Homeಮುಖಪುಟಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

- Advertisement -
- Advertisement -

ಬಿಹಾರ ಆಡಳಿತ ಪಕ್ಷವಾಗಿರುವ ಜೆಡಿಯುನ ಶಾಸಕರೊಬ್ಬರು ರೈಲಿನಲ್ಲಿ ಕೇವಲ ಒಳಉಡುಪಿನಲ್ಲಿ ಓಡಾಡಿರುವ ಘಟನೆ ನಡೆದಿದೆ. ಘಟನೆಯು ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುರುವಾರ ರಾತ್ರಿ ಘಟನೆ ನಡೆದಿದ್ದು, ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗುವಂತೆ ನಡೆದುಕೊಂಡವರನ್ನು ಭಾಗಲ್ಪುರ ಜಿಲ್ಲೆಯ ಗೋಪಾಲಪುರ ವಿಧಾನ ಸಭೆಯ ಶಾಸಕರಾದ ನರೇಂದ್ರ ಕುಮಾರ್ ನೀರಜ್ ಅಲಿಯಾಸ್ ಗೋಪಾಲ್ ಮಂಡಲ್ ಎಂದು ಗುರುತಿಸಲಾಗಿದೆ.

ಅವರು ಪಾಟ್ನಾದಿಂದ ದೆಹಲಿಗೆ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಎ -1 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು.

ರೈಲು ಪಾಟ್ನಾದಿಂದ ಹೊರಟ ತಕ್ಷಣ, ಶಾಸಕ ತನ್ನ ಒಳ ಉಡುಪುಗಳಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದೆ. ಇದರ ವಿರುದ್ದ ಸಹ ಪ್ರಯಾಣಿಕರು ಪ್ರತಿಭಟಿಸಿದ ನಂತರವೂ, ಅವರು ಅದೇ ಉಡುಪಿನಲ್ಲಿ ಶೌಚಾಲಯದ ಕಡೆಗೆ ನಡೆಯುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಏರುತ್ತ ಇಳಿಯುತ್ತ ಸಾಗುತ್ತಿರುವ ಪ್ರಧಾನಿ ಮೋದಿ ಜನಪ್ರಿಯತೆ ಹಿಂದಿನ ಕಾರಣಗಳು

ಆದರೆ ಶಾಸಕ ತನ್ನ ನಡೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. ರೈಲು ಹತ್ತಿದ ಕೆಲವೇ ನಿಮಿಷಗಳಲ್ಲಿ ತಾನು ಅನಾರೋಗ್ಯಕ್ಕೆ ಒಳಗಾದ ಕಾರಣ ತನಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

“ನಾನು ರೈಲು ಹತ್ತಿದ ತಕ್ಷಣ, ಬೇದಿ ಪ್ರಾರಂಭವಾಗಿತ್ತು. ಹಾಗಾಗಿ ನಾನು ನನ್ನ ಕುರ್ತಾ ಪೈಜಾಮಾವನ್ನು ತೆಗೆದು ಟವಲ್ ಅನ್ನು ನನ್ನ ಭುಜದ ಮೇಲೆ ಹಾಕಿಕೊಂಡೆ. ಅದನ್ನು ನನ್ನ ಸೊಂಟಕ್ಕೆ ಸುತ್ತಲು ನನಗೆ ಸಮಯವಿರಲಿಲ್ಲ. ಹಾಗಾಗಿ ನಾನು ಒಳ ಉಡುಪುಗಳನ್ನು ಮಾತ್ರ ಧರಿಸಿ ಓಡಾಡಿದ್ದೆ” ಎಂದು ಮಂಡಲ್ ಹೇಳಿದ್ದಾರೆ.

ಘಟನೆಯ ಬಗ್ಗೆ ರೈಲ್ವೆ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದರೂ, ಶಾಸಕರ ವಿರುದ್ಧ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ ಎಂದು ವರದಿಯಾಗಿದೆ. ಘಟನೆಯ ಸಮಯದಲ್ಲಿ ಕಂಪಾರ್ಟ್ಮೆಂಟ್‌‌‌ನಲ್ಲಿ ಮಹಿಳಾ ಪ್ರಯಾಣಿಕರು ಇರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಬಜೆಟ್ 2021-22: ಉಳ್ಳವರನ್ನು, ಉದ್ಯಮಪತಿಗಳನ್ನು, ವಾಣಿಜ್ಯೋದ್ಯಮಿಗಳನ್ನು ತಣಿಸಲು ಪ್ರಯತ್ನಿಸಿರುವ ವೈಭವದ ಮಾತಿನ ಬಜೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...