Homeಕರೋನಾ ತಲ್ಲಣದೇಶದಲ್ಲಿ 5 ತಿಂಗಳ ಬಳಿಕ ಅತಿ ಕಡಿಮೆ ಕೊರೊನಾ ಪ್ರಕರಣ ದಾಖಲು

ದೇಶದಲ್ಲಿ 5 ತಿಂಗಳ ಬಳಿಕ ಅತಿ ಕಡಿಮೆ ಕೊರೊನಾ ಪ್ರಕರಣ ದಾಖಲು

- Advertisement -
- Advertisement -

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 25,166 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, 154 ದಿನಗಳಲ್ಲಿ ವರದಿಯಾದ ಅತಿ ಕಡಿಮೆ ಪ್ರಕರಣಗಳಾಗಿವೆ. ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 3,22,50,679 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 437 ಸಾವುಗಳು ವರದಿಯಾಗಿವೆ. ಚೇತರಿಕೆಯ ದರವು ಶೇಕಡಾ 97.51 ಆಗಿದೆ. ಕಳೆದ 24 ಗಂಟೆಗಳಲ್ಲಿ 88.13 ಲಕ್ಷ ಡೋಸ್‌ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳು 3,69,846 ಕ್ಕೆ ಇಳಿದಿದ್ದು, 146 ದಿನಗಳಲ್ಲಿ ಕಂಡು ಬಂದ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಮಾರ್ಚ್ 2020 ರ ನಂತರ ವರದಿಯಾದ ಅತ್ಯಂತ ಕಡಿಮೆ ಸಕ್ರಿಯ ಪ್ರಕರಣಗಳು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ದೇಶ ಇನ್ನೂ ಕೊರೊನಾ ವಿರುದ್ದ ಹೋರಾಡುತ್ತಿದೆ; ಪ್ರತಿಯೊಬ್ಬರೂ ಲಸಿಕೆ ಪಡೆಯಿರಿ: ರಾಷ್ಟ್ರಪತಿ ಕೋವಿಂದ್‌

ಸೋಮವಾರ 15,63,985 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ 1.61 ರಷ್ಟು ದಾಖಲಾಗಿದೆ.

ಇಲ್ಲಿಯವರೆಗೆ ದೇಶದಲ್ಲಿ 55.47 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದ್ದು, ಕಳೆದ 24 ಗಂಟೆಗಳಲ್ಲಿ 88.13 ಲಕ್ಷ ಡೋಸ್‌ಗಳನ್ನು ನೀಡಲಾಗಿದೆ. ಇದು ಒಂದೇ ದಿನದಲ್ಲಿ ನೀಡಲಾಗಿರುವ ಅತಿ ಹೆಚ್ಚು ವ್ಯಾಕ್ಸಿನೇಷನ್ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ ವರ್ಷ ಆಗಸ್ಟ್ 7, 2020 ರಂದು ಕೊರೊನಾ ಪ್ರಕರಣಗಳು 20 ಲಕ್ಷದ ಗಡಿ ದಾಟಿತ್ತು, ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ. ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ ದಾಟಿ ಏರುಗತಿಯಲ್ಲಿ ಸಾಗಿತ್ತು. ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ದಾಟಿತು ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿ ಜನರು ವ್ಯಾಕ್ಸಿನ್, ಆಕ್ಸಿಜನ್, ಬೆಡ್ ಇಲ್ಲದೆ ಪರದಾಡಿದ್ದರು.


ಇದನ್ನೂ ಓದಿ: 3ನೇ ಅಲೆ ಆತಂಕ: ಸೆಪ್ಟೆಂಬರ್‌ ವೇಳೆಗೆ ರಾಜ್ಯದಲ್ಲಿ ಕೊರೊನಾ ಪ್ರಕರಣ 30 ಲಕ್ಷಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...