Homeಮುಖಪುಟಅಫ್ಘಾನ್ ಪರಿಸ್ಥಿತಿ ದೇಶದಲ್ಲಿ ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಅಫ್ಘಾನ್ ಪರಿಸ್ಥಿತಿ ದೇಶದಲ್ಲಿ ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್

- Advertisement -
- Advertisement -

ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ನಡೆಯುತ್ತಿರುವ ಘಟನೆಗಳು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ. ಒಕ್ಕೂಟ ಸರ್ಕಾರವು ಎಚ್ಚರವಾಗಿದ್ದು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸಮರ್ಥವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳ ಲಾಭವನ್ನು ಪಡೆಯುವ ಮೂಲಕ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಲು ಯಾವುದೇ ದೇಶ ವಿರೋಧಿ ಶಕ್ತಿಗೆ ಅವಕಾಶ ನೀಡಬಾರದು ಎಂದೂ ಅವರು ಹೇಳಿದ್ದಾರೆ. ಅವರು ರಾಷ್ಟ್ರೀಯ ಭದ್ರತೆ ವಿಷಯದ ಕುರಿತು ಪಂಜಾಬ್ ವಿಶ್ವವಿದ್ಯಾಲಯ ಆಯೋಜಿಸಿದ್ದ ಮೂರನೇ ಬಲರಾಮ್ಜಿ ದಾಸ್ ಟಂಡನ್ ಸ್ಮಾರಕ ಉಪನ್ಯಾಸವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಇದು ಅಫ್ಘಾನ್‌‌ ನಾಗರಿಕನ ವಿಡಿಯೊವಲ್ಲ; ಎಡಿಟೆಡ್‌!

“ನೆರೆಯ ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎಂಬುದು ಭದ್ರತೆಯ ವಿಷಯದಲ್ಲಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ನಮ್ಮ ಸರ್ಕಾರ ಅಲ್ಲಿನ ಬೆಳವಣಿಗೆಗಳ ಮೇಲೆ ನಿಗಾ ಇಟ್ಟಿದೆ” ಎಂದು ರಾಜನಾಥ್‌ ಸಿಂಗ್ ತಮ್ಮ ಭಾಷಣದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೇಳಿದ್ದಾರೆ.

“ಭಾರತೀಯರ ಭದ್ರತೆಯ ಜೊತೆಗೆ, ನಮ್ಮ ಸರ್ಕಾರವು ದೇಶ ವಿರೋಧಿ ಶಕ್ತಿಗಳು ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಬಾರದು ಎಂದು ಬಯಸುತ್ತದೆ. ಅದು ಅಲ್ಲಿನ ಬೆಳವಣಿಗೆಯ ಲಾಭವನ್ನು ಪಡೆದುಕೊಳ್ಳುತ್ತದೆ” ಎಂದು ಅವರು ತಿಳಿಸಿದ್ದಾರೆ.

ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ಸಮರ್ಥವಾಗಿದೆ ಎಂದು ರಾಜನಾಥ್‌ ಸಿಂಗ್ ಪ್ರತಿಪಾದಿಸಿದ್ದಾರೆ.

ಎರಡು ದಶಕಗಳ ಯುದ್ಧದ ಬಳಿಕ ಅಮೆರಿಕಾವು ತನ್ನ ಸೈನ್ಯವನ್ನು ಹಿಂಪಡೆಯಲು ಶುರುಮಾಡಿದ ಎರಡು ವಾರಗಳ ನಂತರ, ತಾಲಿಬಾನ್‌ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸಿದೆ. ಅದು ದೇಶದ ಎಲ್ಲಾ ಪ್ರಮುಖ ನಗರಗಳನ್ನು ಕೆಲವೇ ದಿನಗಳಲ್ಲಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಅಫ್ಘಾನ್ ತಾಲಿಬಾನ್ ಗೆಲುವು: ಒಂದು ಎಡಪಂಥೀಯ ನೋಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತರ ಮೇಲಾಗುತ್ತಿರುವ ದೌರ್ಜನ್ಯ, ದಬ್ಬಾಳಿಕೆ ಇದರ ಬಗ್ಗೆ ಯಾವ ಪ್ರಶ್ನೆಗಳೂ ಮೂಡಲಿಲ್ಲವೆನ್ರಿ… ನೀವೇ ತಾಲಿಬಾನಿಗಲಾಗಿದ್ದರಲ್ವಾ. ಅವರಿಗೂ ನಿಮಗೂ ಏನೂ ವ್ಯತ್ಯಾಸ ಕಾನುತಿಲ್ಲ.

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...