HomeUncategorizedಶಿವಮೊಗ್ಗ: ನಾಯಿಗಳ ಮಾರಣ ಹೋಮ, ಗ್ರಾಪಂ ಮೇಲೆ ಪ್ರಕರಣ ದಾಖಲು

ಶಿವಮೊಗ್ಗ: ನಾಯಿಗಳ ಮಾರಣ ಹೋಮ, ಗ್ರಾಪಂ ಮೇಲೆ ಪ್ರಕರಣ ದಾಖಲು

- Advertisement -
- Advertisement -

ಬೀದಿನಾಯಿಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲೆಯ ಕಂಬದಾಳ ಹೊಸೂರು ಗ್ರಾಮ ಪಂಚಾಯಿತಿ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕಂಬದಾಳು ಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಡಜನ್ ಗಟ್ಟಲೆ ನಾಯಿಗಳ ಮೃತದೇಹ ಪತ್ತೆಯಾಗಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗಿದೆ. ಎಷ್ಟು ನಾಯಿಗಳು ಸತ್ತಿವೆ ಎಂಬ ಖಚಿತತೆ ಇಲ್ಲ. ದಿ ಹಿಂದೂ ಪತ್ರಿಕೆ 100 ನಾಯಿಗಳು ಸತ್ತಿವೆ ಎಂದು ವರದಿ ಮಾಡಿದ್ದರೆ, ಎನ್.ಡಿ.ಟಿ.ವಿ. 40 ನಾಯಿಗಳು ಸತ್ತಿವೆ ಎಂದಿದೆ.

ಪ್ರಾಣಿ ಹಕ್ಕುಗಳ ಹೋರಾಟಗಾರರು ಮಂಗಳವಾರ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಲಾಗಿದೆ. ನಾಯಿಗಳು ನಾಪತ್ತೆಯಾಗಿದ್ದು, ಕೆಲವು ದಿನಗಳಿಂದ ಅವುಗಳ ಕೂಗು ಕೇಳಿಸುತ್ತಿಲ್ಲ ಎಂದು ಸ್ಥಳೀಯರು ದೂರು ನೀಡಿದ ಹಿನ್ನೆಲೆಯಲ್ಲಿ ಹೋರಾಟಗಾರರು ಹುಡುಕಾಟ ನಡೆಸಿದ್ದರು.

ಗ್ರಾಮ ಪಂಚಾಯಿತಿಯ ಆದೇಶದ ಮೇರೆಗೆ ನಾಯಿಗಳನ್ನು ಕೊಲ್ಲಲಾಗಿದೆ ಎಂದು ದೂರು ನೀಡಲಾಗಿದೆ. ಪಶುವೈದ್ಯರ ತಂಡ ಪರಿಶೀಲನೆ ನಡೆಸುತ್ತಿದ್ದು, ಸಾವಿನ ಕಾರಣಗಳು ತಿಳಿದುಬರಲಿವೆ. ವರದಿಯ ಆಧಾರದಲ್ಲಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಪ್ರಸಾದ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಮಳೆ ಬಂದರೆ  ಹಂದಿಗಳೂ ಬರುತ್ತವೆ: ಕಾಡು ಹಂದಿಗಳ ಗೂಟಾಟ

ನಾಯಿಗಳ ಸಂತಾಹ ಹರಣಕ್ಕೆ ಗ್ರಾಮ ಪಂಚಾಯಿತಿ ಗುತ್ತಿಗೆ ನೀಡಿದೆ. ಗುತ್ತಿಗೆದಾರರು ನಾಯಿಗಳನ್ನು ಕೊಂದಿರಬಹುದು. ಗುತ್ತಿಗೆದಾರರು 30ರಿಂದ 40 ನಾಯಿಗಳನ್ನು ಕೊಂದಿದ್ದಾರೆ. ಈ ಕೃತ್ಯದಲ್ಲಿ ಗ್ರಾಮ ಪಂಚಾಯಿತಿಯ ಕೆಲವು ಸದಸ್ಯರೂ ಭಾಗಿಯಾಗಿದ್ದಾರೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಶಿವಮೊಗ್ಗ ಪ್ರಾಣಿ ರಕ್ಷಣಾ ಕ್ಲಬ್ ಕಾರ್ಯಕರ್ತ ಜಿ.ಎಸ್.ಬಸವ ಪ್ರಸಾದ್, “ಸಂತಾನಹರಣ ಕ್ರಮಗಳ ಕುರಿತು ಗ್ರಾಮ ಪಂಚಾಯಿತಿ ಸದಸ್ಯರು ಮುಂಜಾಗ್ರತೆ ವಹಿಸಿಲ್ಲ. ನಾಯಿಗಳನ್ನು ಹಿಡಿದು ಅವರು ಸುಟ್ಟು ಹಾಕಿದಂತೆ ಕಾಣುತ್ತಿದೆ” ಎಂದು ಆರೋಪಿಸಿದ್ದಾರೆ.

“ನಾಯಿಗಳನ್ನು ಕೊಲ್ಲಲು ಯಾವುದೇ ಆದೇಶ ನೀಡಿಲ್ಲ” ಎಂದು ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಪ್ರತಿಕ್ರಿಯೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...