Homeಮುಖಪುಟದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

ದೆಹಲಿ ಗಲಭೆ ಪ್ರಕರಣ: ಪಬ್ಲಿಕ್ ಪ್ರಾಸಿಕ್ಯೂಟರ್‌ಗಳ ಆಯ್ಕೆ ಮಾಡಲಿರುವ ಪೊಲೀಸರು, ಪ್ರಶ್ನಿಸಿದ ಆಪ್ ಸರ್ಕಾರ

- Advertisement -
- Advertisement -

ಈ ವರ್ಷದ ಗಣರಾಜ್ಯೋತ್ಸವದ ಸಮಯದಲ್ಲಿ ದೆಹಲಿಯ ಕೆಂಪುಕೋಟೆಯ ಬಳಿ ನಡೆದ ಗದ್ದಲಗಳು ಮತ್ತು ಮತ್ತು ಕಳೆದ ವರ್ಷದ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಿಗೆ ಸಂಬಂಧಿಸಿದ ಪ್ರಕರಣಗಳಿಗೆ, ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾಗಿ (ಎಸ್‌ಪಿಪಿ) ಪೊಲೀಸರು ಆಯ್ಕೆ ಮಾಡುವ ವಕೀಲರನ್ನು ನೇಮಿಸಲು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ನಿರ್ಧರಿಸಿದ್ದಾರೆ.

ಈ ನಿರ್ಧಾರವನ್ನು ಪ್ರಶ್ನಿಸಿ ಕೇಜ್ರಿವಾಲ್‌‌ ನೇತೃತ್ವದ ಎಎಪಿ ಸರ್ಕಾರವು ದೆಹಲಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದೆ. ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್‌ ಶುಕ್ರವಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರ ಉತ್ತರವನ್ನು ಕೋರಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರಿದ್ದ ನ್ಯಾಯಪೀಠವು ದೆಹಲಿ ಲೆಫ್ಟಿನೆಂಟ್‌ ಅವರಿಗೆ ನೋಟಿಸ್ ನೀಡಿದೆ. ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ಹಾಗೂ ನಿರ್ಧಾರವನ್ನು ತಡೆಹಿಡಿಯಲು ಅರ್ಜಿಯನ್ನು ಸಲ್ಲಿಸುವಂತೆ ಎಲ್‌ಜಿಯನ್ನು ಕೇಳಿದೆ.

ಇದನ್ನೂ ಓದಿ: ದೆಹಲಿ ಗಲಭೆ: ಪೊಲೀಸರು ಅಮಾಯಕರಿಗೆ ಅಪರಾಧಿ ಪಟ್ಟ ಕಟ್ಟುತ್ತಿದ್ದಾರೆ- ಪ್ರಶಾಂತ್‌ ಭೂಷಣ್

ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 21 ರಂದು ಮುಂದಿನ ನಡೆಸುವುದಾಗಿ ನ್ಯಾಯಾಲಯವು ಪಟ್ಟಿ ಮಾಡಿದೆ.

ಹೈಕೋರ್ಟ್‌ನಲ್ಲಿ ದೆಹಲಿ ಸರ್ಕಾರವನ್ನು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ರಾಹುಲ್ ಮೆಹ್ರಾ ಪ್ರತಿನಿಧಿಸಿದ್ದಾರೆ. ಅವರು ವಕೀಲರನ್ನು ಎಸ್‌ಪಿಪಿಗಳಾಗಿ ಆಯ್ಕೆ ಮಾಡಲು ದೆಹಲಿ ಪೊಲೀಸರಿಗೆ ಅವಕಾಶ ನೀಡುವ ಲೆಫ್ಟಿನೆಂಟ್‌ಗಳ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಇದರ ಜೊತೆಗೆ ರೈತರ ಆಂದೋಲನ ಮತ್ತು ಜನವರಿ 26, 2021 ರ ಗದ್ದಲಕ್ಕೆ ಸಂಬಂಧಿಸಿದ ಪ್ರಕರಣಗಳು ಹಾಗೂ 2020 ರ ಫೆಬ್ರವರಿಯಲ್ಲಿ ನಡೆದ ದೆಹಲಿ ಗಲಭೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ.

ಈ ಪ್ರಕರಣಗಳಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌(ಎಸ್‌ಪಿಪಿ)ಗಳನ್ನು ದೆಹಲಿ ಪೊಲೀಸರು ಆಯ್ಕೆ ಮಾಡಿದ್ದಾರೆ. ಆದ್ದರಿಂದ ಇದರಲ್ಲಿ ಅವರ ಹಿತಾಸಕ್ತಿ ಕಾಯುವ ಗಂಭೀರ ಸಂಶಯವಿದೆ ಎಂದು ಅವರು ಹೇಳಿದ್ದಾರೆ.

“ನಾವು ನೇಮಿಸಿದ ಎಸ್‌ಪಿಪಿಗಳು ಸ್ವತಂತ್ರ ವ್ಯಕ್ತಿಗಳು. ನೀವು ಎಸ್‌ಪಿಪಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ದೆಹಲಿ ಪೊಲೀಸರೇ ತನಿಖೆಯ ಭಾಗವಾಗಿದ್ದಾರೆ” ಎಂದು ಸಿಂಘ್ವಿ ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಇದನ್ನೂ ಓದಿ: ತಿಲಕ್‌ ಮತ್ತು ಗಾಂಧಿ ಮೇಲೆ ದೇಶದ್ರೋಹದ ಪ್ರಕರಣಗಳು – ಮೃದುಲಾ ಮುಖರ್ಜಿ ಭಾಷಣ ಭಾಗ-2

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...