HomeಮುಖಪುಟRSS ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ವಿವಾದ ಸೃಷ್ಟಿಸಿದ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ!

RSS ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ ವಿವಾದ ಸೃಷ್ಟಿಸಿದ ಸುಪ್ರೀಂಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ!

- Advertisement -
- Advertisement -

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್‌ ಬೋಬ್ಡೆ ಅವರು ಮಂಗಳವಾರದಂದು ಆರೆಸ್ಸೆಸ್‌‌‌‌ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ನಾಗಪುರದ ಕೇಂದ್ರ ಕಚೇರಿಯಲ್ಲಿ ಭೇಟಿಯಾಗಿ ವಿವಾದ ಸೃಷ್ಟಿಸಿದ್ದಾರೆ. ಕಚೇರಿಯಲ್ಲಿ ಅವರು ಸುಮಾರು ಒಂದು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಆರೆಸ್ಸೆಸ್‌ ಅಧೀಕೃತವಾಗಿ ಇಂತಹದ್ದೊಂದು ಸಭೆ ನಡೆರುವುದನ್ನು ನಿರಾಕರಿಸಿದ್ದಾರಾದರೂ, ವಿಶ್ವಾಸಾರ್ಹ ಮೂಲಗಳು ಸಭೆ ನಡೆದಿರುವುದನ್ನು ದೃಪಡಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. “ಮಹಲ್ ಪ್ರದೇಶದ ಆರ್‌ಎಸ್‌ಎಸ್ ಪ್ರಧಾನ ಕಚೇರಿಯಲ್ಲಿ ಸಂಜೆ 4 ರಿಂದ 5 ರ ನಡುವೆ ಈ ಸಭೆ ನಡೆಯಿತು” ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ಇದನ್ನೂ ಓದಿ: ಸಂಸ್ಕೃತ ಅಧೀಕೃತ ರಾಷ್ಟ್ರೀಯ ಭಾಷೆ ಎಂದು ಅಂಬೇಡ್ಕರ್ ಪ್ರಸ್ತಾಪಿಸಿದ್ದರು: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ವಿವಾದ

ನ್ಯಾಯಮೂರ್ತಿ ಬೋಬ್ಡೆ ಅವರು ಆರೆಸ್ಸೆಸ್‌‌ ಮುಖ್ಯಸ್ಥರನ್ನು ಪ್ರಧಾನ ಕಚೇರಿಯಲ್ಲಿ ಔಪಚಾರಿಕವಾಗಿ ಭೇಟಿಯಾಗಿದ್ದು ಇದೇ ಮೊದಲು ಎನ್ನಲಾಗಿದೆ. ಇಷ್ಟೆ ಅಲ್ಲದೆ ಅವರು ಮುಂಬೈನ ನಾಗಪುರದ ಮಹಲ್ ಪ್ರದೇಶದಲ್ಲಿರುವ ಆರೆಸ್ಸೆಸ್‌‌ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಜನ್ಮಸ್ಥಳಕ್ಕೂ ಭೇಟಿ ನೀಡಿದ್ದಾರೆ ಎಂದು TNIE ವರದಿ ಮಾಡಿದೆ.

ನ್ಯಾಯಮೂರ್ತಿ ಬೋಬ್ಡೆ ಅವರು ಮಹಾರಾಷ್ಟ್ರದ ನಾಗ್ಪುರದವರಾಗಿದ್ದು, ಅಲ್ಲಿ ಹಲವು ವರ್ಷಗಳು ಕಾನೂನು ಅಭ್ಯಾಸ ಮಾಡುತ್ತಿದ್ದರು. ಈ ವರ್ಷದ ಆರಂಭದಲ್ಲಿ ತಮ್ಮ ವೃತ್ತಿಯಿಂದ ಅವರು ನಿವೃತ್ತರಾಗಿದ್ದರು. ನಿವೃತ್ತಿಯ ನಂತರ, ಎಪ್ರಿಲ್‌ನಿಂದ ಅವರು ನಾಗ್ಪುರದಲ್ಲಿ ವಾಸಿಸುತ್ತಿದ್ದಾರೆ.

ಅವರಿಗಿಂತಲೂ ಹಿಂದೆ ನಿವೃತ್ತರಾಗಿದ್ದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು, ಕಳೆದ ವರ್ಷ ನಿವೃತ್ತಿಯ ನಂತರ ರಾಜ್ಯಸಭೆಗೆ ನಾಮನಿರ್ದೇಶನಗೊಂಡರು. ಇದು ಕೂಡಾ ಭಾರೀ ವಿವಾದವನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: ಬೈಕ್ ಬಿಜೆಪಿ ನಾಯಕನ ಮಗನದ್ದು; ಹೆಲ್ಮೆಟ್, ಮಾಸ್ಕ್ ಎಲ್ಲಿ ಮೈ ಲಾರ್ಡ್…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮ್ಮ ದೇಶದಲ್ಲಿಂದು, ನ್ಯಾಯಮೂರ್ತಿಗಳು ನಿವೃತ್ತರಾದ ನಂತರ ಆಡಳಿತಾರೂಢರ ಕೃಪಾಕಟಾಕ್ಶ ಪಡೆಯಲು, ಬಿಕ್ಶುಕರಂತೆ ವರ್ತಿಸುತ್ತಿರುವುದು ನ್ಯಾಯಾಂಗದ ಗನತೆಗೆ ಕುಂದು ತರುತ್ತಿದೆ ಹಾಗೂ ನ್ಯಾಯಾಂಗದ ಬಗ್ಗೆ ಜನಸಾಮಾನ್ಯರು ನಂಬಿಕೆ ಕಳೆದುಕೊಳ್ಳಲು ಪ್ರೇರಣೆ ನೀಡುತ್ತಿದೆ.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...