Homeಅಂತರಾಷ್ಟ್ರೀಯತಾಲಿಬಾನಿಗಳು ಅಪಹರಿಸಿದ್ದ 150 ಭಾರತೀಯರ ಬಿಡುಗಡೆ; ಶೀಘ್ರದಲ್ಲೇ ಭಾರತಕ್ಕೆ - ವರದಿ

ತಾಲಿಬಾನಿಗಳು ಅಪಹರಿಸಿದ್ದ 150 ಭಾರತೀಯರ ಬಿಡುಗಡೆ; ಶೀಘ್ರದಲ್ಲೇ ಭಾರತಕ್ಕೆ – ವರದಿ

- Advertisement -
- Advertisement -

ಶನಿವಾರ ಬೆಳಿಗ್ಗೆ ತಾಲಿಬಾನಿಗಳು ಅಪಹರಿಸಿದ್ದ ಸುಮಾರು 150 ಭಾರತೀಯ ನಾಗರಿಕರನ್ನು ಬಿಡುಗಡೆ ಮಾಡಲಾಗಿದ್ದು, ಈಗ ಅವರು ಕಾಬೂಲ್ ವಿಮಾನ ನಿಲ್ದಾಣದ ಒಳಗೆ ಇದ್ದಾರೆ ಎಂದು ಮೂಲಗಳನ್ನು ಉಲ್ಲಖಸಿ ಎನ್‌ಡಿಟಿವಿ ವರದಿ ಮಾಡಿದೆ. ಅವರನ್ನು ಶೀಘ್ರವೇ ಏರ್‌ಲಿಫ್ಟ್‌‌ ಮೂಲಕ ಅಫ್ಘಾನಿಸ್ತಾನದಿಂದ ಹೊರಲಾಗುವುದು ಎಂದು ಅದು ಹೇಳಿದೆ.

ದೇಶದಿಂದ ಸ್ಥಳಾಂತರಗೊಳ್ಳಲು ವಿಮಾನಗಳಿಗಾಗಿ ಕಾಬೂಲ್ ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದ ಭಾರತೀಯ ನಾಗರಿಕರನ್ನು, ಹತ್ತಿರದ ಪೊಲೀಸ್ ಠಾಣೆಗೆ ಕರೆದೊಯ್ದು ಪ್ರಯಾಣ ದಾಖಲೆಗಳನ್ನು ಪರಿಶೀಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮವೊಂದು ತಿಳಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: 2014 ರ ಬೀದಿ ನಾಟಕದ ದೃಶ್ಯ ‘ತಾಲಿಬಾನ್ ಮಹಿಳೆಯನ್ನು ಮಾರುತ್ತಿದೆ’ ಎಂದು ವೈರಲ್‌!

ಈ ಮೊದಲು, ಕಾಬೂಲ್‌ನ ಕೆಲವು ಸುದ್ದಿವಾಹಿನಿಗಳು ತಾಲಿಬಾನಿಗಳು ಭಾರತೀಯರು ಸೇರಿದಂತೆ 150 ಜನರನ್ನು ಅಪಹರಿಸಿರುವುದಾಗಿ ಹೇಳಿಕೊಂಡಿದ್ದವು. ಆದರೆ ಈ ಪ್ರತಿಪಾದನೆಯನ್ನು ತಾಲಿಬಾನ್ ವಕ್ತಾರ ತಿರಸ್ಕರಿಸಿದ್ದಾರೆ ಎಂದು ದಿ ನ್ಯೂಯಾರ್ಕ್ ಟೈಮ್ಸ್‌ನ ಕಾಬೂಲ್ ಮೂಲದ ವರದಿಗಾರ ಹೇಳಿದ್ದಾರೆ.

ವಾಯುಪಡೆಯ ವಿಮಾನವು ಕಾಬೂಲ್‌ನಿಂದ ಸುಮಾರು 85 ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಯಶಸ್ವಿಯಾದ ಕೆಲವು ಗಂಟೆಗಳ ನಂತರ ತಾಲಿಬಾನ್‌ಗಳು ಭಾರತೀಯ ನಾಗರಿಕರನ್ನು ಅಪಹರಿಸಿದೆ ಎಂದು ವರದಿಯಾಗಿತ್ತು. 85 ಜನರು ಭಾರತೀಯರನ್ನು ಒಳಗೊಂಡ ವಾಯುಪಡೆಯ ವಿಮಾನವು ತಜಕಿಸ್ತಾನದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು, ಎರಡನೇ ವಿಮಾನವು ಭಾರತದಲ್ಲಿ ತಯಾರಾಗಿ ನಿಂತಿದೆ ಎಂದು ಎನ್‌ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಭಾರತವು ತನ್ನ ಎಲ್ಲಾ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ಸ್ಥಳಾಂತರಿಸಿದೆ. ಆದರೆ ಅಂದಾಜು 1,000 ನಾಗರಿಕರು ಅಫ್ಘಾನಿಸ್ತಾನದ ಹಲವಾರು ನಗರಗಳಲ್ಲಿ ಉಳಿದಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಅವರು ಇರುವ ಸ್ಥಳ ಮತ್ತು ಪರಿಸ್ಥಿತಿಯನ್ನು ಖಚಿತಪಡಿಸಿಕೊಳ್ಳುವುದು ಒಂದು ಸವಾಲಾಗಿದೆ ಎಂದು ಅವರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ.

ಇದನ್ನೂ ಓದಿ: RSS ತಾಲಿಬಾನ್‌ನಂತೆ ಆಡಳಿತ ನಡೆಸಲು ಬಯಸುತ್ತದೆ: ನಟ ಚೇತನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...