Homeಮುಖಪುಟಶೂಟಿಂಗ್ ವೇಳೆ ಅವಘಡ: ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಅಭಿಷೇಕ್ ಬಚ್ಚನ್

ಶೂಟಿಂಗ್ ವೇಳೆ ಅವಘಡ: ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಅಭಿಷೇಕ್ ಬಚ್ಚನ್

- Advertisement -
- Advertisement -

ಬಾಲಿವುಡ್ ನಟ ಅಭಿಷೇಕ್ ಬಚ್ಚನ್‌ಗೆ ಶೂಟಿಂಗ್ ವೇಳೆ ಕೈಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಆರೋಗ್ಯ ವಿಚಾರಿಸಲು ಅಮಿತಾಬ್ ಬಚ್ಚನ್ ಮತ್ತು ಸಹೋದರಿ ಶ್ವೇತಾ ಬಚ್ಚನ್ ನಂದಾ ಆಸ್ಪತ್ರೆಗೆ ಭೇಟಿ ನೀಡಿರುವ ದೃಶ್ಯಗಳು ವೈರಲ್ ಆಗುತ್ತಿವೆ.

ಅಭಿಷೇಕ್ ಬಚ್ಚನ್‌ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿತ್ರೀಕರಣದ ವೇಳೆ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಈ ಹಿಂದೆ ಮುಂಬೈ ವಿಮಾನ ನಿಲ್ದಾಣದಲ್ಲಿ ಅಭಿಷೇಕ್ ಬಚ್ಚನ್ ಅವರ ಬಲಗೈ ಮತ್ತು ಬೆರಳುಗಳಿಗೆ ಬ್ಯಾಂಡೇಜ್ ಕಟ್ಟಿಕೊಂಡು ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಜೊತೆ ಕೆಲವು ದಿನಗಳ ಹಿಂದೆ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಗಂಗೂಬಾಯಿ ಕಾಥಿಯಾವಾಡಿ ಚಿತ್ರ ವಿವಾದ: ಆಲಿಯಾ ಭಟ್, ಬನ್ಸಾಲಿ ವಿಚಾರಣೆಗೆ ಮಧ್ಯಂತರ ತಡೆ

ಮಣಿರತ್ನಂ ಅವರ ಪೊನ್ನಿನ್ ಸೆಲ್ವನ್ ಚಿತ್ರದ ಚಿತ್ರೀಕರಣಕ್ಕಾಗಿ ಐಶ್ವರ್ಯ ರೈ ಬಚ್ಚನ್ ಮಧ್ಯಪ್ರದೇಶಕ್ಕೆ ತೆರಳಿದ್ದರು. ಭಾನುವಾರ ಮುಂಬೈಗೆ ವಾಪಸ್ ಬಂದಿದ್ದು, ಮುಂಬೈ ವಿಮಾನ ನಿಲ್ದಾಣದಲ್ಲಿ ಮಗಳು ಆರಾಧ್ಯಳೊಂದಿಗೆ ಕಾಣಿಸಿದ್ದರು.

168841

ಅಭಿಷೇಕ್ ಬಚ್ಚನ್‌ ಒಟಿಟಿ ವೇದಿಕೆಗಾಗಿ ‘ಲೂಡೋ’ ಮತ್ತು ‘ದಿ ಬಿಗ್ ಬುಲ್’ ಪ್ರಾಜೆಕ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದ ಬಳಿಕ, ಇದೀಗ ‘ಬಾಬ್ ಬಿಸ್ವಾಸ್’ ಮತ್ತು ‘ದಾಸ್ವಿ’ ಚಿತ್ರಗಳ ಶೂಟಿಂಗ್‌ನಲ್ಲಿ ತೊಡಗಿದ್ದಾರೆ.


ಇದನ್ನೂ ಓದಿ: ಲೈಂಗಿಕ ಗುಲಾಮಗಿರಿಯ ಅಪಾಯದ ಅಂಚಿನಲ್ಲಿ ಅಫ್ಘಾನ್ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...