ಮಕ್ಕಳಿಗೆ ಆಟವಾಡಲು ಯಾವ ವಸ್ತುಗಳನ್ನು ನೀಡುತ್ತೇವೆ ಎಂಬ ಬಗ್ಗೆ ಪೋಷಕರು ಆದಷ್ಟು ಜಾಗೃತೆ ವಹಿಸಿರಬೇಕು. ಸಣ್ಣ ಕಣ್ತಪ್ಪಿನಿಂದಲೂ ಪ್ರಾಣಕ್ಕೆ ಅಪಾಯವಾಗುವ ಘಟನಗಳು ಸಂಭವಿಸುತ್ತವೆ ಎಂಬುದಕ್ಕೆ ಉದಾಹರಣೆಯಾಗಿ ಮೈಸೂರಿನಲ್ಲೊಂದು ಮನಕಲಕುವ ಘಟನೆ ನಡೆದಿದೆ.
ನಾಲ್ಕು ವರ್ಷದ ಹೆಣ್ಣು ಮಗುವೊಂದು 5 ರೂಪಾಯಿ ನಾಣ್ಯದಿಂದಾಗಿ ದುರಂತ ಸಾವನ್ನಪ್ಪಿದ ಘಟನೆ ಮೈಸೂರಿನ ಹುಣಸೂರು ತಾಲೂಕಿನ ಆಯರಹಳ್ಳಿಯಲ್ಲಿ ನಡೆದಿದೆ.
ಐದು ರೂಪಾಯಿ ನಾಣ್ಯವನ್ನು ನುಂಗಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಹೃದಯಾವಿದ್ರಾವಕ ಘಟನೆ ನಡೆದಿದೆ. ತನ್ನ ಅಜ್ಜಿಯ ಮನೆಯಲ್ಲಿ ಆಟವಾಡುತ್ತಿದ್ದ ಖುಷಿ ಎಂಬಾ ಪುಟ್ಟ ಮಗು ಆಕಸ್ಮಿಕವಾಗಿ 5 ರೂಪಾಯಿ ನಾಣ್ಯವನ್ನು ಬಾಯಿಗೆ ಹಾಕಿಕೊಂಡಿದೆ.
ಇದನ್ನೂ ಓದಿ: ಗೌರಿ ಲಂಕೇಶ್ ದಿನ: ಗೌರಿಯನ್ನು ನೆನೆಯುತ್ತಾ…ಸಾವಿರಾರು ಗೌರಿಯರ ಮಾತುಗಳು…
ತಕ್ಷಣ ಎಚ್ಚೆತ್ತುಕೊಂಡ ಕುಟುಂಬಸ್ಥರು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ನಾಣ್ಯವನ್ನು ಹೊರ ತೆಗೆಯಲು ಸಾಧ್ಯವಾಗಿಲ್ಲ.
ಬಳಿಕ ಭಯಗೊಂಡ ಕುಟುಂಬಸ್ಥರು ಗಾಬರಿಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನು ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಸಾವನ್ನಪ್ಪಿದೆ. ಮಗುವಿನ ಸಾವಿನ ಸುದ್ದಿಯಿಂದ ಹೆತ್ತವರ ಆಕ್ರಂದ ಮುಗಿಲು ಮುಟ್ಟಿದೆ.
ಇದನ್ನೂ ಓದಿ: ಗೌರಿ ಲಂಕೇಶ್ ದಿನ: ’ಗೌರಿ ನೆನಹು’ ಕಾರ್ಯಕ್ರಮದ ಚಿತ್ರಗಳು


