Homeಮುಖಪುಟಒಳಉಡುಪಿನಲ್ಲಿ ಓಡಾಡಿದ್ದನ್ನು ಆಕ್ಷೇಪಿಸಿದ ಸಹ ಪ್ರಯಾಣಿಕನ ಚಿನ್ನದ ಸರ ಕಸಿದ ಶಾಸಕ: ದೂರು ದಾಖಲು

ಒಳಉಡುಪಿನಲ್ಲಿ ಓಡಾಡಿದ್ದನ್ನು ಆಕ್ಷೇಪಿಸಿದ ಸಹ ಪ್ರಯಾಣಿಕನ ಚಿನ್ನದ ಸರ ಕಸಿದ ಶಾಸಕ: ದೂರು ದಾಖಲು

- Advertisement -
- Advertisement -

ಚಲಿಸುತ್ತಿರುವ ರೈಲಿನಲ್ಲಿ ಅರೆಬೆತ್ತಲೆಯಾಗಿ ಓಡಾಡಿ ಸುದ್ದಿಯಾಗಿದ್ದ ಜೆಡಿಯು ಶಾಸಕ ಗೋಪಾಲ್‌ ಮಂಡಲ್‌ ವಿರುದ್ದ, ಅವರ ಸಹ ಪ್ರಯಾಣಿಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೇವಲ ಒಳಉಡುಪಿನಲ್ಲಿ ನಡೆದಾಡಿರುವುದನ್ನು ಆಕ್ಷೇಪಿಸಿದ್ದ ಸಹ ಪ್ರಯಾಣಿಕನ ಜೊತೆಗೆ ಜೆಡಿಯು ಶಾಸಕ ಅನುಚಿತವಾಗಿ ವರ್ತಿಸಿದ್ದು ಮಾತ್ರವಲ್ಲದೆ, ಅವರ ಚಿನ್ನದ ಉಂಗುರ ಮತ್ತು ಸರವನ್ನು ಕಸಿದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಗುರುವಾರದಂದು ಬಿಹಾರ ಆಡಳಿತ ಪಕ್ಷವಾಗಿರುವ ಜೆಡಿಯುನ ಶಾಸಕರಾದ ನರೇಂದ್ರ ಕುಮಾರ್ ನೀರಜ್ ಅಲಿಯಾಸ್ ಗೋಪಾಲ್ ಮಂಡಲ್ ಅವರು ರೈಲಿನಲ್ಲಿ ಕೇವಲ ಒಳಉಡುಪಿನಲ್ಲಿ ಓಡಾಡಿರುವ ಘಟನೆ ಸುದ್ದಿಯಾಗಿತ್ತು. ಘಟನೆಯು ಕ್ಯಾಮಾರಾದಲ್ಲಿ ಸೆರೆಯಾಗಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕವಾಗಿ ಮುಜುಗರಕ್ಕೆ ಒಳಗಾಗುವಂತೆ ನಡೆದುಕೊಂಡ ಬಗ್ಗೆ ಅವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂಓದಿ: ಬಿಹಾರ: ರೈಲಿನೊಳಗೆ ಒಳಉಡುಪಿನಲ್ಲಿ ಓಡಾಡಿದ ಜೆಡಿಯು ಶಾಸಕ!

ಸಹ-ಪ್ರಯಾಣಿಕ ಪ್ರಹ್ಲಾದ್ ಪಾಸ್ವಾನ್ ಎಂಬವರು ಶಾಸಕನ ವಿರುದ್ದ ದೆಹಲಿಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಅವರು, “ಎಂಎಲ್‌ಎ ಅವರು ರೈಲಿನ ಕೋಚ್‌ನಲ್ಲಿ ಒಳ ಉಡುಪಿನಲ್ಲಿ ತಿರುಗಾಡುತ್ತಿದ್ದರು. ಈ ಸಮಯದಲ್ಲಿ ಅವರು ಮದ್ಯಪಾನ ಮಾಡಿದ್ದರು. ಇದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾಗ, ಎಂಎಲ್‌ಎ ನನ್ನ ಚಿನ್ನದ ಉಂಗುರ ಮತ್ತು ಸರವನ್ನು ಕಸಿದುಕೊಂಡು ನನ್ನೊಂದಿಗೆ ಅನುಚಿತವಾಗಿ ವರ್ತಿಸಿದರು” ಎಂದು ತಿಳಿಸಿದ್ದಾರೆ.

ಶಾಸಕರಾಗಿರುವ ಗೋಪಾಲ್‌ ಮಂಡಲ್ ಅವರು ಪಾಟ್ನಾದಿಂದ ದೆಹಲಿಗೆ ತೇಜಸ್ ರಾಜಧಾನಿ ಎಕ್ಸ್‌ಪ್ರೆಸ್‌ನ ಎ -1 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಪಾಟ್ನಾದಿಂದ ಹೊರಟ ತಕ್ಷಣ, ಅವರು ತನ್ನ ಒಳ ಉಡುಪುಗಳಲ್ಲಿ ತಿರುಗಾಡುತ್ತಿರುವುದು ಕಂಡುಬಂದಿದ್ದು, ಇದರ ವಿರುದ್ದ ಸಹ ಪ್ರಯಾಣಿಕರು ಪ್ರತಿಭಟಿಸಿದ ನಂತರವೂ, ಅವರು ಅದೇ ಉಡುಪಿನಲ್ಲಿ ಶೌಚಾಲಯದ ಕಡೆಗೆ ನಡೆಯುತ್ತಿದ್ದರು ಎಂದು ವರದಿಯಾಗಿದೆ.

ಆದರೆ ಶಾಸಕ ತನ್ನ ನಡೆಯನ್ನು ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. ರೈಲು ಹತ್ತಿದ ಕೆಲವೇ ನಿಮಿಷಗಳಲ್ಲಿ ತಾನು ಅನಾರೋಗ್ಯಕ್ಕೆ ಒಳಗಾದ ಕಾರಣ ತನಗೆ ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ.

“ನಾನು ರೈಲು ಹತ್ತಿದ ತಕ್ಷಣ, ಬೇದಿ ಪ್ರಾರಂಭವಾಗಿತ್ತು. ಹಾಗಾಗಿ ನಾನು ನನ್ನ ಕುರ್ತಾ ಪೈಜಾಮಾವನ್ನು ತೆಗೆದು ಟವಲ್ ಅನ್ನು ನನ್ನ ಭುಜದ ಮೇಲೆ ಹಾಕಿಕೊಂಡೆ. ಅದನ್ನು ನನ್ನ ಸೊಂಟಕ್ಕೆ ಸುತ್ತಲು ನನಗೆ ಸಮಯವಿರಲಿಲ್ಲ. ಹಾಗಾಗಿ ನಾನು ಒಳ ಉಡುಪುಗಳನ್ನು ಮಾತ್ರ ಧರಿಸಿ ಓಡಾಡಿದ್ದೆ” ಎಂದು ಮಂಡಲ್ ಹೇಳಿದ್ದಾರೆ.

ಇದನ್ನೂಓದಿ: ಬಲವಂತವಾಗಿ 68 ಹುಡುಗಿಯರ ಒಳವಸ್ತ್ರ ತೆಗೆಸಿ ಅವಮಾನ ಮಾಡಿದ ಪ್ರಾಂಶುಪಾಲೆ: ಗುಜರಾತಿನ ಕಾಲೇಜಿನಲ್ಲೊಂದು ಆಘಾತಕಾರಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...