ರಾಜ್ಯದ ಪ್ರಮುಖ ಮೂರು ಮಹಾನಗರ ಪಾಲಿಕೆ ಚುನಾವಣೆಗಳ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಅಧಿಕಾರ ಹಿಡಿಯುವ ಸಾಧ್ಯತೆ ಇದೆ. ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.
ಬೆಳಗಾವಿ ಪಾಲಿಕೆಯ ಒಟ್ಟು 58 ವಾರ್ಡ್‌ಗಳಿಗೆ ಚುನಾವಣೆ ನಡೆದಿತ್ತು. 35 ಸ್ಥಾನ ಗಳಿಸಿರುವ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.
ಒಟ್ಟು 58 ವಾರ್ಡ್‌ಗಳು
ಬಿಜೆಪಿ – 35
ಕಾಂಗ್ರೆಸ್ – 10
ಪಕ್ಷೇತರ 10
ಎಂಇಎಸ್ 2
ಎಐಎಂಐಎಂ 1
ಜೆಡಿಎಸ್ ಒಂದು ಸ್ಥಾನವನ್ನು ಗೆಲ್ಲುವಲ್ಲಿ ವಿಫಲವಾಗಿದ್ದು, ಶೂನ್ಯ ಸಾಧನೆ ಮಾಡಿದೆ. ಓವೈಸಿ ಅವರ ಎಐಎಂಐಎಂ ಒಂದು ಸ್ಥಾನ ತನ್ನದಾಗಿಸಿಕೊಂಡಿದೆ.
ಹುಬ್ಬಳ್ಳಿ-ಧಾರವಾಡ ಪಾಲಿಕೆಯ 82 ಸ್ಥಾನಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಧಿಕಾರ ಹಿಡಿಯುವುದು ಖಚಿತವಾಗಿದೆ.
ಒಟ್ಟು 82 ಸ್ಥಾನಗಳು
ಬಿಜೆಪಿ – 39
ಕಾಂಗ್ರೆಸ್ – 33
ಜೆಡಿಎಸ್ – 01
ಪಕ್ಷೇತರರು – 06
ಎಐಎಂಐಎಂ – 03
ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸ್ವತಂತ್ರರ ಬೆಂಬಲ ಪಡೆದು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.
ಇದನ್ನೂ ಓದಿ: ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜಯಭೇರಿ, ಎರಡನೇ ಸ್ಥಾನದಲ್ಲಿ ಬಿಜೆಪಿ
ಕಲಬುರಗಿ ಮಹಾನಗರ ಪಾಲಿಕೆಯ ಒಟ್ಟು 55 ವಾರ್ಡ್‌ಗಳಲ್ಲಿ 27 ಸ್ಥಾನಗಳನ್ನು ಪಡೆದು ಕಾಂಗ್ರೆಸ್ ಅಧಿಕಾರ ಪಡೆಯಲು ಸಿದ್ಧವಾಗಿದೆ. ಆದರೆ, ಬಿಜೆಪಿ ಕೂಡ ಅಧಿಕಾರ ಪಡೆಯಲು ಹವಣಿಸುತ್ತಿದೆ.
ಒಟ್ಟು 55 ವಾರ್ಡ್‌ಗಳು
ಕಾಂಗ್ರೆಸ್ – 27
ಬಿಜೆಪಿ – 23
ಜೆಡಿಎಸ್ – 04
ಇತರರು – 01
ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸ್ವತಂತ್ರರ ಬೆಂಬಲ ಪಡೆದು ಅಧಿಕಾರ ಹಿಡಿಯುವ ಸಾಧ್ಯತೆ ಇದೆ.
ಇತ್ತ ತರೀಕೆರೆ ಪುರಸಭೆಯ ಒಟ್ಟು 23 ವಾರ್ಡ್‌ಗಳ ಪೈಕಿ 22 ವಾರ್ಡುಗಳಿಗೆ ಚುನಾವಣೆ ನಡೆದಿತ್ತು. 1 ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದರು.
ಚುನಾವಣೆ ನಡೆದ 22 ವಾರ್ಡ್‌ಗಳಲ್ಲಿ 15 ವಾರ್ಡ್‌ಗಳನ್ನು ಗೆದ್ದಿರುವ ಕಾಂಗ್ರೆಸ್, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಉಳಿದಂತೆ 07 ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಇಲ್ಲೂ ಕಾಣೆಯಾಗಿದೆ.
ಇದನ್ನೂ ಓದಿ: ತರೀಕೆರೆ ಪುರಸಭೆ ಚುನಾವಣೆ: ಕಾಂಗ್ರೆಸ್‌ಗೆ ಭರ್ಜರಿ ಜಯ, ಒಂದು ಸ್ಥಾನಕ್ಕೆ ತೃಪ್ತಿ ಪಟ್ಟ ಬಿಜೆಪಿ


