Homeಮುಖಪುಟಭಾರತ ಮಾರಾಟಕ್ಕಿದೆ: ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಕುರಿತು ಗಮನ ಸೆಳೆದ ಕಾರ್ಟೂನ್‌ಗಳು

ಭಾರತ ಮಾರಾಟಕ್ಕಿದೆ: ಸಾರ್ವಜನಿಕ ಸಂಸ್ಥೆಗಳ ಖಾಸಗೀಕರಣದ ಕುರಿತು ಗಮನ ಸೆಳೆದ ಕಾರ್ಟೂನ್‌ಗಳು

- Advertisement -
- Advertisement -

ಸೋಮವಾರ (ಆಗಸ್ಟ್ 23) ಕೇಂದ್ರದ ಹಣಕಾಸು ಇಲಾಖೆಯು ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದೆ. ವಿತ್ತೀಯ ಕೊರತೆ ನೀಗಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಯೋಜನೆಯಡಿಯಲ್ಲಿ 6 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟಕ್ಕೆ ನಿರ್ಧರಿಸಲಾಗಿದೆ. ಇದರ ಮೂಲಕ ಸರ್ಕಾರಿ- ಖಾಸಗಿ ವಲಯಗಳು ಭಾಗಿ ಆಗಬಹುದು ಎನ್ನಲಾಗಿದೆ. ಈಗಾಗಲೇ ಹತ್ತಾರು ಸಾರ್ವಜನಿಕ ಸಂಸ್ಥೆಗಳನ್ನು ಮೋದಿ ಸರ್ಕಾರ ಮಾರಾಟ ಮಾಡಿದೆ. ಈಗ ಮತ್ತಷ್ಟು ಮಾರಲು ಹೊರಟಿರುವುದುಕ್ಕೆ ತೀವ್ರ ಟೀಕೆ ಕೇಳಿಬಂದಿದೆ. ಭಾರತ ಮಾರಾಟಕ್ಕಿದೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಈ ಕುರಿತು ಬಂದ ಅತ್ಯುತ್ತಮ ಕಾರ್ಟೂನ್‌ಗಳು ಇಲ್ಲಿವೆ.

 

ಕನ್ನಡದ ಖ್ಯಾತ ಕಾರ್ಟೂನಿಸ್ಟ್ ಆದ ಪಿ.ಮಹಮ್ಮದ್‌ರವರು “ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಹೆಸರಿನಲ್ಲಿ ಭಾರತದ ಸಂಪತ್ತನ್ನು ಹೇಗೆ ಪ್ರಧಾನಿ ಮತ್ತು ಹಣಕಾಸು ಸಚಿವರು ಮಾರುತ್ತಿದ್ದಾರೆ” ಎಂಬದನ್ನು ಚಿತ್ರಿಸಿದ್ದಾರೆ.

ಸಕೆಂಡ್ ಹ್ಯಾಂಡ್ ವಸ್ತುಗಳನ್ನು ಮಾರಲು ಅತಿ ಹೆಚ್ಚು ಉಪಯೋಗಿಸುವ ಜನಪ್ರಿಯ ಮಾರಾಟ ಮತ್ತು ಕೊಳ್ಳುವ ಆಪ್ OLX ಗೆ ಈ ಸರ್ಕಾರವನ್ನು ಹೋಲಿಸಿ ನೂರಾರು ಮೀಮ್ಸ್‌ಗಳು ಸೃಷ್ಟಿಯಾಗಿವೆ. ಅರ್ಥ ಸಚಿವೆ ನಿರ್ಮಲ ಸೀತಾರಾಮನ್‌ರವರನ್ನು ಇವು ಟೀಕಿಸಿವೆ.

