Homeಮುಖಪುಟ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

- Advertisement -
- Advertisement -

ಶನಿವಾರದಂದು ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ತಲೆ ಬುರುಡೆ ಹೊಡೆಯಿರಿ ಎಂದು ಆದೇಶ ನೀಡಿದ್ದ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹರಿಯಾಣ ಉಪಮುಖ್ಯಮಂತ್ರಿ ದು‍ಷ್ಯಂತ್ ಚೌತಾಲ ಹೇಳಿದ್ದಾರೆ.

“ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಅವರು ಯಾರಾದರೂ ಆಗಿರಲಿ, ಎಲ್ಲಿಂದ ಬಂದಿರಲಾಗಿರಲಿ ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಆಯುಷ್ ಸಿನ್ಹಾ ಹೇಳಿದ್ದರು.

ಅದರಂತೆ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಮಾನವೀಯ ಲಾಠೀಚಾರ್ಜ್ ಮಾಡಿದ್ದರು. 10 ಕ್ಕೂ ಹೆಚ್ಚು ರೈತರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಲಾಠೀಚಾರ್ಜ್‌ಗೆ ಕಾರಣವಾಗಿ ಅಧಿಕಾರಿ ನಾನು ಎರಡು ದಿನದಿಂದ ನಿದ್ರೆ ಮಾಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಆದರೆ ಹೋರಾಟನಿರತ ರೈತರು 365 ದಿನದಿಂದ ನಿದ್ರೆ ಮಾಡಲು ಸಾಧ್ಯವಾಗಿಲ್ಲ ಎಂದು ಅರ್ಥ ಮಾಡಿಕೊಳ್ಳಬೇಕು. ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ದುಷ್ಯಂತ್ ಚೌತಾಲ ಹೇಳಿದ್ದಾರೆ.

ರೈತರ ಮೇಲೆ ಹಲ್ಲೆ ವಿಷಯ ತಿಳಿಯುತ್ತಲೇ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತರು ದೆಹಲಿ-ಚಂಡೀಗಡ ರಸ್ತೆ ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಎಸ್‌ಡಿಎಂ ಆಯುಷ್ ಸಿನ್ಹಾ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸಿದೆ.


ಇದನ್ನೂ ಓದಿ: ‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...