Homeಮುಖಪುಟರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

ರಾಜ್ಯಗಳು ಮಾತ್ರವಲ್ಲ ಒಕ್ಕೂಟ ಸರ್ಕಾರ ಕೂಡಾ ನ್ಯಾಯಾಧೀಶರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು: ಸುಪ್ರೀಂ

- Advertisement -
- Advertisement -

ನ್ಯಾಯಾಧೀಶರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕೈಕೊಳ್ಳುವಂತೆ ಒಕ್ಕೂಟ ಸರ್ಕಾರವನ್ನು ಸುಪ್ರೀಂಕೋರ್ಟ್‌ ಮಂಗಳವಾರ ಕೇಳಿದ್ದು, ಈ ವಿಷಯವನ್ನು ಕೇವಲ ರಾಜ್ಯಗಳಿಗೆ ಬಿಡಬಾರದು ಎಂದು ಹೇಳಿದೆ. ಕಳೆದ ತಿಂಗಳು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶರ ಕೊಲೆ ಪ್ರಕರಣವನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿತ್ತು.

ಸುಪ್ರೀಂಕೋರ್ಟ್‌‌ ಸ್ವಯಂ ಪ್ರೇರಿತವಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ನ್ಯಾಯಾಧೀಶರ ಭದ್ರತಾ ಕ್ರಮಗಳ ಸ್ಥಿತಿಗತಿಯ ಕುರಿತು ವರದಿ ಸಲ್ಲಿಸದ ರಾಜ್ಯಗಳಿಗೆ ಎಚ್ಚರಿಕೆಯನ್ನೂ ಅದು ನೀಡಿದೆ.

ಇದನ್ನೂ ಓದಿ: ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

“ತೆಗೆದುಕೊಳ್ಳುತ್ತಿರುವ ಕ್ರಮಗಳು ಎಲ್ಲವೂ ಚೆನ್ನಾಗಿದೆ ಎಂಬಂತಹ ಚಿತ್ರಣಗಳನ್ನು ರಾಜ್ಯಗಳು ನೀಡುತ್ತಿವೆ . ಆದರೆ, ಅದರ ಹೊರತಾಗಿಯೂ, ನ್ಯಾಯಾಂಗದ ಅಧಿಕಾರಿಗಳ ಮೇಲೆ ಪದೇ ಪದೇ ದಾಳಿಗಳು ನಡೆಯುತ್ತಿವೆ” ಎಂದು ಸುಪ್ರೀಂಕೋರ್ಟ್ ಹೇಳಿದೆ.

“ರಾಜ್ಯಗಳು ಸಿಸಿಟಿವಿ ನಿಧಿಯ ಕೊರತೆಯನ್ನು ಉಲ್ಲೇಖಿಸುತ್ತಿವೆ. ಆದರೆ ಸಿಸಿಟಿವಿಗಳು ಅಪರಾಧದ ದಾಖಲೆ ಮಾತ್ರ ಮಾಡುತ್ತದೆ. ಅಪರಾಧಿಗಳು ಆಕ್ರಮಣ ಮಾಡುವುದನ್ನು ತಡೆಯುವುದಾಗಲಿ, ಬೆದರಿಕೆಗಳನ್ನು ತಡೆಯುವುದಕ್ಕಾಗಲಿ ಅವುಗಳಿಗೆ ಸಾಧ್ಯವಿಲ್ಲ” ಎಂದು ಸುಪ್ರೀಂಕೋರ್ಟ್‌ ಹೇಳಿದೆ.

ನ್ಯಾಯಾಲಯವು ರಾಜ್ಯಗಳಿಗೆ ಒಂದು ವಾರದ ಕಾಲಾವಕಾಶವನ್ನು ನೀಡಿದ್ದು, ಒಂದು ವಾರದಲ್ಲಿ ಪರಿಸ್ಥಿತಿಯ ಕುರಿತು ವರದಿಯನ್ನು ಸಲ್ಲಿಸದಿದ್ದಲ್ಲಿ 1 ಲಕ್ಷ ರೂ. ದಂಡದ ಎಚ್ಚರಿಕೆಯನ್ನು ನೀಡಿದೆ. ಒಂದು ವಾರದಲ್ಲಿ ರಾಜ್ಯಗಳು ತಮ್ಮ ವರದಿಗಳನ್ನು ಸಲ್ಲಿಸದಿದ್ದರೆ ಮುಖ್ಯ ಕಾರ್ಯದರ್ಶಿಗಳು ಮುಂದಿನ ವಿಚಾರಣೆಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ಜುಲೈ 28 ರಂದು ಜಾರ್ಖಂಡ್ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ (49) ಅವರು ಬೆಳಗಿನ ಜಾವ ಜಾಗಿಂಗ್‌ ಮಾಡುತ್ತಿದ್ದಾಗ ಆಟೋ ಡಿಕ್ಕಿ ಹೊಡೆದು ಕೊಲ್ಲಲ್ಪಟ್ಟರು.

ಪ್ರಕರಣವು ಮೊದಲಿಗೆ ಹಿಟ್ ಅಂಡ್ ರನ್ ಎಂದು ಹೇಳಲಾಗಿತ್ತು, ಆದರೆ ಸಾಮಾಜಿಕ ಜಾಲತಾಣದಲ್ಲಿ ಘಟನೆಯ ಸಿಸಿ ಟಿವಿ ದೃಶ್ಯಾವಳಿಗಳು ವೈರಲ್ ಆದ ನಂತರ ಪ್ರಕರಣವು ಇನ್ನೊಂದು ಮಗ್ಗುಲಿಗೆ ಹೊರಳಿತು.

ಉತ್ತಮ್ ಆನಂದ್‌ ಅವರು ಧನ್ಬಾದ್‌ನ ಅನೇಕ ಮಾಫಿಯಾ ಹತ್ಯಾ ಪ್ರಕರಣಗಳನ್ನು ವಿಚಾರಣೆ ನಡೆಸುತ್ತಿದ್ದರು, ಅದರಲ್ಲಿ ಅವರು ಇಬ್ಬರು ದರೋಡೆಕೋರರ ಜಾಮೀನು ಕೋರಿಕೆಯನ್ನು ತಿರಸ್ಕರಿಸಿದ್ದರು. ಜೊತೆಗೆ ಶಾಸಕರ ಆಪ್ತರೊಬ್ಬರನ್ನು ಒಳಗೊಂಡ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದರು.

ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....