ಕನ್ನಡದ ಮತ್ತೊಬ್ಬ ಪ್ರತಿಭಾವಂತ ಕಾರ್ಟೂನಿಸ್ಟ್ ದಿನೇಶ್ ಕುಕ್ಕಜಡ್ಕರವರು ಪ್ರಸಿದ್ದ ವಾಷಿಂಗ್ ಪೌಡರ್ ನಿರ್ಮಾ ಜಾಹೀರಾತಿನೊಂದಿಗೆ ಮೋದಿ ಮತ್ತು ನಿರ್ಮಲಾ ಸೀತಾರಾಮನ್‌ರವರನ್ನು ಸೇರಿಸಿ ವ್ಯಂಗ್ಯ ಚಿತ್ರ ರಚಿಸಿದ್ದಾರೆ. ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಇಬ್ಬರು ಹಾಳುಗೆಡುವುದರ ಚಿತ್ರಣ ಇದಾಗಿದೆ.

ಖ್ಯಾತ ವ್ಯಂಗ್ಯಚಿತ್ರಕಾರರಾದ ಸುರೇಂದ್ರರವರು ಏರ್ ಇಂಡಿಯಾ ಖಾಸಗೀಕರಣವಾಗುವುದನ್ನು ಮೊನಚಾಗಿ ನಿರೂಪಿಸಿದ್ದಾರೆ. ಈಗಲೂ ವಿಮಾನ ನಮ್ಮದೆ, ಅವರು ಕೇವಲ ಪೈಲೆಟ್‌ಗಳು ಎಂದು ನಿರ್ಮಲ ಸೀತಾರಾಮನ್‌ರವರು ಹೇಳಿರುವಂತೆ ವ್ಯಂಗ್ಯವಾಡಿದ್ದಾರೆ.

ಕನ್ನಡದ ಖ್ಯಾತ ವ್ಯಂಗ್ಯಚಿತ್ರಕಾರರಾದ, ದೇಶದ್ಯಂತ ಪ್ರಸಿದ್ದಿಯಾಗಿರುವ ಸತೀಶ್ ಆಚಾರ್ಯರವರು ತೀಕ್ಷ್ಣ ವ್ಯಂಗ್ಯ ಚಿತ್ರ ರಚಿಸಿದ್ದಾರೆ. ಮಿತ್ರರೆ 70 ವರ್ಷ ಅವರೇನೂ ಮಾಡಿಲ್ಲ ಎಂದು ಮೋದಿ ಟೀಕಿಸುತ್ತಾ ಎಲ್ಲವನ್ನು ನ್ಯಾಷನಲ್ ಮಾನಿಟೈಸೇಷನ್ ಪೈಪ್​​ಲೈನ್ ಹೆಸರಿನಲ್ಲಿ ದೇಶದ ಸಂಪತ್ರನ್ನು ಮಾರುತ್ತಿರುವುದನ್ನು ಚಿತ್ರಿಸಿದ್ದಾರೆ.

ಅರವಿಂದ್ ಜಿ ಮೆನನ್ ಎಂಬುವವರು ನೆಹರುರವರು ಕಟ್ಟಿ ಬೆಳೆಸಿದ ಸಾರ್ವಜನಿಕ ಸಂಸ್ಥೆಗಳು ಇಂದು ಹೆಮ್ಮರವಾಗಿ ಬೆಳೆದಿವೆ. ಆದರೆ ಅವನ್ನು ಮೋದಿ-ನಿರ್ಮಲ ಜೋಡಿ ಕುಯ್ದು ಮಾರುತ್ತಿವೆ ಎಂದು ವ್ಯಂಗ್ಯ ಚಿತ್ರ ರಚಿಸಿದ್ದಾರೆ.


ಇದನ್ನೂ ಓದಿ: ಮತ್ತೆ ದೇಶದ 6 ಲಕ್ಷ ಕೋಟಿ ಮೌಲ್ಯದ ಆಸ್ತಿ ಮಾರಲು ಹೊರಟ ಒಕ್ಕೂಟ ಸರ್ಕಾರ: ಈಗಾಗಲೇ ಮಾರಾಟಗೊಂಡ ಸಂಸ್ಥೆಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The one who eats the salt should obviously drink water…..public sector employees made merry of their time…..enjoyed and ate salaries with out working then….They dint respect the public sentiments who were actually the owners of public sectors, instead they behaved as if they were the owners…..now karma is hitting them….let them eat their own fruit from the tree they planted. Where were all these cartoonists then. Supporting them now is crime….

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...