Homeಕರ್ನಾಟಕಬೆಂಗಳೂರು: ಆಹಾರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಕಾರ್ಮಿಕರು ಬಲಿ

ಬೆಂಗಳೂರು: ಆಹಾರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಇಬ್ಬರು ಕಾರ್ಮಿಕರು ಬಲಿ

- Advertisement -
- Advertisement -

ಬೆಂಗಳೂರಿನ ಮಾಗಡಿ ರಸ್ತೆಯ ಗೋಪಾಲಪುರದಲ್ಲಿರುವ ಆಹಾರ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದುರಂತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಂಕ್​ಫುಡ್​ ತಯಾರಿಕಾ ಕಾರ್ಖಾನೆ ಒಳಗೆ ಆಹಾರ ತಯಾರಿಕೆಗೆ ಎಂದು ಇಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ, ಅದರಿಂದ ಬೆಂಕಿ ಹತ್ತಿಕೊಂಡು​ ಸ್ಪೋಟವಾಗಿ ಈ ದುರ್ಘಟನೆ ಸಂಭವಿಸಿದೆ. ಫ್ಯಾಕ್ಟರಿಯಲ್ಲಿ 15 ವಾಣಿಜ್ಯ ಸಿಲಿಂಡರ್ ಇದ್ದವು ಎನ್ನಲಾಗಿದೆ.

ಬಾಯ್ಲರ್‌ ಜೊತೆಗೆ ಸಿಲಿಂಡರ್‌ ಕೂಡ ಬ್ಲಾಸ್ಟ್ ಆದ ಕಾರಣ ಅಕ್ಕ ಪಕ್ಕದ ಕಟ್ಟಡಗಳೂ ಸಾಕಷ್ಟು ಹಾನಿಯಾಗಿದೆ. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ್ದ ಹಿರಿಯ ಪೊಲೀಸ್​ ಅಧಿಕಾರಿಗಳು ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಲಸಿಕೆ ಪಡೆಯದವರಿಗೆ ಪಡಿತರವಿಲ್ಲ ಎಂದ ಚಿ೦ತಾಮಣಿ ಅಧಿಕಾರಿಗಳು: ಜನರ ಆಕ್ರೋಶ

ಕಟ್ಟಡದ ಮಾಲೀಕ ಹಾಗೂ ಆಹಾರ ತಯಾರಿಕಾ ಕಾರ್ಖಾನೆ ಶೇರ್ ಹೋಲ್ಡರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಕಟ್ಟಡದ ಮಾಲೀಕ,  ಫ್ಯಾಕ್ಟರಿ ಮಾಲೀಕರಾದ ವಿಜಯ್ ಮೆಹ್ತಾ ಹಾಗೂ ಸಚಿನ್ ಅವರ ಮೇಲೆ ನಿರ್ಲಕ್ಷ್ಯತನದಿಂದ ಸಾವು ಆರೋಪದಡಿ ದೂರು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಯುವಕರನ್ನು ಸೌರವ್ ಹಾಗೂ ಮನೀಶ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡವರಲ್ಲಿ ಸಚಿನ್, ಧನಲಕ್ಷ್ಮಿ ಮತ್ತು ಶಾಂತಿ ಎಂದು ಗುರುತಿಸಲಾಗಿದ್ದು, ಸ್ಥಳೀಯರಾದ ಧನಲಕ್ಷ್ಮಿ ಮತ್ತು ಶಾಂತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ.

ಮಧ್ಯಾಹ್ನ 1.30ರ ಸುಮಾರಿಗೆ ಈ ಘಟನೆ ನಡೆದಿದ್ದು ಕಾರ್ಖಾನೆಯ ಒಳಗೆ ಏಳು ಮಂದಿ ಕೆಲಸ ಮಾಡುತ್ತಿದ್ದರು. ಈ ಕಾರ್ಖಾನೆಯನ್ನು  ಸುಮಾರು 5 ತಿಂಗಳ ಹಿಂದೆಯಷ್ಟೇ ಆರಂಭಿಸಲಾಗಿತ್ತು ಎನ್ನಲಾಗಿದೆ.


ಇದನ್ನೂ ಓದಿ: ಗಂಗಾವತಿ: ಮಾದಿಗ ಸಮುದಾಯದ ಮೇಲೆ ಗುಂಪು ಕಟ್ಟಿಕೊಂಡು ಆಕ್ರಮಣ; ನಾಲ್ವರು ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...