಷ ಕೋಟಿಗಳ ಸಂಖ್ಯೆಯನ್ನಾದರೂ ಬದಲಿಸ ಬಹುದಿತ್ತು!” ಎಂದು ಮೋದಿಯವರ ಭಾಷಣಕ್ಕೆ ವ್ಯಂಗ್ಯದ ಪ್ರತಿಕ್ರಿಯೆ ನೀಡಿದೆ.

ಮೀಮ್‌ಗಳ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮೂರು ವರ್ಷಗಳ ಭಾಷಣದ ವಿಡಿಯೊ ಕೂಡ ಕೊಲಾಜ್ ಮಾಡಿ ಹಂಚಿಕೊಳ್ಳಲಾಗುತ್ತಿದೆ.

ಮೂರು ವರ್ಷ ಒಂದೇ ಭಾಷಣದ ಪ್ರತಿ ಓದಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಲಾವಣ್ಯ ಬಲ್ಲಾಳ್ ತಮ್ಮ ಫೇಸ್‌ಬುಕ್‌ ವಾಲ್‌ನಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಹೋರಾಡುತ್ತಿರುವ ರೈತರು ಕೂಡ, ಪ್ರಧಾನಿಯವರು ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

 


ಇದನ್ನೂ ಓದಿ: 75ನೇ ಸ್ವಾತಂತ್ರ್ಯ ದಿನಾಚರಣೆ: ಪ್ರಧಾನಿ ಮೋದಿ ಭಾಷಣದ ಪ್ರಮುಖಾಂಶಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...