Homeಚಳವಳಿರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

- Advertisement -
- Advertisement -

ಕಳೆದ 9 ತಿಂಗಳಿಂದ ದೆಹಲಿಗಡಿಗಳಲ್ಲಿ ಭಾರತದ ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಕೃಷಿ, ಕೃಷಿ ಭೂಮಿ ಮತ್ತು ರೈತನ ಅಸ್ತಿತ್ವಕ್ಕೆ ಕೊಡಲಿ ಪೆಟ್ಟಿನಂತಾಗಿರುವ ಮತ್ತು ಕಾರ್ಪೋರೇಟೀಕರಣಕ್ಕೆ ಅವಕಾಶ ಮಾಡಿಕೊಡುವ ಈ ಕಾಯ್ದೆಗಳನ್ನು ಹಿಂಪಡೆಯಬೇಕು ಎಂಬುದು ರೈತರ ಆಗ್ರಹ.

ದೇಶವಷ್ಟೇ ಅಲ್ಲ, ಜಗತ್ತಿನ ಗಮನಸೆಳೆದಿರುವ ಈ ಹೋರಾಟಕ್ಕೆ ವಿವಿಧ ದೇಶಗಳಿಂದ ಬೆಂಬಲವೂ ವ್ಯಕ್ತವಾಗಿದೆ. ಇಂಗ್ಲೆಂಡ್‌, ಅಮೆರಿಕ, ನ್ಯೂಜಿಲೆಂಡ್‌, ಕೆನಡಾ, ಆಸ್ಟ್ರೇಲಿಯಾ ದೇಶಗಳಿಂದ ಭಾರತೀಯರ ಹೋರಾಟಕ್ಕೆ ಬೆಂಬಲ ದೊರೆತಿದೆ. ಈ ಅಮೆರಿಕದ ರೈತರು ಭಾರತೀಯ ರೈತರ ಹೋರಾಟಕ್ಕೆ ದನಿಗೂಡಿಸಿದ್ದಾರೆ.

ದೇವವ್ರತ ಪೇನ್‌, ಸೃಷ್ಟಿ ಅಗರ್‌ವಾಲ್‌ ಮತ್ತು ರಾಜಶಿಕ್‌ ತಾರಾಫ್ದರ್‌ ಎಂಬ ಮೂವರು ಉತ್ಸಾಹಿಗಳು ‘ದೇಜಾವು’ ಹೆಸರಿನ ಸಾಕ್ಷ್ಯಚಿತ್ರವನ್ನು ಸಿದ್ಧಪಡಿಸಿದ್ದು, ಅದರ ತುಣುಕೊಂದನ್ನು ಆಗಸ್ಟ್ 15ರಂದು ಬಿಡುಗಡೆ ಮಾಡಿದ್ದು, ಇದರಲ್ಲಿ ಅಮೆರಿಕದ ರೈತರು,’ ಭಾರತೀಯ ರೈತರ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ.

ಜೊನೈ ನಿರ್ಮಾಣ ಸಂಸ್ಥೆಯ ಮೂಲಕ ಸಿದ್ಧವಾಗುತ್ತಿರುವ ಈ ಸಾಕ್ಷ್ಯಚಿತ್ರ ಅಮೆರಿಕದ ಕೃಷಿ ವಲಯದಲ್ಲಿ ನಡೆದ ಪ್ರಯೋಗ ಅಲ್ಲಿನ ಕೃಷಿಕರನ್ನು ಯಾವ ರೀತಿಯ ಸಂಕಷ್ಟಕ್ಕೆ ತಳ್ಳಿತು ಎಂಬುದನ್ನು ಬಿಚ್ಚಿಡುವ ಪ್ರಯತ್ನ ಮಾಡಲಿದೆ. ಹಾಗೆಯೇ ಭಾರತದ ಕೃಷಿವಲಯವನ್ನು ಮುಕ್ತ ಮಾರುಕಟ್ಟೆಗೆ ತೆರೆದುಕೊಳ್ಳುವಂತೆ ಕಾನೂನು ರಚನೆಯಾಗುತ್ತಿರುವಾಗ, ಭಾರತವು ಏನೆಲ್ಲಾ ಸವಾಲುಗಳನ್ನು ಎದುರಿಸಬೇಕಾಗಬಹುದು ಎಂಬುದನ್ನು ಅರ್ಥ ಮಾಡಿಕೊಳ್ಳುವ ಪ್ರಯತ್ನವೂ ಇದಾಗಿದೆ ಎಂದು ನಿರ್ಮಾಣ ತಂಡ ಹೇಳಿದೆ.

