Homeಮುಖಪುಟರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

ರೈತರ ಮೇಲಿನ ಲಾಠಿ ಚಾರ್ಜ್ ಸಮರ್ಥಿಸಿಕೊಂಡ ಹರಿಯಾಣ ಸಿಎಂ

- Advertisement -
- Advertisement -

ಹರಿಯಾಣದಲ್ಲಿ ರೈತರ ಮೇಲೆ ಶನಿವಾರ ನಡೆದ ಪೊಲೀಸ್‌ ಲಾಠಿ ಚಾರ್ಜ್‌ ಅನ್ನು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಮರ್ಥಿಸಿಕೊಂಡಿದ್ದಾರೆ. ರೈತರು ಶಾಂತಿಯುತ ಪ್ರತಿಭಟನೆಯ ಆಶ್ವಾಸನೆಯನ್ನು ನೀಡಿದ್ದರು, ಆದರೆ ಅಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ಸೇರಿದಂತೆ, ಹೆದ್ದಾರಿಯನ್ನು ನಿರ್ಬಂಧಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಭಾಗವಹಿಸಿದ್ದ ಬಿಜೆಪಿ ಆಯೋಜನೆಯ ಸಭೆಯನ್ನು ವಿರೋಧಿಸಲು ಕರ್ನಾಲ್ ಕಡೆಗೆ ತೆರಳುತ್ತಿದ್ದಾಗ ಪೊಲೀಸರು ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಪ್ರತಿಭಟನಾಕಾರರು ಸಂಚಾರಕ್ಕೆ ಅಡ್ಡಿಪಡಿಸಿದ್ದರಿಂದ ಲಾಠಿಚಾರ್ಜ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದು, ಘಟನೆಯಲ್ಲಿ ಸುಮಾರು 10 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ಸಭೆಯ ನಂತರ ಶನಿವಾರ ಸಂಜೆ ಕರ್ನಾಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಖಟ್ಟರ್, “ಪ್ರತಿಭಟನಾ ನಿರತ ರೈತರು ತಮ್ಮ ಪ್ರತಿಭಟನೆಗಳು ಶಾಂತಿಯುತವಾಗಿರುತ್ತವೆ ಎಂದು ಸರ್ಕಾರಕ್ಕೆ ಈ ಹಿಂದೆ ಭರವಸೆ ನೀಡಿದ್ದರು. ಶಾಂತಿಯುತವಾಗಿ ಪ್ರತಿಭಟನೆ ಮಾಡಿದರೆ, ಅದಕ್ಕೆ ಯಾರೂ ಯಾವುದೇ ಆಕ್ಷೇಪವನ್ನು ವ್ಯಕ್ತಪಡಿಸುತ್ತಿರಲಿಲ್ಲ. ಆದರೆ ಅವರು ಪೊಲೀಸರ ಮೇಲೆ ಕಲ್ಲು ತೂರಿ, ಹೆದ್ದಾರಿಯನ್ನು ತಡೆದ ನಂತರ ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಂಡಿದ್ದಾರೆ” ಎಂದು ಹೇಳಿದ್ದಾರೆ.

ಕರ್ನಾಲ್‌ನಲ್ಲಿ ನಡೆದ ಬಿಜೆಪಿ ಸಭೆಯನ್ನು ಉಲ್ಲೇಖಿಸಿದ ಖಟ್ಟರ್, “ಇದು ಪಕ್ಷದ ರಾಜ್ಯಮಟ್ಟದ ಸಭೆಯಾಗಿದೆ. ಇದನ್ನು ವಿರೋಧಿಸಲು ರೈತ ಸಂಘಟನೆಗಳು ನೀಡಿದ ಕರೆಯನ್ನು ನಾನು ಖಂಡಿಸುತ್ತೇನೆ” ಎಂದು ಹೇಳಿದ್ದಾರೆ.

“ಯಾವುದೇ ಕಾರಣಕ್ಕೂ ಸಂಸ್ಥೆಯೊಂದರ ಕಾರ್ಯವನ್ನು ಅಡ್ಡಿಪಡಿಸುವುದು ಪ್ರಜಾಪ್ರಭುತ್ವ ವಿರೋಧಿ” ಎಂದು ಅವರು ತಿಳಿಸಿದ್ದಾರೆ.

ಹರಿಯಾಣದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ನವದೀಪ್ ಸಿಂಗ್ ವಿರ್ಕ್, “ನಾಲ್ಕು ಪ್ರತಿಭಟನಾಕಾರರು ಮಾತ್ರ ಗಾಯಗೊಂಡಿದ್ದಾರೆ. ಆದರೆ ಹತ್ತು ಪೊಲೀಸರು ಘಟನೆಯಲ್ಲಿ ಗಾಯಗೊಂಡಿದ್ದಾರೆ” ಎಂದು ಈ ಹಿಂದೆ ತಿಳಿಸಿದ್ದರು. ಕೆಲವು ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದ್ದು, ಹಲ್ಲೆಗೂ ಯತ್ನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ ಮುಖ್ಯಮಂತ್ರಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ಮೇಲೆ ಲಾಠಿಚಾರ್ಜ್- ಹಲವರಿಗೆ ಗಾಯ

ಹೆದ್ದಾರಿಯನ್ನು ನಿರ್ಬಂಧಿಸಿದ್ದರಿಂದ ನಾವು ಸೌಮ್ಯವಾಗಿ ಬಲ ಪ್ರಯೋಗಿಸಿದ್ದೇವೆ ಎಂದು ಕರ್ನಾಲ್‌ ಐಜಿ ಮಮತಾ ಸಿಂಗ್ ಹೇಳಿದ್ದಾರೆ. “ಪ್ರತಿಭಟನಾಕಾರರು ಪೊಲೀಸರ ಕಡೆಗೆ ಕಲ್ಲುಗಳನ್ನು ಎಸೆದಿದ್ದರಿಂದ ಅವರನ್ನು ಚದುರಿಸಲು ಸೌಮ್ಯ ಬಲಪ್ರಯೋಗ ಮಾಡಲಾಯಿತು” ಎಂದು ಹೇಳಿದ್ದಾರೆ.

ಈ ಮಧ್ಯೆ, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕೈಟ್ ಭಾನುವಾರ ಕರ್ನಾಲ್‌ನ ಆಸ್ಪತ್ರೆಯಲ್ಲಿ ಗಾಯಗೊಂಡ ಪ್ರತಿಭಟನಾಕಾರರನ್ನು ಭೇಟಿಯಾದರು. ಪೊಲೀಸರ ಕ್ರೂರ ಲಾಠಿಚಾರ್ಜ್‌ ಅನ್ನು ಅವರು ಖಂಡಿಸಿದ್ದಾರೆ.

“ಕರ್ನಾಲ್‌ನಲ್ಲಿ ಸಂಚು ಹೂಡಿ ಇದನ್ನು ಮಾಡಲಾಗಿದೆ. ರೈತರ ತಲೆಬುರುಡೆ ಒಡೆಯಲು ಪೊಲೀಸರಿಗೆ ಆದೇಶಿಸುತ್ತಿರುವ ಮ್ಯಾಜಿಸ್ಟ್ರೇಟ್‌ನ ಆದೇಶವನ್ನು ನೋಡಿದರೆ ಇದು ಸ್ಪಷ್ಟವಾಗುತ್ತದೆ” ಎಂದು ಟೀಕಾಯತ್‌ ಕಿಡಿಕಾರಿದ್ದಾರೆ.

ಇದನ್ನೂ ಓದಿ: ‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...