Homeಅಂತರಾಷ್ಟ್ರೀಯನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

ನಮಗೆ ಕಾಶ್ಮೀರದ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕಿದೆ: ತಾಲಿಬಾನ್ ವಕ್ತಾರ

- Advertisement -
- Advertisement -

ತಾಲಿಬಾನ್ ಆಡಳಿತದಲ್ಲಿ ಅಫ್ಘಾನಿಸ್ತಾನ ಪ್ರದೇಶವನ್ನು ಭಾರತ ವಿರೋಧಿ ಚಟುವಟಿಕೆಗೆ ಬಳಸಬಹುದೆಂಬ ಭಾರತದ ಆತಂಕದ ನಡುವೆ, ಕಾಶ್ಮೀರ ಸೇರಿದಂತೆ ಎಲ್ಲಿಯಾದರೂ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ತನಗಿದೆ ಎಂದು ತಾಲಿಬಾನ್ ಗುಂಪು ಹೇಳಿದೆ.

ಆದರೆ, ಯಾವುದೇ ದೇಶದ ವಿರುದ್ಧ ಶಸ್ತ್ರಾಸ್ತ್ರಗಳನ್ನು ಬಳಸುವ ನೀತಿಯನ್ನು ನಮ್ಮ ಗುಂಪು ಹೊಂದಿಲ್ಲ ಎಂದೂ ಸೇರಿಸಿದೆ.

ಬಿಬಿಸಿ ಉರ್ದುಗೆ ನೀಡಿರುವ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಸುಹೇಲ್ ಶಾಹೀನ್, “ಮುಸ್ಲಿಮರಾಗಿರುವ ನಮಗೆ ಕಾಶ್ಮೀರ, ಭಾರತ ಮತ್ತು ಯಾವುದೇ ಇತರ ದೇಶಗಳಲ್ಲಿ ಮುಸ್ಲಿಮರಿಗಾಗಿ ಧ್ವನಿ ಎತ್ತುವ ಹಕ್ಕು ಇದೆ” ಎಂದಿದ್ದಾರೆ.

“ಮುಸ್ಲಿಮರು ನಿಮ್ಮ ಸ್ವಂತ ಜನರು, ನಿಮ್ಮ ಸ್ವಂತ ಪ್ರಜೆಗಳು ಎಂದು ಹೇಳುತ್ತೇವೆ. ನಿಮ್ಮ ಕಾನೂನುಗಳ ಅಡಿಯಲ್ಲಿ ಅವರಿಗೆ ಸಮಾನ ಹಕ್ಕುಗಳಿವೆ. ಎಂದು ಮುಸ್ಲಿಮರಿಗಾಗಿ ಧ್ವನಿ ಎತ್ತುತ್ತೇವೆ ” ಎಂದು ಹೇಳಿದ್ದಾರೆ.

ಆದರೆ, ಈ ಹಿಂದೆ ಕಾಶ್ಮೀರದ ಬಗ್ಗೆ ಹೇಳಿಕೆ ನೀಡಿದ್ದ ತಾಲಿಬಾನ್, ಕಾಶ್ಮೀರದ ಸಮಸ್ಯೆ ಅವರ ಆಂತರಿಕ ವಿಷಯ ಎಂದಿತ್ತು. ಅಫ್ಘಾನಿಸ್ತಾನದ ಭೂಮಿಯನ್ನು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗಳಿಗೆ ಬಳಸದಂತೆ ನೋಡಿಕೊಳ್ಳುವುದು ಭಾರತದ ಗುರಿಯಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಅರಿಂದಮ್ ಬಾಗ್ಚಿ ಗುರುವಾರ ಹೇಳಿದ್ದರು.

ಇದನ್ನೂ ಓದಿ: ತಾಲಿಬಾನ್‌ಗೆ ಅಧಿಕಾರ ಸಿಕ್ಕಿದ್ದಕ್ಕೆ ಸಂಭ್ರಮಿಸುವುದು ಅಪಾಯ: ನಾಸೀರುದ್ದೀನ್‌ ಶಾ

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ಸುರಕ್ಷತೆ, ಭದ್ರತೆ ಮತ್ತು ಆರಂಭಿಕ ವಾಪಸಾತಿ ಮತ್ತು ಅಫ್ಘಾನ್ ಪ್ರಜೆಗಳು, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ಭಾರತಕ್ಕೆ ಪ್ರಯಾಣಿಸುವ ಬಗ್ಗೆಯೂ ಚರ್ಚೆಗಳು ಕೇಂದ್ರೀಕೃತವಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ಪ್ರದೇಶದಲ್ಲಿ ಭದ್ರತಾ ನಿಗಾ ಹೆಚ್ಚಿಸುವ ನಿರೀಕ್ಷೆಯಿದೆ.

“ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಲಾಗುವುದು. ಆದರೆ ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿವೆ ಮತ್ತು ಅಫ್ಘಾನಿಸ್ತಾನದಲ್ಲಿರುವ ಪಾಕಿಸ್ತಾನ ಮೂಲದ ಗುಂಪುಗಳು ಪರಿಸ್ಥಿತಿಯನ್ನು ಬಳಸಿಕೊಳ್ಳುವ ಸಾಮರ್ಥ್ಯ ಕಡಿಮೆ” ಎಂದು ANI ಕಳೆದ ತಿಂಗಳು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿತ್ತು.


ಇದನ್ನೂ ಓದಿ: ಬಹುಜನ ಭಾರತ; ಮನುವಾದ ಸುಣ್ಣವಾದರೆ ತಾಲಿಬಾನ್ ಬೆಣ್ಣೆ ಹೇಗಾದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಿಮಗೆ ಕಾಶ್ಮೀರ ಮುಸ್ಲೀಂರ ಬಗ್ಗೆ ಕಾಳಜಿ ವಹಿಸುವ ಅಧಿಕಾರ ಇದ್ದರೆ ,ಭಾರತೀಯರಿಗೆ ತಾಲಿಬಾನ್ ನೆಲದಲ್ಲಿ ತಾಲಿಬಾನ್ ಗಳನ್ನು ನಿರ್ನಾಮ ಮಾಡುವ ಅಧಿಕಾರ ಸಹ ಇದೆ .ಜೈ ಹಿಂದ್

  2. ಪಸ್ತೂನ್ ಜನರನ್ನು ಬೇರ್ಪಡಿಸಿರುವ ಡುರಾಂಡ್ ಲಯ್ನ್ ಜಗಳವನ್ನು ಮೊದಲು ಬಗೆಹರಿಸಲು ಹೆಜ್ಜೆ ಇಡಲಿ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...