ಇದನ್ನೂ ಓದಿ: ಅಪ್ಪಂದಿರ ಹೊಲಗಳಲ್ಲಿನ ಪರಿಶ್ರಮ, ಒಲಿಂಪಿಕ್ಸ್‌ನಲ್ಲಿ ಮಕ್ಕಳ ಪ್ರತಿಫಲ

ಈಗ ಭಾರತದಲ್ಲಿ ಜಾರಿಗೆ ಬರಬೇಕೆಂದಿರುವ ಕೃಷಿ ಕಾಯ್ದೆಗಳು, ಪ್ರಯೋಗಗಳು, ಕೃಷಿ ನೀತಿಗಳು ನಲವತ್ತು ವರ್ಷಗ ಳ ಹಿಂದೆಯೇ ಅಮೆರಿಕದಲ್ಲಿ ನಡೆದಿವೆ. ಅದರ ಫಲವೇನು? ನಿಜಕ್ಕೂ ರೈತರಿಗೆ ಲಾಭವಾಗಿದೆಯೇ? ಬದುಕು ಸುಧಾರಿಸಿದೆಯೇ ಎಂಬ ಪ್ರಶ್ನೆಗಳೊಂದಿಗೆ ಸುಮಾರು 10 ಸಾವಿರ ಕಿ.ಮೀ. ಸಂಚರಿಸಿರುವ ತಂಡವು ಸಣ್ಣ ಹಿಡುವಳಿದಾರರು ಎದುರಿಸುತ್ತಿರುವ ಸಂಕಷ್ಟವನ್ನು ‘ದೇಜಾವು’ ಸಾಕ್ಷ್ಯಚಿತ್ರ ತೆರೆದಿಡಲಿದೆ.

ಈ ಸಾಕ್ಷ್ಯಚಿತ್ರ ಅನಾವರಣ ಮಾಡುವ ಅಂಶಗಳು ರೈತರ ಹೋರಾಟದ ಹಿಂದಿನ ಕಾಳಜಿ ಮತ್ತು ಆತಂಕಗಳನ್ನು ಬಿಚ್ಚಿಡುವ ಜೊತೆಗೆ, ಭಾರತೀಯರೆಲ್ಲರೂ ರೈತರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿ, ಹೋರಾಟಕ್ಕೆ ಬೆಂಬಲಿಸಬೇಕು ಎಂಬುದನ್ನು ಮನವರಿಕೆ ಮಾಡಿಕೊಡುತ್ತದೆ ಎಂದು ಸಾಕ್ಷ್ಯಚಿತ್ರ ನಿರ್ಮಾಣ ತಂಡದ ಸದಸ್ಯರು ಹೇಳುತ್ತಾರೆ.

ಸಾಕ್ಷ್ಯಚಿತ್ರಕ್ಕಾಗಿ ಮಿಸ್ಸೋರಿ, ವಿಸ್ಕಾನ್ಸಿನ್‌ ಸೇರಿದಂತೆ ವಿವಿಧ ರಾಜ್ಯಗಳ ರೈತರನ್ನು ತಂಡವು ಮಾತನಾಡಿಸಿದಾಗ, ಕಾರ್ಪೋರೇಟ್‌ ಶಕ್ತಿಗಳ ದುಷ್ಟತನ, ಕೃಷಿ ವಲಯಕ್ಕೆ ಅವರ ಪ್ರವೇಶದಿಂದ ಸೃಷ್ಟಿಯಾಗಲಿರುವ ಅಲ್ಲೋಲ ಕಲ್ಲೋಲ, ಆತ್ಮಹತ್ಯೆಯಂತಹ ಸಂಕಷ್ಟಗಳು, ಕೃಷಿಯನ್ನೇ ತೊರೆಯಬೇಕಾದ ಪರಿಸ್ಥಿತಿ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಹೋರಾಟ ನಿರತ ಭಾರತೀಯ ರೈತರ ಬಗ್ಗೆ ಹೆಮ್ಮೆ ಮಾತುಗಳನ್ನಾಡಿದ್ದು, ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

