Homeಮುಖಪುಟಅಫ್ಘಾನಿಸ್ತಾನದಲ್ಲಿ ಸಿಲುಕಿರುವ 200 ಸಿಖ್ಖರನ್ನು ರಕ್ಷಿಸುವಂತೆ ಕೇಂದ್ರಕ್ಕೆ ಅಮರಿಂದರ್ ಸಿಂಗ್ ಮನವಿ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ 200 ಸಿಖ್ಖರನ್ನು ರಕ್ಷಿಸುವಂತೆ ಕೇಂದ್ರಕ್ಕೆ ಅಮರಿಂದರ್ ಸಿಂಗ್ ಮನವಿ

- Advertisement -
- Advertisement -

ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಹೇಳಿದ್ದಾರೆ.

ರಾಜಧಾನಿ ಕಾಬೂಲ್‌ ತಾಲಿಬಾನ್ ಕೈಗೆ ಸಿಲುಕುವ ಮುನ್ನ ಅಧ್ಯಕ್ಷ ಅಶ್ರಫ್ ಘನಿ ದೇಶವನ್ನು ತೊರೆದಿದ್ದರಿಂದ ಅಫ್ಘಾನಿಸ್ತಾನವು ಅನಿಶ್ಚಿತತೆಯಲ್ಲಿ ಸಿಲುಕಿದೆ.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, ” ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನಿಸ್ತಾನದ ಗುರುದ್ವಾರದಲ್ಲಿ ಸಿಲುಕಿರುವ ಸುಮಾರು 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ತಕ್ಷಣವೇ ಸ್ಥಳಾಂತರಿಸಲು ವ್ಯವಸ್ಥೆ ಮಾಡಲು ನಾನು  ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಒತ್ತಾಯಿಸುತ್ತೇನೆ. ಅವರ ಸುರಕ್ಷಿತ ಸ್ಥಳಾಂತರಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನನ್ನ ಸರ್ಕಾರ ಸಿದ್ಧವಿದೆ” ಎಂದಿದ್ದಾರೆ.

ಇದನ್ನೂ ಓದಿ: ಕಾಬೂಲ್ ಪ್ರವೇಶಿಸಿದ ತಾಲಿಬಾನ್: ರಾಜೀನಾಮೆಯತ್ತ ಅಫ್ಘಾನ್‌ ಅಧ್ಯಕ್ಷ ಅಶ್ರಫ್ ಘನಿ

ಭಾನುವಾರ ಕೂಡ ಈ ಕುರಿತು ಟ್ವೀಟ್ ಮಾಡಿದ್ದ ಅಮರಿಂದರ್‌ ಸಿಂಗ್,” ಅಫ್ಘಾನಿಸ್ತಾನವು ತಾಲಿಬಾನ್‌ ವಶಕ್ಕೆ ಹೋಗಿದ್ದು ನಮ್ಮ ದೇಶಕ್ಕೆ ಒಳ್ಳೆಯಲ್ಲ. ಇದು ಭಾರತದ ವಿರುದ್ಧ ಚೀನಾ ಮತ್ತು ಪಾಕ್ ನಂಟು ಬಲಪಡಿಸುತ್ತದೆ. (ಚೀನಾ ಈಗಾಗಲೇ ಉಯ್ಘರ್ ಮೇಲೆ ದಾಳಿ ನಡೆಸಲು ಸೇನೆಯ ಸಹಾಯವನ್ನು ಕೋರಿದೆ). ಈ ಸೂಚನೆಗಳು ಉತ್ತಮವಾಗಿಲ್ಲ, ನಮ್ಮ ಎಲ್ಲ ಗಡಿಗಳಲ್ಲಿ ನಾವೀಗ ಹೆಚ್ಚು ಜಾಗರೂಕರಾಗಿರಬೇಕು” ಎಂದಿದ್ದರು.

ಶನಿವಾರ, ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿಯು, “ಅಫ್ಘಾನಿಸ್ತಾನದಲ್ಲಿ ವಾಸಿಸುವ ಸಿಖ್ಖರ ಸುರಕ್ಷತೆಯನ್ನು ಒಕ್ಕೂಟ ಸರ್ಕಾರ ಖಾತರಿಪಡಿಸಬೇಕು. ಭಾರತಕ್ಕೆ ಬರಲು ಬಯಸುವ ಸಿಖ್ಖರನ್ನು ಕರೆತರಲು ಬೇಷರತ್ತಾದ ವ್ಯವಸ್ಥೆ ಮಾಡಬೇಕು” ಎಂದು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿತ್ತು.


ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌‌ ಹಿಡಿತ ಹೆಚ್ಚಳ: ರಾಯಭಾರಿ ಕಚೇರಿ ಸಿಬ್ಬಂದಿ ಭಾರತಕ್ಕೆ ವಾಪಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...