ಬೆಂಗಳೂರು: ಕಾರ್ಮಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕವೇ ಲಸಿಕೆ ನೀಡಬೇಕು ಎಂದು ಆಗ್ರಹಿಸಿ ಸಿಐಟಿಯು ನೇತೃತ್ವದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಘಟನೆಯ ಸದಸ್ಯರು ರಾಜ್ಯವ್ಯಾಪಿ ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯದಲ್ಲಿನ 40 ಲಕ್ಷ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ಕೋವಿಡ್ ಲಸಿಕೆಗಳನ್ನು ನೀಡಲು ಸರ್ಕಾರ ನಿರ್ಧರಿಸಿರುವುದು ಸ್ವಾಗತಾರ್ಹ. ಉಚಿತವಾಗಿ ಕೋವಿಡ್ ಲಸಿಕೆಯನ್ನು ಕಾರ್ಮಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ನೀಡಬೇಕು. ಯಾವುದೇ ಕಾರಣಕ್ಕೂ ಖಾಸಗಿ ಆಸ್ಪತ್ರೆಗಳ ಮೂಲಕ ನೀಡಬಾರದು ಎಂದು ಒತ್ತಾಯಿಸಿದರು.
ಕಾರ್ಮಿಕ ಆಯುಕ್ತರು ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಸಭೆ ನಡೆಸಿ ಪ್ರತಿ ಲಸಿಕೆಗೆ 780 ರೂಪಾಯಿ ದರದಲ್ಲಿ ರಾಜ್ಯದ 30 ಲಕ್ಷ ನೋಂದಾಯಿತ ಕಾರ್ಮಿಕರಿಗೆ ಹಾಗೂ 10 ಲಕ್ಷ ವಲಸೆ ಕಾರ್ಮಿಕರಿಗೆ ಲಸಿಕೆ ನೀಡುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿದು ಬಂದಿದೆ. ಇದರಿಂದ ಕಲ್ಯಾಣ ಮಂಡಳಿಯ ಸುಮಾರು 624 ಕೋಟಿ ಹಣವು ನಿರಾಯಸವಾಗಿ 400 ಖಾಸಗಿ ಆಸ್ಪತ್ರೆಗಳ ಪಾಲಾಗಲಿದೆ. ಮಂಡಳಿಯ ನಿಧಿಯನ್ನು ಖಾಲಿ ಮಾಡುವ ಹುನ್ನಾರವಾಗಿದೆ. ಕಟ್ಟಡ ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಾಗಿರುವ ನಿಧಿಯನ್ನು ಈ ರೀತಿ ದುರ್ಬಳಕೆ ಮಾಡುವ ಪ್ರಯತ್ನವು ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು 2020 ಮಾರ್ಚಿನ ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ನಿರ್ದೇಶನದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಿದರು.
ಕೋವಿಡ್ ಹೆಸರಲ್ಲಿ ಸುಲಿಗೆ ಮಾಡುವವರಿಗೆ ಬಡವರ ಕಲ್ಯಾಣಕ್ಕಾಗಿ ಸಂಗ್ರಹಹಿಸಲಾದ ಕಾರ್ಮಿಕ ಮಂಡಳಿಯಲ್ಲಿ ಇರುವ ಸೆಸ್ ಹಣವನ್ನು ಸರ್ಕಾರ ಧಾರೆ ಎರೆಯಲು ಹೊರಟಿದೆ. ಈಗಾಗಲೇ ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಹಾಗೂ ಆರೋಗ್ಯ ಸುರಕ್ಷಾ ಕಿಟ್, ಸಾಪ್ಟವೇರ್ ಅಳವಡಿಕೆ ಹಾಗೂ ಕಂಪ್ಯೂಟರ್ ಮತ್ತು ಟಿವಿಗಳ ಖರೀದಿಗಳಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿದರು.
ಕೊರೊನಾ ಕಾಲದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಅನ್ನ, ಆಹಾರ, ಆರೋಗ್ಯ, ಶಿಕ್ಷಣ ಮತ್ತು ಬದುಕಿನ ಭದ್ರತೆ ಒದಗಿಸುವುದು ಕೇಂದ್ರ ಮತ್ತು ರಾಜ್ಯಗಳ ಕೆಲಸವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅದಕ್ಕಾಗಿ ಕೆಲವು ರಾಜ್ಯ ಸರ್ಕಾರಗಳು ಸಾವಿರಾರು ಕೋಟಿ ರೂ.ಗಳ ಬಜೆಟ್ ಅನುದಾನವನ್ನು ಖರ್ಚು ಮಾಡುತ್ತಿವೆ. ಆದರೆ ನಮ್ಮ ರಾಜ್ಯ ಸರ್ಕಾರ ಮಾತ್ರ ಈ ಎಲ್ಲ ಕೆಲಸಗಳಿಗೆ ತನ್ನ ಹಣವನ್ನು ಖರ್ಚು ಮಾಡುವ ಬದಲು ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಗಾಳಿಗೆ ತೂರಿ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ಮೂಲಕ ಜಾರಿ ಮಾಡಿಸುತ್ತಾ ಸಾವಿರಾರು ಕೋಟಿ ಹಣವನ್ನು ಖರ್ಚು ಮಾಡಿಸುತ್ತಿದೆ. ಇಂತಹ ಕಾರ್ಮಿಕ ವಿರೋಧಿ ಕ್ರಮವನ್ನು ಕೂಡಲೇ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(ಸಿಐಟಿಯು) ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ, ಸಂಘಟನೆಯ ಪರವಾಗಿ ಲಿಂಗರಾಜು, ಕೆ.ಎಸ್.ಲಕ್ಷ್ಮಿ, ಐಎನ್‌ಟಿಯುಸಿ ಪರವಾಗಿ ಶಾಮಣ್ಣರೆಡ್ಡಿ, ಎನ್‌ಸಿಎಲ್ ಪರವಾಗಿ ಧನಶೇಖರ್, ಎಐಟಿಯುಸಿ ಪರವಾಗಿ ಗುರುವಯ್ಯ, ಎಐಸಿಸಿಟಿಯು ಪರವಾಗಿ ಅಪ್ಪಣ್ಣ, ಎಐಯುಟಿಯುಸಿ ಪರವಾಗಿ ಷಣ್ಮುಗಂ ಹಾಗೂ ಕಾರ್ಮಿಕರು ಭಾಗವಹಿಸಿದ್ದರು.ಕೋಲಾರದಲ್ಲಿ ನಡೆದ ಪ್ರತಿಭಟನೆಯ ಭಾಗವಾಗಿ ಅಂಚೆ ಕಚೇರಿಯಿಂದ ಮುಖ್ಯಮಂತ್ರಿಗೆ ಪತ್ರ ಚಳುವಳಿ ಮೂಲಕ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಫೆಡರೇಶನ್ ನ ಮುಖಂಡರಾದ ಎಂ.ಭೀಮರಾಜ್, ವಿಜಯಕೃಷ್ಣ, ಆರೋಗ್ಯನಾಥನ್, ಹೊನ್ನೇನಹಳ್ಳಿ ಅಂಬರೀಶ್, ರಾಮಚಂದ್ರಪ್ಪ, ಗೋಪಾಲಪ್ಪ ವೆಂಕಟೇಶ್, ಆನಂದ್ ಹಾಜರಿದ್ದರು.
ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ.
ಮೇಲಧಿಕಾರಿಗಳು...
ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...
ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ.
ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...
ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....
ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...
ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...
ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...
ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ.
ಆದರೆ ಯಾವುದೇ ಪ್ರಕರಣವೂ...
ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...