Homeಕರ್ನಾಟಕನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

ನಟ ಡಾಲಿ ಧನಂಜಯಗೆ ಜನ್ಮದಿನದ ಸಂಭ್ರಮ: ಸಾಲು ಸಾಲು ಚಿತ್ರಗಳು ಘೋಷಣೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬುವ ಮೂಲಕ ಗುರುತಿಸಿಕೊಂಡಿರುವ ನಟ ಧನಂಜಯಗೆ ಇಂದು (ಆಗಸ್ಟ್ 23) ಹುಟ್ಟುಹಬ್ಬದ ಸಂಭ್ರಮ. ಕನ್ನಡ, ತೆಲುಗು ಚಿತ್ರಗಳಲ್ಲಿ ತನ್ನ ಛಾಪು ಮೂಡಿಸಿರುವ ನಟ, ಟಗರು ಬಳಿಕ ಡಾಲಿ ಎಂದೇ ಚಿರಪರಿಚಿತರಾಗಿದ್ದಾರೆ.

ನಾಯಕ ನಟನಾಗಿ, ಖಳನಾಯಕನಾಗಿ ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಚಿತ್ರೋದ್ಯಮದಲ್ಲಿ ಮಿಂಚುತ್ತಿರುವ ಕಲಾವಿದನಿಗೆ ಎಲ್ಲಾ ಚಿತ್ರರಂಗದ ಕಲಾವಿದರು, ಚಿತ್ರ ಕರ್ಮಿಗಳು ಸೇರಿದಂತೆ ಅಭಿಮಾನಿಗಳು ಶುಭಾಶಯದ ಮಹಾಪೂರವನ್ನೇ ಹರಿಸಿದ್ದಾರೆ. ಕೊರೊನಾ ಕಾರಣದಿಂದ ಈ ಬಾರಿ ನಟ ತನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.

ಧನಂಜಯ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಸಾಲು ಸಾಲು ಚಿತ್ರಗಳ ಘೋಷಣೆಯಾಗಿದೆ. ಮೂರು ದಿನಗಳ ಹಿಂದೆಯೇ ’ರತ್ನನ್ ಪ್ರಪಂಚ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಡಾಲಿ ನಿರ್ಮಾಣದ ಮೊದಲ ಚಿತ್ರ ಹೆಡ್‌ ಬುಷ್‌’ ಸಿನಿಮಾದ ಟೀಸರ್‌ ಕೂಡ ಬಿಡುಗಡೆಯಾಗಿದೆ.

ಇದನ್ನೂ ಓದಿ: ಮೆಗಾಸ್ಟಾರ್‌ ಚಿರಂಜೀವಿ ಹುಟ್ಟುಹಬ್ಬ: ಅಪ್ಪಾ, ಆಚಾರ್ಯ ನೀನೇ ಎಂದ ರಾಮ್ ಚರಣ್

ಹೆಡ್ ಬುಷ್ ಚಿತ್ರದ ಕಥೆಯನ್ನು ಅಗ್ನಿ ಶ್ರೀಧರ್‌ ಬರೆದಿದ್ದಾರೆ. ಚಿತ್ರದಲ್ಲಿ ಡಾನ್ ಎಂಪಿ ಜಯರಾಜ್ ಅವರ ಪಾತ್ರದಲ್ಲಿ ಧನಂಜಯ ಕಾಣಿಸಿಕೊಳ್ಳಲಿದ್ದಾರೆ.

ಬಡವ ರಾಸ್ಕಲ್, ಮಾನ್ಸೂನ್ ರಾಗ, ರತ್ನನ್ ಪ್ರಪಂಚ, ಮಲಯಾಳಂನ 21 ಅವರ್ಸ್, ಹೆಡ್ ಬುಷ್, ಬೈರಾಗಿ, ತೋತಾಪುರಿ, ಕಾಲಾಪತ್ಥರ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಡಾಲಿ ಧನಂಜಯ ಸಕ್ರಿಯರಾಗಿದ್ದಾರೆ. ನಟ ವಿಜಯ್ ನಟನೆಯ ಸಲಗದಲ್ಲಿ ಧನಂಜಯ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ.

ಈ ಹಿಂದೆ ಕೊರೊನಾ ವಿಚಾರವಾಗಿ ಧರ್ಮವನ್ನ ಎಳೆ ತಂದು ಟ್ವೀಟ್ ಮಾಡಿದ ಚಕ್ರವರ್ತಿ ಸೂಲಿಬೆಲೆಗೆ ಡಾಲಿ ಧನಂಜಯ “ಏನಾದರು ಆಗು‌ ಮೊದಲು ಮಾನವನಾಗು” ಎಂಬ ಕುವೆಂಪು ಅವರ ಸಾಲಿನ ಮೂಲಕ ಪಾಠ ಮಾಡಿದ್ದರು.

ಕರ್ನಾಟಕದ ಮಹತ್ವದ ಕವಿ, ಚಿಂತಕ, ಲೇಖಕ ರಾಷ್ಟ್ರಕವಿ ಕುವೆಂಪುರವರ ಹೇಳಿಕೆಯನ್ನು ಬರೆಯುವ ಮೂಲಕ ಮಾನವ ಧರ್ಮಕ್ಕಿಂತ ಮಿಗಲಾದ ಧರ್ಮವಿಲ್ಲ ಎಂದು ಧನಂಜಯ ಪ್ರತಿಕ್ರಿಯಿಸಿದ್ದರು. ಇತರ ಧರ್ಮಗಳನ್ನು ತೆಗಳುವುದನ್ನು ಬಿಟ್ಟು ಮಾನವರಾಗೋಣ ಎಂದು ಸಾರಿದ್ದರು. ಈ ಮೂಲಕ ಕೋಟ್ಯಾಂತರ ಜನರ ಮನಗೆದ್ದಿದ್ದರು.


ಇದನ್ನೂ ಓದಿ: ಏನಾದರು ಆಗು‌ ಮೊದಲು ಮಾನವನಾಗು : ಸೂಲಿಬೆಲೆಗೆ ಡಾಲಿ ಧನಂಜಯ್‌ ಪಾಠ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...