Homeಚಳವಳಿವಿವಾದಿತ ಕೃಷಿ ಕಾನೂನುಗಳನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್

ವಿವಾದಿತ ಕೃಷಿ ಕಾನೂನುಗಳನ್ನು ಸಮರ್ಥಿಸಿಕೊಂಡ ರಕ್ಷಣಾ ಸಚಿವ ರಾಜನಾಥ್‌ ಸಿಂಗ್

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರಕ್ಷಣಾ  ಸಚಿವ ರಾಜನಾಥ್‌ ಸಿಂಗ್ ಸಮರ್ಥಿಸಿಕೊಂಡಿದ್ದಾರೆ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಈ ಕಾನೂನುಗಳಲ್ಲಿ ಯಾವುದಾದರೂ ಅಂಶವಿದೆ ಎಂದು ರೈತರು ಭಾವಿಸಿದ್ದರೆ ರೈತರೊಂದಿಗೆ ಮಾತನಾಡಲು ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.

ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವ ಅವಶ್ಯಕತೆ ಇದೆ ಎಂದು ಹೇಳಿದ ಸಚಿವ ರಾಜನಾಥ್‌ ಸಿಂಗ್, ವಿರೋಧದ ವಾತಾವರಣ ಸೃಷ್ಟಿಯಾಗುತ್ತಿದೆ. ಇದನ್ನು ರೈತರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

ಮುಖ್ಯವಾಗಿ ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು, ಕೃಷಿ ಕಾನೂನುಗಳನ್ನು ವಿರೋಧಿಸಿ ನವೆಂಬರ್ 26 ರಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಇವರಿಗೆ ಬೆಂಬಲ ನೀಡಿ ಆಂದೋಲನ ನಡೆಯುತ್ತಿದೆ.

ಇದನ್ನೂ ಓದಿ: ರೈತ ಹೋರಾಟ: ಹೋರಾಟನಿರತ ರೈತರ ಬಗ್ಗೆ ಅಮೆರಿಕಾದ ರೈತರ ಮಾತುಗಳು

ಈ ಕೃಷಿ ಕಾನೂನುಗಳು ಎಪಿಎಂಸಿ ಮತ್ತು ಎಂಎಸ್‌ಪಿ ಖರೀದಿ ವ್ಯವಸ್ಥೆಗಳನ್ನು ಕೊನೆಗೊಳಿಸುತ್ತವೆ. ರೈತರನ್ನು ದೊಡ್ಡ ಕಾರ್ಪೊರೇಟ್‌ಗಳ ಕೃಪೆಗೆ ಒಳಪಡಿಸುತ್ತವೆ ಎಂದು ರೈತ ಸಂಘಟನೆಗಳು ಆರೋಪಿಸಿವೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ ಯೋಜನೆಯಡಿ ರಾಜ್ಯ ಮಟ್ಟದ ಅನ್ನಪೂರ್ಣ ಕಾರ್ಯಕ್ರಮವನ್ನು ಗುರುವಾರ ಆನ್‌ಲೈನ್ ಮೂಲಕ ‌ಉದ್ಘಾಟಿಸಿ ಮಾತನಾಡಿದ ರಾಜನಾಥ್‌ ಸಿಂಗ್, ರೈತರ ಕಲ್ಯಾಣಕ್ಕಾಗಿ ನರೇಂದ್ರ ಮೋದಿ ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಶ್ಲಾಘಿಸಿದ್ದಾರೆ.

“ನಮ್ಮ ಸರ್ಕಾರವು ಮೂರು ಕೃಷಿ ಕಾನೂನುಗಳನ್ನು ತಂದಿದೆ. ಈ ಕಾನೂನುಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವ ಅವಶ್ಯಕತೆಯಿದೆ ಎಂದು ನಾನು ಭಾವಿಸುತ್ತೇನೆ. ಆದರೆ ವಿರೋಧದ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ. ರೈತರು ಇದನ್ನು ಅರ್ಥಮಾಡಿಕೊಳ್ಳಬೇಕು”ಎಂದು ಹೇಳಿದ್ದಾರೆ.

“ನಾನು ಕೃಷಿ ಶಾಸನಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಿದ್ದೇನೆ. ಇದರ ಪ್ರಕಾರ ನಮ್ಮ ರೈತ ಸಹೋದರರ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಅಂಶಗಳು ಇಲ್ಲ. ಯಾರಿಗಾದರೂ ಅಂತಹ ಅಂಶಗಳಿವೆ  ಅನಿಸಿದರೆ, ನಾವು ಸಂಪೂರ್ಣ ವಿಶ್ವಾಸದಿಂದ ರೈತ ಸಹೋದರರೊಂದಿಗೆ ಕುಳಿತು ಮಾತುಕತೆ ನಡೆಸಲು ಸಿದ್ಧರಿದ್ದೇವೆ” ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ರೈತರ ಹಿತಕ್ಕಾಗಿ ಮೋದಿ ಸರ್ಕಾರದ ಯೋಜನೆಗಳನ್ನು ಪಟ್ಟಿ ಮಾಡಿರುವ ಅವರು, ಎಂಎಸ್‌ಪಿ ಒಂದೂವರೆ ಪಟ್ಟು ಹೆಚ್ಚಿಸಲಾಗಿದೆ. ಸಣ್ಣ ರೈತರಿಗೆ ಅಗ್ಗದ ಸಾಲಗಳನ್ನು ನೀಡಲಾಗಿದೆ. 1.50 ಲಕ್ಷ ಕೋಟಿಗೂ ಅಧಿಕ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೇಳಿದ್ದ‌ನ್ನೇ ಹೇಳೋ ಕಿಸ‌ಬಾಯಿದ‌ಸ‌ ಈತ‌. ಮೋದಿಯ‌ವ‌ರು ಕ‌ಳೆದ‌ ಒ0ದು ವ‌ರ್ಷ‌ದಿ0ದ‌ ಇದ‌ನ್ನೇ ಹೇಳುತ್ತಾ ಬ‌0ದಿರುತ್ತಾರೆ. ಈಗ‌ ಅದ‌ನ್ನೇ ಇವ‌ರು… ಮ‌ತ್ತೆ…

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...