Homeಮುಖಪುಟಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಸೇರಿದ ಮತ್ತೊಬ್ಬ ಬಿಜೆಪಿ ಶಾಸಕ

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಸೇರಿದ ಮತ್ತೊಬ್ಬ ಬಿಜೆಪಿ ಶಾಸಕ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಟಿಎಂಸಿ ತೊರೆದು ಬಿಜೆಪಿ ಸೇರಿದ್ದ ಸದಸ್ಯರು ಮತ್ತೆ ವಾಪಸ್ ಆಗುತ್ತಿರುವುದು ನಡೆಯುತ್ತಲೇ ಇದೆ. ಮಂಗಳವಾರ ಮತ್ತೊಬ್ಬ ಬಿಜೆಪಿ ಶಾಸಕ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.

ಉತ್ತರ 24 ಪರಗಣಗಳ ಬಾಗ್ದಾದ ಬಿಜೆಪಿ ಶಾಸಕ ಬಿಸ್ವಜಿತ್ ದಾಸ್ ಇಂದು ಬಿಜೆಪಿ ತೊರೆದು ಟಿಎಂಸಿ ಸೇರಿದ್ದಾರೆ. ಕೊಲ್ಕಾತ್ತಾದ ಪಕ್ಷದ ಕಚೇರಿಯಲ್ಲಿ ಪಕ್ಷದ ಧ್ವಜ ಹಿಡಿದಿದ್ದಾರೆ. ಇವರೊಂದಿಗೆ ಕೌನ್ಸಿಲರ್ ಮನೋತೋಶ್ ನಾಥ್ ಮತ್ತು ಸುಬ್ರತಾ ಪಾಲ್ ಎಂಬುವವರು ಟಿಎಂಸಿಗೆ ಸೇರಿಕೊಂಡಿದ್ದಾರೆ.

ಬಾಗ್ದಾದ ಶಾಸಕ ಬಿಸ್ವಜಿತ್ ದಾಸ್, ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಈಗ ಮತ್ತೆ ಮಾತೃ ಪಕ್ಷವನ್ನು ಸೇರುವ ಮೂಲಕ ಚುನಾವಣೆಯ ನಂತರ ಟಿಎಂಸಿಗೆ ಮರಳಿದ ಮೂರನೇ ಶಾಸಕರಾಗಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಟಿಎಂಸಿ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್

ಸೋಮವಾರ ವಿಷ್ಣುಪುರದ ಶಾಸಕ ತನ್ಮಯ್ ಘೋಷ್ ತೃಣಮೂಲ ಕಾಂಗ್ರೆಸ್ ಸೇರಿದ್ದಾರೆ. ಟಿಎಂಸಿ ಬಿಟ್ಟು ಬಿಜೆಪಿ ಸೇರಿದ ಆರು ತಿಂಗಳ ಒಳಗಾಗಿ ಮತ್ತೆ ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮರಳಿದ್ದರು. ಈ ವೇಳೆ ಬಿಜೆಪಿ ಸೇಡು ತೀರಿಸಿಕೊಳ್ಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದರು.

“ನಾನು ಪಶ್ಚಿಮ ಬಂಗಾಳದ ಕಲ್ಯಾಣಕ್ಕಾಗಿ TMC ಗೆ ಸೇರಲು ಎಲ್ಲರನ್ನು ಕೋರುತ್ತೇನೆ. ಕೇಂದ್ರದ ಏಜೆನ್ಸಿಗಳನ್ನು ಬಳಸಿ ಪಶ್ಚಿಮ ಬಂಗಾಳದ ಜನರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿರನ್ನು ಬೆಂಬಲಿಸುವಂತೆ ಕೇಳಿಕೊಳ್ಳುತ್ತೇನೆ” ಎಂದಿದ್ದರು.

ಬಿಜೆಪಿ ಶಾಸಕ ಮುಕುಲ್ ರಾಯ್ ಮೊದಲು ಟಿಎಂಸಿ ಸೇರುವ ಮೂಲಕ ಪಕ್ಷಾಂತರಕ್ಕೆ ನಾಂದಿ ಹಾಡಿದ್ದರು. ಈಗ ಮುಕುಲ್ ರಾಯ್, ತನ್ಮಯ್ ಘೋಷ್ ಮತ್ತು ಬಿಸ್ವಜಿತ್ ದಾಸ್ ಸೇರಿ ಮೂವರು ಹಾಲಿ ಶಾಸಕರು ಬಿಜೆಪಿ ಬಿಟ್ಟು ಟಿಎಂಸಿಗೆ ಸೇರಿದ್ದಾರೆ.

ಇನ್ನು ಅನೇಕ ಬಿಜೆಪಿ ನಾಯಕರು ಟಿಎಂಸಿಯೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಜ್ಯ ಶಿಕ್ಷಣ ಸಚಿವ ಬ್ರಾತ್ಯ ಬಸು ಹೇಳಿದ್ದಾರೆ.


ಇದನ್ನೂ ಓದಿ: ಕಾಂಗ್ರೆಸ್‌ಗೆ ಮಾಜಿ ಸಂಸದೆ ಸುಶ್ಮಿತಾ ದೇವ್ ರಾಜೀನಾಮೆ: ಟಿಎಂಸಿ ಸೇರ್ಪಡೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...