ಸಾಕ್ಷ್ಯಚಿತ್ರದ ನಾಲ್ಕೂವರೆ ನಿಮಿಷಗಳ ತುಣುಕು ಇಲ್ಲಿದೆ. ನೋಡಿ:

ಸಾಕ್ಷ್ಯಚಿತ್ರ ನಿರ್ಮಾಣ ಮಾಡುತ್ತಿರುವವರು ಯಾರು ಗೊತ್ತೆ?

ದೇವವ್ರತ ಪೇನ್‌
ಪಶ್ಚಿಮ ಬಂಗಾಳದ ಮೂಲದ ದೇವವ್ರತ ಭೌತಶಾಸ್ತ್ರದ ವಿಜ್ಞಾನಿ. ನಾಸಾದರಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಚಿತ್ರ ನಿರ್ಮಾಣದಲ್ಲೂ ಆಸಕ್ತರು. ಒಂಬತ್ತು ವರ್ಷಗಳ ಹಿಂದೆ ಚಿತ್ತಗಾಂಗ್‌ (ಮನೋಜ್‌ ಬಾಜಪಾಯಿ, ನವಾಝುದ್ದೀನ್‌ ಸಿದ್ದಿಕಿ, ರಾಜ್‌ಕುಮಾರ್‌ ರಾವ್‌ ನಟಿಸಿದ ಚಿತ್ರ) ಹೆಸರಿನ ಹಿಂದಿ ಚಿತ್ರ ನಿರ್ಮಿಸಿ, ನಿರ್ದೇಶಿಸಿದ ಇವರಿಗೆ ಮೊದಲ ಚಿತ್ರಕ್ಕೆ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಲಭಿಸಿತ್ತು.

ರಾಜಶಿಕ್‌ ತರಫ್ದಾರ್‌
ಪಶ್ಚಿಮ ಬಂಗಾಳದವರಾದ  ರಾಜಶಿಕ್‌ ಭೌತಶಾಸ್ತ್ರದಲ್ಲಿ ಸಂಶೋಧನೆ ನಡೆಸುತ್ತಿದ್ದಾರೆ.  , ಕ್ಯಾಲಿಫೋರ್ನಿಯ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಬೋಧನೆ ಮಾಡುತ್ತಿದ್ದಾರೆ.

ಸೃಷ್ಟಿ ಅಗರ್‌ವಾಲ್‌
ಭೌತಶಾಸ್ತ್ರಜ್ಞರು. ಅಮೆರಿಕದ ಕೊಲರಾಡೊದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಟ್ಯಾಂಡರ್ಡ್ಸ್‌ ಅಂಡ್‌ ಟೆಕ್ನಾಲಜಿಯಲ್ಲಿ ಸಹ ಸಂಶೋಧಕಿ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಹೋರಾಟದ ಬಗ್ಗೆ ಚಿತ್ರ ಬರುತ್ತಿರುವುದು ಸ್ವಾಗತಾರ್ಹ ಮತ್ತು ಸಂತದ ವಿಚಾರ.avaagalaadaru ಸಂಪೂರ್ಣ ಜನರ ಬೆಂಬಲ ನೀಡುವ ಮೂಲಕ, ರೈತರ ಹೋರಾಟ ಜಯಪ್ರದಾ ವಾಗಲಿ ಎಂದು ಪ್ರಾರ್ಥನೆ ಅನ್ನು ದೇವರಿಗೆ ಸಲ್ಲಿಸೋಣ.

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....