Homeಕರ್ನಾಟಕಮೈಸೂರು ರಸ್ತೆ - ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

ಮೈಸೂರು ರಸ್ತೆ – ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆ.29 ರಂದು ಲೋಕಾರ್ಪಣೆ

- Advertisement -
- Advertisement -

ಬಹುನಿರೀಕ್ಷಿತ ಮೈಸೂರು ರಸ್ತೆಯಿಂದ ಕೆಂಗೇರಿವರೆಗಿನ ಮೆಟ್ರೋ ಮಾರ್ಗ ಆಗಸ್ಟ್ 29 ರಂದು ಲೋಕಾರ್ಪಣೆಯಾಗಲಿದೆ. ಅಂದು ಮಧ್ಯಾಹ್ನ 12 ಗಂಟೆಯಿಂದ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ.

ಒಟ್ಟು 7.53 ಕೀಮಿ ಉದ್ದದ 6 ಎತ್ತರಿಸಿದ ನಿಲ್ದಾಣ ಹೊಂದಿರುವ ಈ ಮಾರ್ಗ ನಿರ್ಮಾಣಕ್ಕೆ 1560 ಕೋಟಿ ವೆಚ್ಚವಾಗಿದೆ ಎನ್ನಲಾಗಿದ್ದು, ಅಂದು ಈ ಮಾರ್ಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಹಸಿರು ನಿಶಾನೆ ತೋರಿಸಲಿದ್ದಾರೆ.

ಆಗಸ್ಟ್ 11 ಹಾಗೂ 12 ರಂದು ಈ ಮಾರ್ಗದ ಸುರಕ್ಷತಾ ಪರೀಕ್ಷೆ ನಡೆಸಿ ರೈಲ್ವೆ ಸುರಕ್ಷತಾ ಆಯುಕ್ತ ಅಭಯ್ ಕುಮಾರ್ ರೈ ಸುರಕ್ಷತಾ ಪ್ರಮಾಣಪತ್ರ ನೀಡಿದ್ದರು. ಕಳೆದ ಮೂರು ತಿಂಗಳಿನಿಂದ ಟ್ರಯಲ್ ರನ್ ನಡೆಸಿದ್ದ ಬಿಎಂಆರ್‌ಸಿಎಲ್ ಸದ್ಯ ವಾಣಿಜ್ಯ ಸಂಚಾರದ ಅಂತಿಮ ಸಿದ್ಧತೆಯಲ್ಲಿದೆ.


ಇದನ್ನೂ ಓದಿ: ಕೊರೊನಾ ನಿಯಮ ಉಲ್ಲಂಘನೆ: ಒಂದು ವಾರದಲ್ಲೆ 1.77 ಲಕ್ಷ ದಂಡ ವಸೂಲಿ ಮಾಡಿದ ‘ನಮ್ಮ ಮೆಟ್ರೋ’!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...